ಗದಗ | ಜಾಗತಿಕ ತಂತ್ರಜ್ಞಾನದ ಸ್ಪರ್ಧೆಗೆ ವಿದ್ಯಾರ್ಥಿಗಳು ಸಜ್ಜಾಗಲು ಕರೆ: ಡಾ. ಅರುಣಕುಮಾರ

Date:

“ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಮೆಷಿನ್ ಲರ್ನಿಂಗ್ (ಎಂಎಲ್) ತಂತ್ರಜ್ಞಾನಗಳು ಪ್ರತಿಯೊಂದು ಕ್ಷೇತ್ರದಲ್ಲೂ ಮಹತ್ವದ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಇಂತಹ ಹೊಸ ತಂತ್ರಜ್ಞಾನಗಳನ್ನು ಕಲಿಯುವುದು ಅತ್ಯಗತ್ಯವಾಗಿದ್ದು, ಜಾಗತಿಕ ತಂತ್ರಜ್ಞಾನದ ಸ್ಪರ್ಧೆಗೆ ವಿದ್ಯಾರ್ಥಿಗಳು ಸಜ್ಜಾಗಬೇಕು” ಎಂದು ಹುಲಕೋಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಅರುಣಕುಮಾರ ಹೇಳಿದರು.

- Advertisement -

ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಐಕ್ಯೂಎಸಿ ಹಾಗೂ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ವತಿಯಿಂದ  ‘ಮೆಷಿನ್ ಲರ್ನಿಂಗ್ ಆಲ್ಗಾರಿದಮ್‌ಗಳ ಅನ್ವೇಷಣೆʼ ಬಗ್ಗೆ ಗುರುವಾರ ಆಯೋಜನೆ ಮಾಡಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

“ಮಾನವರು ತಮ್ಮ ಬುದ್ಧಿಶಕ್ತಿ ಬಳಸಿ ಮಾಡುವ ಕಲಿಕೆ, ಸಮಸ್ಯೆ ಪರಿಹಾರ, ನಿರ್ಧಾರ ಕೈಗೊಳ್ಳುವಿಕೆ ಹಾಗೂ ಭಾಷೆ ಅರ್ಥೈಸುವಿಕೆಯಂತಹ ಸಾಮರ್ಥ್ಯಗಳನ್ನು ಕಂಪ್ಯೂಟರ್ ಪ್ರೋಗ್ರಾಂಗಳ ಮೂಲಕ ಪೂರೈಸುವುದೇ ಕೃತಕ ಬುದ್ಧಿಮತ್ತೆ. ಇದು ದೈನಂದಿನ ಜೀವನದ ಭಾಗವಾಗಿದ್ದು, ಜನರ ಶ್ರಮ ಮತ್ತು ಸಮಯವನ್ನು ಉಳಿಸುತ್ತದೆ ಎಂದರು. ಮೆಷಿನ್ ಲರ್ನಿಂಗ್‌ನ ಮೂಲಭೂತ ತತ್ವಗಳು, ಸೂಪರ್‌ವೈಸ್ಡ್ ಮತ್ತು ಅನ್‌ಸೂಪರ್‌ವೈಸ್ಡ್ ಲರ್ನಿಂಗ್, ಡಾಟಾ ವಿಶ್ಲೇಷಣೆ ಹಾಗೂ ಆಲ್ಗಾರಿದಮ್‌ಗಳು ದಿನನಿತ್ಯದ ಜೀವನದಲ್ಲಿ ಹೇಗೆ ಬಳಕೆಯಾಗುತ್ತಿವೆ ಎಂಬುದನ್ನು ವಿವರಿಸಿದರು. ಆರೋಗ್ಯ ಕ್ಷೇತ್ರ, ಕೃಷಿ, ಹಣಕಾಸು ಹಾಗೂ ರೊಬೊಟಿಕ್ಸ್ ಕ್ಷೇತ್ರಗಳಲ್ಲಿ ಮೆಷಿನ್ ಲರ್ನಿಂಗ್ ಉಂಟುಮಾಡುತ್ತಿರುವ ಕ್ರಾಂತಿಕಾರಿ ಬದಲಾವಣೆಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರು ಡಾ. ಕಸ್ತೂರೆವ್ವ ದಳವಾಯಿ, “ಆಯಾ ಕಾಲಘಟ್ಟದ ತಂತ್ರಜ್ಞಾನ ಸಂಶೋಧನೆಗಳು ಮಾನವ ಸಮಾಜವನ್ನು ಬಹುವಾಗಿ ಬದಲಿಸಿವೆ ಮತ್ತು ಈಗಲೂ ಬದಲಿಸುತ್ತಿವೆ.  ಎಐ ಮತ್ತು ಎಂಎಲ್‌ಗಳು ಆಧುನಿಕ ಮಾನವನ ಅಂತದ್ದೊಂದು ಅಪರೂಪದ ಮತ್ತು ಕ್ರಾಂತಿಕಾರಿ ಸಂಶೋಧನೆಯಾಗಿದೆ ಅದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವ ಮೂಲಕ ಉತ್ತಮವಾದ ಭವಿಷ್ಯವನ್ನು ರೂಪಿಸಿಕೊಳ್ಳಬೇಕು” ಎಂದರು.

