“ಗಣೇಶ ಹಬ್ಬವನ್ನು ಸಾರ್ವಜನಿಕರು ಶಾಂತಿಯುತವಾಗಿ ಆಚರಸಬೇಕು. ಭಕ್ತಿ ಭಾವದಿಂದ ಹಬ್ಬ ಆಚರಿಸಿ. ಪೊಲೀಸ್ ಇಲಾಖೆಗೆ ಸಹಕರಿಸಬೇಕು. ಎಂದು ಎಸ್.ಪಿ ಮೀಥುನ್ ಎನ್.ಎಚ್ ಮನವಿ ಮಾಡಿದರು.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಲೂಕು ಪಂಚಾಯಿತಿ ವತಿಯಿಂದ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಂತಿ ಸಭೆಯನ್ನು ಆಯೋಜಿಸಿತ್ತು.
ಈ ಸಭೆಯ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಎಸ್.ಪಿ ಮಿಥುನ್ ಎನ್.ಎಚ್ ಅವರು ಮಾತನಾಡಿದರು, “ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಡ್ಡಾಯವಾಗಿ ಪೊಲೀಸ್ ಇಲಾಖೆ ಅನುಮತಿ ಪಡೆಯಬೇಕು. ಡಿಜೆ ಬಳಕೆ, ಅಶ್ಲೀಲ ಹಾಡುಗಳ ಬಳಕೆಗೆ ನಿಷೇಧ ಇರುವುದು. ಮೆರವಣಿಗೆ ವೇಳೆ ಸುಪ್ರೀಂ ಕೋರ್ಟ್ ನಿಯಮದಂತೆ ಧ್ವನಿವರ್ಧಕ ಬಳಕೆ ಮಾಡಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ಬರುವಂತಹ ಯಾವುದೇ ಚಟುವಟಿಕೆ ನಡೆಸಬಾರದು. ವಿದ್ಯುತ್ ಅವಘಡ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಮದ್ಯಪಾನ ಮಾಡಿ ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಹಬ್ಬ ಆಚರಣೆ ಸಂದರ್ಭದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಳಿಸಲಾಯಿತು.
ಸಭೆಯಲ್ಲಿ ಪಟ್ಟಣದ ವಿವಿಧ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳು, ಮುಖಂಡರು, ಪುರಸಭೆ ಸದಸ್ಯರು ಹಾಗೂ ನಾಗರಿಕರು ಭಾಗವಹಿಸಿದ್ದರು.
ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ





