ಗದಗ | ಅಕ್ರಮವಾಗಿ ಮರಳು ಸಾಗಾಟ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಭೀಮ ಶಕ್ತಿ ಸಂಘಟನೆ ಆಗ್ರಹ

Date:

ಗದಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯು ರಾಜಾರೋಷವಾಗಿ ನಡೆಯುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಭೀಮ ಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷ ಅಣ್ಣಪ್ಪ ಗುತ್ತೆಮ್ಮನವರ ನೇತೃತ್ವದೊಂದಿಗೆ ಲಕ್ಷ್ಮೇಶ್ವರ ತಾಲೂಕು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

“ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳ ಹಲವಾರು ಗ್ರಾಮಗಳಲ್ಲಿ ಹರಿಯುವ ಹಳ್ಳದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕಾನೂನುಬಾಹಿರವಾಗಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ನಡೆಯುತ್ತಿದೆ. ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿರುವ ವಾಹನಗಳು ಬಹಳಷ್ಟು ವೇಗವಾಗಿ, ಕರ್ಕಶ ಶಬ್ದಗಳಿಂದ ಕೂಡಿದ ಧ್ವನಿವರ್ಧಕಗಳನ್ನು ಬಳಸುವುದರಿಂದ ವಿದ್ಯಾರ್ಥಿಗಳಿಗೆ ಮತ್ತು ವಯಸ್ಕರಿಗೆ ಓಡಾಡಲು ಒಂದು ರೀತಿಯಲ್ಲಿ ತೊಂದರೆ ಉಂಟಾಗುತ್ತಿದೆ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

“ಈ ಕುರಿತು ಜಿಲ್ಲೆಯ ಬಹಳಷ್ಟು ಸಂಘಟನೆಗಳು ಮನವಿ ಪತ್ರವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಿದರೂ ಅದಕ್ಕೆ ಸರಿಯಾಗಿ ಸ್ಪಂದನೆ ನೀಡಿಲ್ಲ. ಅದಕ್ಕೆ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಂಡಿರುವುದಿಲ್ಲ. ಕೆಲವು ಟಿಪ್ಪರ್ ಮತ್ತು ಇತರೆ ಲಾರಿಗಳು ಬೇರೆ ತಾಲೂಕುಗಳಿಗೆ ನೀಡಲಾಗಿರುವ ಪಾಸ್‌ಗಳನ್ನು ದುರುಪಯೋಗಪಡಿಸಿಕೊಂಡು ಒಂದೇ ಪಾಸ್‌ನಲ್ಲಿ ನಾಲ್ಕೈದು ಟ್ರಿಪ್‌ಗಳಷ್ಟು ಅಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿವೆ” ಎಂದು ಗದಗ ಜಿಲ್ಲಾಧ್ಯಕ್ಷ ಅಣ್ಣಪ್ಪ ಗುತ್ತೆಮ್ಮನವರ ಆರೋಪಿಸಿದರು.

“ಜಿಪಿಎಸ್ ವ್ಯವಸ್ಥೆ ಇದ್ದರೂ ಅದನ್ನು ಬಂದ್ ಮಾಡಿ ಮರಳು ಗುತ್ತಿಗೆದಾರರು ಮತ್ತು ಕೆಲ ಭ್ರಷ್ಟ ಅಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸಕ್ರಮದ ಹೆಸರಿನಲ್ಲಿ ಅಕ್ರಮ ದಂಧೆ ನಡೆಯುತ್ತಿದ್ದಾರೆ” ಎಂದು ದೂರಿದರು.

“ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಕೆಲ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮರಳು ದಂಧೆಕೋರರಿಂದ ತಿಂಗಳ ಪ್ರಸಾದ ಪಡೆದು ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಸಾರ್ವಜನಿಕರ ಗಂಭೀರ ಆರೋಪಗಳಿವೆ. ಇದರಿಂದ ಅಕ್ರಮ ಮರಳು ದಂಧೆ ಮತ್ತಷ್ಟು ಹೆಚ್ಚುತ್ತಿದ್ದು, ಸರ್ಕಾರದ ಆದಾಯ ಲೂಟಿಯಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತಾಳಿಕೋಟಿ | ಆ.10ರಂದು ಬರ ಪರಿಹಾರಕ್ಕಾಗಿ ಬೃಹತ್ ‘ರಸ್ತಾ ರೋಕೋ’ ಚಳವಳಿ

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತಪ್ಪ ಮ್ಯಾಗೇರಿ ಮಾತನಾಡಿ, “ತಾಲೂಕಿನಲ್ಲಿ ನಡೆಯುತ್ತಿರುವ ಮರಳು ದಂಧೆಗೆ ಕೆಲ ಅಧಿಕಾರಿಗಳೇ ನೇರ ಬೆಂಬಲ ನೀಡುತ್ತಿದ್ದಾರೆ. ಸರ್ಕಾರದ ಕಾನೂನುಗಳನ್ನು ಗಾಳಿಗೆ ತೂರಿ ಹಗಲು ರಾತ್ರಿ ಅಕ್ರಮ ಸಾಗಾಟ ನಡೆಯುತ್ತಿದೆ. ಜಿಲ್ಲಾಡಳಿತ ಒಂದು ವಾರದೊಳಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ, ಭೀಮ್ ಶಕ್ತಿ ಸಂಘಟನೆ ವತಿಯಿಂದ ತೀವ್ರ ಹೋರಾಟ ರಸ್ತೆ ತಡೆ ಹಾಗೂ ಕಚೇರಿ ಮುತ್ತಿಗೆ ಹಮ್ಮಿಕೊಳ್ಳಲಾಗುವುದು” ಎಂದು ಸರ್ಕಾರ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮನವಿ ಸಂದರ್ಭದಲ್ಲಿ ಗೌತಮ್ ಹಳ್ಳಿಮ್ಮನವರ, ರಾಜು, ಆನಂದ, ದುರಗಪ್ಪ ವರದಿ, ಹೋನಪ್ಪ ಮರೆಯಪ್ಪ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ‘SIR ಪರಿಶೋಧನೆ–ಪ್ರತಿರೋಧ ಪ್ರವಾಸ’ಕ್ಕೆ ಚಾಲನೆ: ಮತದಾನದ ಹಕ್ಕು ರಕ್ಷಣೆಗೆ ಜನಪರ ಹೋರಾಟ

ಮುಂಡಗೋಡ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು...

ಶೀಘ್ರದಲ್ಲೇ ನಂದಿನಿ ಹಾಲು, ಬಸ್ ಪ್ರಯಾಣ ದರ ಹೆಚ್ಚಳ

ರಾಜ್ಯದ ಜನತೆಗೆ ಶೀಘ್ರದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ....

ಕೇಂದ್ರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ: ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರವು ಉದ್ಯಮಿಗಳ ಲಕ್ಷಾಂತರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದಂತೆ,...

ಹಾವೇರಿ | ಹತ್ತು ತಾಸು ವಿದ್ಯುತ್ ಕೊಡಲು ರೈತ ಸಂಘ ಮನವಿ

ಬೊಮ್ಮನಹಳ್ಳಿ ಗ್ರೀಡ್ ನಿಂದ ರೈತರ ಬೋರ್ ವೆಲ್ ಪಂಪ್ಲೆಟ್ಟುಗಳಿಗೆ ಸರಿಯಾಗಿ ವಿದ್ಯುತ್...