ಗದಗ | ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ 

Date:

ಶಾಲಾ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಉದ್ದೇಶದಿಂದ ಕಪ್ಪತಗುಡ್ಡ ರಕ್ಷಣೆಯ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. 

- Advertisement -

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಸರ್ಕಾರಿ ಮಾದರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ವೋದಯ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ವಿವಿಧೋದ್ದೇಶಗಳ ಸಂಸ್ಥೆ, ಡಂಬಳ ವತಿಯಿಂದ ವನಮಹೋತ್ಸವ ಸಂಭ್ರಮ ಹಾಗೂ ಕಪ್ಪತಗುಡ್ಡ ರಕ್ಷಣಾ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸಂಸ್ಥೆಯ ಕಾರ್ಯದರ್ಶಿ ಗುಡುದಪ್ಪ ತಳಗೇರಿ ಪ್ರಸ್ತಾವಿಕ ಮಾತನಾಡಿ, “ಮುಂಬರುವ ಪೀಳಿಗೆಗೆ ಉತ್ತಮ ಪರಿಸರವನ್ನು ನಿರ್ಮಿಸುವ ಹೊಣೆಗಾರಿಕೆಯನ್ನು ನಾವು ಮರೆಯುತ್ತಿದ್ದೇವೆ. ಪ್ರಸ್ತುತ ನಾಗರಿಕರು ಅನಾಗರಿಕರಂತೆ ವರ್ತಿಸುತ್ತಿರುವುದು ಪರಿಸರ ನಾಶಕ್ಕೆ ಪ್ರಮುಖ ಕಾರಣವಾಗಿದೆ” ಎಂದು ಕಪ್ಪತಗುಡ್ಡ ರಕ್ಷಣಾ ಜಾಗೃತಿ ಉಪಾಧ್ಯಕ್ಷ  ಕಾರ್ಯಕ್ರಮದಲ್ಲಿ ವಿಷಾದ ವ್ಯಕ್ತಪಡಿಸಿದರು.

“ಇತ್ತೀಚಿನ ದಿನಗಳಲ್ಲಿ ಪರಿಸರ ದಿನಾಚರಣೆ ಕೇವಲ ಸಾಮಾಜಿಕ ಜಾಲತಾಣಗಳಿಗೆ ಸೀಮಿತ ಆಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕಪ್ಪತಗುಡ್ಡವು ಜಿಲ್ಲೆಯ ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಆಸ್ತಿಯಾಗಿದ್ದು, ಉತ್ತರ ಕರ್ನಾಟಕದ ಸಹ್ಯಾದ್ರಿ ಎಂಬ ಖ್ಯಾತಿ ಪಡೆದಿದೆ. ಇದು ಅಪರೂಪದ ಔಷಧೀಯ ಸಸ್ಯಗಳ ನಿಧಿಯಾಗಿದ್ದು, ವನ್ಯಜೀವಿಗಳ ಸುರಕ್ಷಿತ ತಾಣವೂ ಆಗಿದೆ” ಎಂದು ತಿಳಿಸಿದರು.

“ಸ್ವಾರ್ಥದ ಉದ್ದೇಶಗಳಿಂದ ಹಾಗೂ ‘ಗುಡ್ಡಕ್ಕೆ ಬೆಂಕಿ ಹಚ್ಚಿದರೆ ಮಳೆ ಬರುತ್ತದೆ’ ಎಂಬಂತಹ ಮೌಢ್ಯ ನಂಬಿಕೆಗಳಿಂದ ಕಪ್ಪತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ. ಕಪ್ಪತಗುಡ್ಡದ ಮಹತ್ವವನ್ನು ಅರಿತು ಅದರ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. 

