ಗದಗ | ಡಿ.27ರಂದು ಸಂವಿಧಾನದ ಉಳಿವಿಗಾಗಿ ಜಾಗೃತಿ ಸಮಾವೇಶ ಸಭೆ

Date:

ಸಂವಿಧಾನದ ಉಳಿವಿಗಾಗಿ ನಾವು ಕಟಿ ಬದ್ದರಾಗಬೇಕು. ಹಾಗೂ ಸಂಘಟಿತರಾಗುವುದು ಅವಶ್ಯವಿದೆ. ಸರ್ಕಾರಗಳು ತಪ್ಪು ಮಾಡಿದಾಗ ದಲಿತಪರ ಸಂಘಟನೆಗಳು ಎಚ್ಚರಿಕೆ ನೀಡುತ್ತಾ ಬಂದಿದ್ದು, ಈಗಲೂ ಆ ಕೆಲಸಗಳು ನಡೆಯುತ್ತಿವೆ ಎಂದು ಡಿಎಸ್ಎಸ್ ಗದಗ ಜಿಲ್ಲಾ ಪ್ರಧಾನ ಸಂಚಾಲಕ ಬಾಲರಾಜ್ ಅರಬರ್‌ ಹೇಳಿದರು.

ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕಾರ್ಯಕರ್ತರು ಹಮ್ಮಿಕೊಂಡಿದ್ದ ʼಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವ ಉಳಿವಿಗಾಗಿʼ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

“ಸಂವಿಧಾನ ಬದಲಾಯಿಸುವುದಕ್ಕೆ ನಾವು ಬಂದಿದ್ದೇವೆಂದು ಹೇಳುತ್ತಿರುವವರಿಗೆ ಸಂವಿಧಾನ ರಕ್ಷಣೆಗೆ ಬದ್ದರಾಗಿದ್ದೇವೆಂದು ನಾವೂ ಕೂಡ ಅವರಿಗೆ ಪ್ರತ್ಯುತ್ತರ ಕೊಡಬೇಕಿದೆ. ಹಾಗಾಗಿ ಡಿಎಸ್ಎಸ್ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಕರೆಯ ಮೇರೆಗೆ ಗದಗ ಜಿಲ್ಲೆಯಲ್ಲಿ ಇದೇ 27ರಂದು ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಎಲ್ಲ ದಲಿತಪರ ಮುಖಂಡರು, ಸಂಘಟಕರು ಹಾಗೂ ದಲಿತ ಸಮುದಾಯದವರು ಭಾಗವಹಿಸಬೇಕು” ಎಂದು ಕರೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಲಿತಪರ ಮುಖಂಡ ಶರೀಫ್ ಬಿಳಿಯಲಿ ಮಾತನಾಡಿ, “ಸಂವಿಧಾನ ಒಂದು ಜಾತಿಗೆ ಸಿಮೀತವಾಗಿಲ್ಲ. ಎಲ್ಲ ಸಮುದಾಯಗಳನ್ನು ಒಳಗೊಂಡಿರುವಂತದ್ದು, ಹಾಗಾಗಿ ಈ ಸಮಾವೇಶದಲ್ಲಿ ಎಲ್ಲ ಸಮುದಾಯದ ಮುಖಂಡರೂ ಭಾಗವಹಿಸುವಂತೆ ಮಾಡವುದು ಅವಶ್ಯಕತೆ ಇದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಘನತೆ, ಗೌರವದ ಬದುಕಿಗೆ ಮಾನವ ಹಕ್ಕುಗಳು ಅವಶ್ಯಕ : ಮೌಲಾನಾ ಹಾಮೆದ್ ಖಾನ್

ಈ ಸಭೆಯಲ್ಲಿ ಡಿಎಸ್ಎಸ್ ಜಿಲ್ಲಾ ಉಪ ಪ್ರಧಾನ ಸಂಚಾಲಕ ನಾಗರಾಜ ಗೋಕಾವಿ, ಚಲವಾದಿ ಮಹಾಸಭಾ ಜಿಲ್ಲಾ ಅಧ್ಯಕ್ಷ ಆನಂದ ಸಿಂಗಾಡಿ, ಮುತ್ತು ಬಿಳಿಯಲಿ, ಪರಶು ಕಾಳೆ, ಕೆಂಚಪ್ಪ ಮ್ಯಾಗೇರಿ, ಗಣೇಶ ಹುಬ್ಬಳ್ಳಿ, ಮುತ್ತಣ್ಣ ಚೌಡಣ್ಣವರ ಹಾಗೂ ಇನ್ನೂ ಅನೇಕ ದಲಿತ ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬೆದ್ರಕಟ್ಟೆಯ ಜನತಾ ಕಾಲೋನಿಗೆ ಗೀತಾ ಶಿವರಾಜ್‌ಕುಮಾರ್ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ‌ಶಿವಮೊಗ್ಗ...

ಕಲಬುರಗಿ | ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ಗ್ರಾಜುಯೇಷನ್ ಡೇ ಕಾರ್ಯಕ್ರಮ

ಕಲಬುರಗಿ ಜಿಲ್ಲೆ ಶಹಾಪುರ ತಾಲೂಕಿನ ಹೋತಪೇಟೆ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ...

ಹಾವೇರಿ | ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಎಫ್‌ಐ ಒತ್ತಾಯ 

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾ ಎಂಬುವವರ ಹತ್ಯೆ ವಿರೋಧಿಸಿ, ತಪ್ಪಿತಸ್ಥ...

ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

ರಾಜ್ಯದಲ್ಲಿ ಒಟ್ಟು ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ 2024ರ ಈ ಬಾರಿಯ...