ಐಕ್ಯೂಎಸಿ ಸಂಚಾಲಕಿ ಜಯಶ್ರೀ ಮುತಗಾರ ಮಾತನಾಡಿ, “ಕಂಪ್ಯೂಟರ್ ತಂದ ಕ್ರಾಂತಿಯನ್ನು ಎಐ ಹಾಗೂ ಎಂಎಲ್‌ಗಳು ಮುಂದಕ್ಕೆ ಒಯ್ಯುತ್ತಿವೆ. ಈ ತಂತ್ರಜ್ಞಾನದಲ್ಲಿ ಧನಾತ್ಮಕ ಮತ್ತು ಋಣಾತ್ಮಕ ಎರಡೂ ಮುಖಗಳಿದ್ದು, ವಿದ್ಯಾರ್ಥಿಗಳು ಧನಾತ್ಮಕ ಅಂಶಗಳನ್ನು ಸ್ವೀಕರಿಸಿ ಸ್ಪರ್ಧಾತ್ಮಕ ಜಗತ್ತಿಗೆ ಸಿದ್ಧರಾಗಬೇಕು” ಎಂದರು.

ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಎಚ್‌ಒಡಿ ಶಶಿಕಲಾ ವಿ. ಎಸ್.‌ ಮಾತನಾಡಿ, “ಜಾಗತಿಕ ಮಟ್ಟದ ತಾಂತ್ರಿಕ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಕಾಲೇಜಿನಿಂದ ನಿರಂತರವಾಗಿ ಇಂತಹ ಗುಣಮಟ್ಟದ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಎಸ್. ಎಸ್. ಸೂಡಿ, ಶಿವಪ್ಪ ಕುರಬರ ಹಾಗೂ  ವಿದ್ಯಾರ್ಥಿಗಳು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಬನವಾಸಿಯಲ್ಲಿ ಸರಣಿ ಮನೆ ಕಳ್ಳತನ: 20 ಗ್ರಾಂ ಚಿನ್ನಾಭರಣ, ₹56 ಸಾವಿರ ನಗದು ಕಳವು

ಶಿರಸಿ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಮನೆ ಹಾಗೂ...

ರಾಯಚೂರು | ಪಡಿತರ ಚೀಟಿ ಇ-ಕೆವೈಸಿ ನ.30 ಕೊನೆ ದಿನ; ಜಿಲ್ಲೆಯಲ್ಲಿ 1.63 ಲಕ್ಷ ಫಲಾನುಭವಿಗಳ ಬಾಕಿ

ಜಿಲ್ಲೆಯ ಎಲ್ಲ ಪಡಿತರ ಚೀಟಿಗಳಲ್ಲಿನ ಸದಸ್ಯರು ಪ್ರತಿ ಐದು ವರ್ಷಗಳಿಗೊಮ್ಮೆ ಇ-ಕೆವೈಸಿ...

ರಾಯಚೂರು | ವಿದ್ಯಾರ್ಥಿ ಮೇಲೆ ಹಲ್ಲೆ: 6 ಶಿಕ್ಷಕರ ವಿರುದ್ಧ ಪ್ರಕರಣ ದಾಖಲು

ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ರಾಜ್ ಶಾಲೆಯಲ್ಲಿ 10 ವರ್ಷದ ವಿದ್ಯಾರ್ಥಿಯ...

ವಿಜಯಪುರ |ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ...