ಎಸ್ ಎಸ್ ಎಲ್ ಸಿ ವಿಜ್ಞಾನ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿ ಪಲ್ಲವಿ ಹಳ್ಳಿಕೇರಿ ಅವರನ್ನು ಬಿಇಒ ಕರೆತಂದು ಪರೀಕ್ಷೆ ಬರೆಯಿಸಿದ್ದಾರೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ವಿದ್ಯಾರ್ಥಿನಿ ಪಲ್ಲವಿ ಹಳ್ಳಿಕೇರಿ ಮುಂಡರಗಿ ತಾಲೂಕಿನ ಬರದೂರು ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದರು.
ವಿದ್ಯಾರ್ಥಿನಿ ಪಲ್ಲವಿ ಹಳ್ಳಿಕೇರಿ ಅವರು ಮಾರ್ಚ್ 18ರಂದು ನಡೆದ ಕನ್ನಡ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಸೋಮವಾರದ ವಿಜ್ಞಾನ ಪರೀಕ್ಷೆಗೆ ಹಾಜರಾಗದೆ ದ್ರಾಕ್ಷಿ ತೋಟಕ್ಕೆ ಕೆಲಸಕ್ಕೆ ಹೋಗಿದ್ದರು. ಅಪ್ಪನ ಅನಾರೋಗ್ಯ ಹಾಗೂ ಮನೆಯಲ್ಲಿ ಬಡತನ ಇರುವುದರಿಂದ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿಯನ್ನು ಬಿಇಒ ಗಂಗಾಧರ ಅಣ್ಣಿಗೇರಿ ಮನವೊಲಿಸಿ ಪರೀಕ್ಷೆ ಬರೆಯಿಸಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