ಅರಣ್ಯಾಧಿಕಾರಿಗಳು ಮೈಲಾರಪ್ಪ ಮಡಿವಾಳ ಅವರು ಮಾತನಾಡಿ, “ಒಂದು ಮರವು ವರ್ಷಕ್ಕೆ ಸುಮಾರು 22 ಕೆಜಿ ಇಂಗಾಲದ ಡೈ ಆಕ್ಸೈಡ್ ಅನ್ನು ಹೀರಿಕೊಂಡು ನಾಲ್ವರು ವ್ಯಕ್ತಿಗಳಿಗೆ ಅಗತ್ಯವಾದ ಆಮ್ಲಜನಕವನ್ನು ಒದಗಿಸುವ ಸಾಮರ್ಥ್ಯ ಹೊಂದಿದೆ. ಕಪ್ಪತಗುಡ್ಡದಲ್ಲಿ 400ಕ್ಕೂ ಅಧಿಕ ಔಷಧೀಯ ಸಸ್ಯಗಳಿದ್ದು, 2021-22ರ ವರದಿಯ ಪ್ರಕಾರ 26 ಜಾತಿಯ ವನ್ಯಜೀವಿಗಳು ಹಾಗೂ 226ಕ್ಕೂ ಅಧಿಕ ಪಕ್ಷಿ ಸಂಕುಲಗಳು ಕಂಡುಬಂದಿವೆ” ಎಂದು ವಿವರಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಶಾಲಾ ಮಕ್ಕಳ ಸಮ್ಮುಖದಲ್ಲಿ ಗಿಡ ನೆಡುವ ಮೂಲಕ ನೆರವೇರಿಸಲಾಯಿತು. ಪರಿಸರ ಸಂರಕ್ಷಣೆಯ ಮಹತ್ವ ಸಾರುವ ಘೋಷಣೆಗಳು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದವು.

ಈ ಸಂದರ್ಭದಲ್ಲಿ ಅತಿಥಿ ಸಣ್ಣಹನಮಪ್ಪ ಬಂಡಿ ಅವರು ಮಾತನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರು ಸೋಮಪ್ಪ ತಳಗೇರಿ,ಸಣ್ಣ ಹನಮಪ್ಪ ಬಂಡಿ,ಸದಸ್ಯರು ರಾಯರೆಡ್ಡಿ, ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಸಿದ್ದಣ್ಣವರ, ನವೀನ್ ಛಲವಾದಿ, ಮಾಂತೇಶ, ಪ್ರದೀಪ ಕಂಬಳಿ ಮುಖ್ಯೋಪಾಧ್ಯಾಯರು ಯಲ್ಲಪ್ಪ ಛಲವಾದಿ, ಎಸ್ ಜಿ ಪಾಟೀಲ್, ಸಿದ್ದಪ್ಪ ಬಂಢಾರಿ, ಯುವ ಕವಿ ಮಂಜುನಾಥ್ ಎಚ್, ಎಸ್.ಡಿಎಮ್.ಸಿ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕುಮಾರ ಗೌಡಣ್ಣವರ ಸ್ವಾಗತಿಸಿದರು. ಶಿಕ್ಷಕರು ಆನಂದ ಅವರು ಕಾರ್ಯಕ್ರಮ ನಿರೂಪಿಸಿದರು‌. ಮಹೇಶ್ ಕುಂಬಾರವರು ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ವಿವಿಧ ನಿಗಮಗಳ ಯೋಜನೆಗಳಡಿ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ

ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ಸ್ವಯಂ...

ವಿಜಯಪುರ | ರೈತರಿಗೆ ಪ್ರೋತ್ಸಾಹಧನ ನೀಡಿ, ಗ್ರಾಹಕರ ಮೇಲೆ ಹೊರೆ ಹಾಕಬೇಡಿ: ನಾಗರಾಜ ಲಂಬು

ನವೆಂಬರ್ 1ರಿಂದ ಹಾಲಿನ ಬೆಲೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಭಾರತೀಯ...

ಬಾಗಲಕೋಟೆ |ಇಳಕಲ್‌ನಲ್ಲಿ ನ.1ರಂದು ‘ಯುವ ಸಾಂಸ್ಕೃತಿಕ ಉತ್ಸವ

2026’ಯುವಜನರಲ್ಲಿ ನೈತಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು...

ರಾಯಚೂರು | ಲಾರಿ-ಟಿಟಿ ವಾಹನ ಡಿಕ್ಕಿ: 13 ಜನರಿಗೆ ಗಾಯ

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, ಓರ್ವನ...