ಗದಗ | ಬಗರ್ ಹುಕ್ಕುಂ ಸಾಗುವಳಿದಾರ ರೈತರಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Date:

“ಸುಮಾರು 16 ಹಳ್ಳಿಗಳಲ್ಲಿ ಬಗರ್ ಹುಕ್ಕುಂ  ಸಾಗುವಳಿದಾರರು ‌ಸುಮಾರು ವರ್ಷಗಳಿಂದ ಹಕ್ಕು ಪತ್ರ ವಿತರಣೆ ಮಾಡಲು ಹಾಗೂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಲು ಒತ್ತಾಯಿಸಿ ಸಾಕಷ್ಟು ಬಾರಿ ಹೋರಾಟ ಮಾಡಿ ತಹಶಿಲ್ದಾರರಿಗೆ ಹಾಗೂ ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನೆ ಆಗಿಲ್ಲ” ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ತಹಶಿಲ್ದಾರ ಕಛೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘದ ನೇತ್ರತ್ವದಲ್ಲಿ ಬಗರ್ ಹುಕುಂ ಹಕ್ಕುಪತ್ರ ಹಾಗೂ ಸಾಗುವಳಿ ರೈತರಿಗೆ ಸಾಗುವಳಿ ಚೀಟಿ ನೀಡುವಂತೆ ರೈತರು ಅನಿರ್ದಿಷ್ಟಾವಧಿ ಹಗಲು ರಾತ್ರಿ ಹೋರಾಟ ಹಮ್ಮಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಪ್ರತಿಭಟನೆಯನ್ನು ಉದ್ಘಾಟಕರಾಗಿ ಎಸ್ ಎಫ್ ಐ ರಾಜ್ಯ ಉಪಾಧ್ಯಕ್ಷರು ಗಣೇಶ ರಾಠೋಡ ಮಾತನಾಡಿ, “ರೈತರು ಸುಮಾರು ವರ್ಷಗಳಿಂದ ಗಜೇಂದ್ರಗಡ ಸುತ್ತ ಮುತ್ತ ಗುಡ್ಡದಲ್ಲಿ ರೈತರು ಉಳುಮೆ ಮಾಡುತ್ತಾ ತಮ್ಮ ಜೀವನ ನಡೆಸುತ್ತಿದ್ದಾರೆ ಆದರೆ ಸರ್ಕಾರ ಅವುಗಳನ್ನು ಗಣನೆಗೆ ತೆಗೆದುಕೊಂಡು ರೈತರಿಗೆ ಹಕ್ಕು ಪತ್ರ, ಸಾಗುವಳಿ ಚೀಟಿ ನೀಡಲು ನೀರಾಕರಿಸುತ್ತಿರುವುದು ಸರಿಯಾದ ಕ್ರಮವಲ್ಲ ಇದನ್ನು ವಿದ್ಯಾರ್ಥಿ ಸಂಘಟನೆ ಖಂಡಿಸುತ್ತದೆ. ಆದ್ದರಿಂದ ಮಾನ್ಯ ಅಧಿಕಾರಿಗಳು ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

 ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರು ಪೀರು ರಾಠೋಡ ಮಾತನಾಡಿ, “ಮಾನ್ಯ ಶಾಸಕರಿಗೆ ಜಿಲ್ಲಾಧಿಕಾರಿಗಳಿಗೆ ತಹಶಿಲ್ದಾರಿಗೆ ರೈತರ ಮೇಲೆ ಕಾಳಜಿ ಇದ್ದಿದ್ದರೆ ರೈತರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುತ್ತಿದ್ದರು. ಆದರೆ ಅವರಿಗೆ ಕಾಳಜಿ ಇರುವುದು ಕಾಳಸಂತೆ ಕೋರರಿಗೆ ಬಗರ್ ಹುಕ್ಕುಂ ರೈತರಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಾರೆ. ಸಾಗುವಳಿ ಚೀಟಿ ಕೋಡುತ್ತಾರೆ. ಆದರೆ ಇನ್ನೂ ಊಳಿದ ರೈತರಿಗೆ ಯಾಕೆ ನೀಡುತ್ತಿಲ್ಲ? ಕೆಲವರ ಲಾಬಿಗಾಗಿ ಕೆಲಸ ಮಾಡಿ ರೈತರಿಗೆ ದ್ರೋಹವೆಸಗುತ್ತಿರುವ ರೈತರು ನಾಳೆ ದಿನ ತಹಶಿಲ್ದಾರ ಕಛೇರಿ ಬಂದ್ ಮಾಡಿ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ರೂಪೇಶ್ ಮಾಳೋತ್ತರ, ಪೀರು ರಾಠೋಡ, ಚಂದ್ರು ರಾಠೋಡ, ಚನ್ನಪ್ಪ ಗೂಗಲೋತ್ತರ, ಗಣೇಶ ರಾಠೋಡ, ಮೆಹಬೂಬ ಹವಾಲ್ದಾರ, ಅನಿಲ್ ಆರ್, ಬಾಲು ರಾಠೋಡ, ಶಿವಪ್ಪ ಮಾಳೋತ್ತರ, ಲೋಕಪ್ಪ ಕಾಳಪ್ಪ ರಾಠೋಡ, ಈರಪ್ಪ ಕಾಳಪ್ಪ ರಾಠೋಡ , ವೀರಭದ್ರಪ್ಪ ಮಾಳೋತ್ತರ, ರತ್ನಪ್ಪ ಮಾಳೋತ್ತರ, ಲೋಕಪ್ಪ ರಾಠೋಡ, ಮಾರುತಿ ರಾಠೋಡ, ಚಂದ್ರು ಅಜ್ಮೀರ್ ಶಿವವ್ವ, ದೇವಕ್ಕ, ಶಾವವ್ವ ನೂರಾರು ರೈತರು ವಿದ್ಯಾರ್ಥಿಗಳು ಯುವಕರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯಾರ್ಥಿ ಮೇಲೆ ಹಲ್ಲೆ: 6 ಶಿಕ್ಷಕರ ವಿರುದ್ಧ ಪ್ರಕರಣ ದಾಖಲು

ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ರಾಜ್ ಶಾಲೆಯಲ್ಲಿ 10 ವರ್ಷದ ವಿದ್ಯಾರ್ಥಿಯ...

ವಿಜಯಪುರ |ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ...

ವಿಜಯಪುರ |ಸಂವಿಧಾನದ ಕುರಿತು ವಿವೇಚನಾರಹಿತ ಹೇಳಿಕೆ: ಕನೇರಿ ಸ್ವಾಮೀಜಿ ಕ್ಷಮೆಯಾಚಿಸಲಿ

ಸಂವಿಧಾನದ ಕುರಿತು ಅಧ್ಯಯನ ಮಾಡದೆ ವಿವೇಚನಾರಹಿತ ಹಾಗೂ ಅತಿರೇಕದ ಹೇಳಿಕೆ ನೀಡಿರುವ...

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...