ಗದಗ | ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ

Date:

ಗದಗ ಜಿಲ್ಲೆಯ ಮುಳಗುಂದದ ಶ್ರೀ ಆರ್. ಎನ್. ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ಕ್ರಾಸ್ ಹಾಗೂ ರೋವರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ‘ಆರೋಗ್ಯಕರ ಯುವಜನತೆ–ಮಾದಕ ವ್ಯಸನ ಮುಕ್ತ ಸಮಾಜ” ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

- Advertisement -

ಕಾರ್ಯಕ್ರಮಕ್ಕೆ ಮುಖ್ಯ ಉಪನ್ಯಾಸಕರಾಗಿ ಮುಳಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ ವೈದ್ಯಾಧಿಕಾರಿ ಡಾ. ಪ್ರವೀಣ ಎಸ್. ತುಪ್ಪದ ಅವರು ಮಾತನಾಡಿ, “ಮಾದಕ ವಸ್ತುಗಳ ಸೇವನೆಯಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಇತರರಿಗೂ ಜಾಗೃತಿ ಮೂಡಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ರೆಡ್ ಕ್ರಾಸ್ ಹಾಗೂ ರೋವರ್ಸ್ ಘಟಕಗಳ ಸಂಯೋಜಕರಾದ ಶ್ರೀ ಮಾರುತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಘಟಕಗಳ ಉದ್ದೇಶ ಮತ್ತು ಕಾರ್ಯಚಟುವಟಿಕೆಗಳನ್ನು ಪರಿಚಯಿಸಿದರು. ಮಾನವೀಯ ಮೌಲ್ಯಗಳನ್ನು ಬೆಳೆಸುವುದು, ಸೇವಾ ಮನೋಭಾವ ಮೂಡಿಸುವುದು ಹಾಗೂ ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ಜಾಗತಿಕ ನಾಯಕರನ್ನಾಗಿ ರೂಪಿಸುವುದು ಘಟಕಗಳ ಪ್ರಮುಖ ಉದ್ದೇಶವಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಆರ್. ಎಂ. ಕಲ್ಲನಗೌಡರ ಅವರು ಮಾತನಾಡಿ, “ಆರೋಗ್ಯವಂತ ವಿದ್ಯಾರ್ಥಿಗಳಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ಪ್ರತಿಯೊಬ್ಬರೂ ತಮ್ಮ ಬಾಡಿ ಮಾಸ್ ಇಂಡೆಕ್ಸ್ (BMI) ಪರಿಶೀಲಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು” ಎಂದು ತಿಳಿಸಿದರು.

ಐಕ್ಯೂಎಸಿ ಸಂಚಾಲಕ ಪ್ರೊ. ನಾಗರಾಜ ಎ. ಉಪಸ್ಥಿತರಿದ್ದರು.ಪ್ರೊ .ಬಸರಾಜ, ಡಾ. ಶಿವಪ್ಪ ಮುದಿಯಜ್ಜನವರ  ಬೋಧಕ ,ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ಕಾರ್ಯಕ್ರಮದಲ್ಲಿ ಕು. ಲಕ್ಷ್ಮಿ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆಯನ್ನು ಹಾಡಿದರು. ಕು. ಸಂಗೀತ ಗುಂಜಾಳ ಸ್ವಾಗತಿಸಿದರು. ಕು. ರಮಿಜಾ ನದಾಫ ನಿರೂಪಿಸಿದರು. ಕು. ಜ್ಯೋತಿ ಬೇವಿನಕಟ್ಟಿ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಆಯುಷ್ಮಾನ್ ಆರೋಗ್ಯ ಕೇಂದ್ರ ಸ್ಥಗಿತಗೊಳಿಸದಂತೆ ಸ್ಥಳೀಯರ ಆಗ್ರಹ

ಯಲ್ಲಾಪುರ: ಪಟ್ಟಣದ ರವೀಂದ್ರ ನಗರದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ...

ನಿರಂತರತೆಯೇ ರಂಗಭೂಮಿಯ ನಿಜವಾದ ಶಕ್ತಿ: ಕೋಟಿಗಾನಹಳ್ಳಿ ರಾಮಯ್ಯ

ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಇಚ್ಛಾಶಕ್ತಿ, ಬದ್ಧತೆ ಹಾಗೂ ಸಾಂಸ್ಕೃತಿಕ ಹೊಣೆಗಾರಿಕೆ...

ಉಡುಪಿ | ಸೌಹಾರ್ದ ಸಮಾಜ ಕಟ್ಟುವ ಹೊಣೆ ಮುಸ್ಲಿಮ್ ಒಕ್ಕೂಟ ವಹಿಸಲಿ: ಯು.ಟಿ.ಖಾದರ್

ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ...