ಗದಗ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಸಿಐಟಿಯು ಆಗ್ರಹ

Date:

“ರಾಜ್ಯ ಸರಕಾರ ಕಾರ್ಮಿಕರ ಕನಿಷ್ಟ ವೇತನ ಪರಿಷ್ಕರಣೆ ಮಾಡಿ ಇಂದು ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುನವಾಗಿ ಎಲ್ಲ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ 36,000ರೂ ಅಧಿಸೂಚನೆ ಹೊರಡಿಸುಂತೆ” ಸಿಐಟಿಯು ಜಿಲ್ಲಾ ಸಂಚಾಲಕ ಮಹೇಶ ಹಿರೇಮಠ ಆಗ್ರಹಿಸಿದರು.

- Advertisement -

ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ ಕಾರ್ಮಿಕ ಕನಿಷ್ಠ ವೇತನ ಜಾರಿಗೊಳಿಸುವಂತೆ ಕಾರ್ಮಿಕರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಹಿಂದೆ ಇದ್ದ ನಾಲ್ಕು ವಲಯಕ್ಕೆ ಬದಲಾಗಿ ಮೂರು ವಲಯಗಳಾಗಿ ಮಾಡಿ ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಮೇ 22ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಂತಿಮ ಕನಿಷ್ಟ ವೇತನ ಅಧಿಸೂಚನೆ ಸ್ವಾಗತರ್ಹವಾಗಿದ್ದು, ಬೆಲೆ ಏರಿಕೆ ಸೇರಿದಂತೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಲಕ್ಷಾಂತರ ಕಾರ್ಮಿಕರಿಗೆ ಸಹಾಯವಾಗಲಿದೆ” ಎಂದರು.

“ಆದರೇ ಸದರಿ ಕನಿಷ್ಟ ವೇತನ ಅಧಿಸೂಚನೆಯಿಂದ ಹೊರಗಿಟ್ಟಿರುವ ಬಹುತೇಕ ಲಕ್ಷಾಂತರ ಬಡ ಮಹಿಳೆಯರು ಗಾಮೆರ್ಂಟ್ಸ್, ಪ್ಲಾಂಟೇಷನ್, ಬೀಡಿ, ಕೈಮಗ್ಗ ಮುಂತಾದ 19 ಉದ್ದಿಮೆಗಳಲ್ಲಿಯ ಕಾರ್ಮಿಕರಿಗೆ ಅನ್ಯಾಯವಾಗಲಿದ್ದು, ಈ ಉದ್ದಿಮೆಗಳಿಗೆ ಪರಿಷ್ಕೃತ ಕನಿಷ್ಟ ವೇತನವನ್ನು ಜಾರಿ ಮಾಡಿ ಅಧಿಸೂಚನೆ ಹೊರಡಿಸಬೇಕು” ಎಂದು ಒತ್ತಾಯಿಸಿದರು.

“ಲೋಡಿಂಗ್ ಆನ್‌ಲೋಡಿಂಗ್ (ಹಮಾಲಿ) ಸೇರಿದಂತೆ ತುಂಡು ಕೆಲಸ (ಪೀಸ್‌ ವರ್ಕ) ಸ್ವರೂಪದ ಶ್ರಮಿಕ ಪ್ರಾಧಾನ್ಯ ಉದ್ದಿಮೆಗಳಿಗೆ ಪರಿಷ್ಕರಣೆ ಮಾಡಲಾಗುವುದೆಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಅದಕ್ಕೆ ಯಾವುದೇ ಕಾಲಮಿತಿ ನಿಗದಿ ಮಾಡಿಲ್ಲ. ಕೂಡಲೇ ಈ ಕಾರ್ಮಿಕರಿಗೂ ಪರಿಷ್ಕೃತ ಕನಿಷ್ಟ ವೇತನ ನಿಗದಿಮಾಡಬೇಕು” ಎಂದು ಒತ್ತಾಯಿಸಿದರು.

ಸಿಐಟಿಯು ಮುಖಂಡರು ಪೀರು ರಾಠೋಡ್ ಮಾತನಾಡಿ, “ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸ್ತ್ರೀ ನೌಕರರನ್ನು ಕನಿಷ್ಟ ವೇತನ ವ್ಯಾಪ್ತಿಗೆ ತರಬೇಕು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದರು. 

“ಸುಪ್ರೀಂ ಕೋರ್ಟ ಐತಿಹಾಸಿಕ ‘ರೆಪ್ತಕೋಸ್ ಬ್ರೆಟ್ ಆಂಡ್ ಕಂ’ ಪ್ರಕರಣದಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಆಧರಿಸಿ ಕನಿಷ್ಟ ವೇತನ ನಿಗದಿಪಡಿಸಬೇಕೆಂಬ ಹೈಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರ ಕನಿಷ್ಟ ವೇತನ ಪರಿಷ್ಕರಣೆ ಮಾಡಬೇಕು. ಇಂದಿನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿ ಎಲ್ಲಾ ಕಾರ್ಮಿಕರಿಗೆ ಸರಾಸರಿ ರೂ. 36,000 ಕನಿಷ್ಟ ವೇತನ ನಿಗದಿಪಡಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯ ಸರ್ಕಾರ ಕನಿಷ್ಟ ವೇತನದ ಕರಡು ಅಧಿಸೂಚನೆ ಹೊರಡಿಸಿದ ದಿನಾಂಕವಾದ 2025 ಏಪ್ರಿಲ್ 11 ರಿಂದಲೇ ಪೂರ್ವಾನ್ವಯಿಸಿ ಕನಿಷ್ಟ ವೇತನ ಜಾರಿಗೆ ತರಬೇಕು. ಒಂದು ವರ್ಷದ ಆರಿಯರ್ಸ್ ಕಾರ್ಮಿಕರಿಗೆ ನೀಡಬೇಕು. ಮಾಲೀಕರ ಯಾವುದೇ ಒತ್ತಡಕ್ಕೆ ಮಣಿಯದೆ ಈ ಪರಿಷ್ಕೃತ ಕನಿಷ್ಠ ವೇತನದ ಆದೇಶವನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು. ಕಾರ್ಮಿಕ ಸಂಹಿತೆಗಳಿಗೆ ಕಾರ್ಮಿಕರ ಪರ ಕರ್ನಾಟಕ ತಿದ್ದುಪಡಿಗಳನ್ನು ತಂದು ನಿಯಮಗಳನ್ನು ರೂಪಿಸಬೇಕು. ಹಾಗೂ ಖಾಯಂಯೇತರ ಕಾರ್ಮಿಕರ ಖಾಯಂಗೆ ಕಾನೂನು ರೂಪಿಸಬೇಕೆಂದು ಒತ್ತಾಯಿಸಿದರು.

ಸಿಐಟಿಯು ನೇತೃತ್ವದಲ್ಲಿ ನಡೆದ ಪ್ರತಿಭಟನೆಯು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ರಾಣಿ ಚನ್ನಮ್ಮ ಸರ್ಕಲದಿಂದ ಮೆರವಣಿಗೆ ಮುಖಾಂತರ ತೆರಳಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು

ಈ ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರು ಬಸವರಾಜ ಮಂತೂರ, ರುದ್ರಪ್ಪ ಕಂದಗಲ್ಲ, ಬಸವರಾಜ ಮೇವುಂಡಿ, ರುದ್ರಗೌಡ ಸಂಕನಗೌಡ್ರ, ಯಶೋಧಾ ಬೇಟಗೇರಿ, ಶಾರದಾ ರೋಣದ, ಗಂಗಮ್ಮ ದ್ಯಾವರಡ್ಡಿ, ಸುಶಿಲಾ ಚಲವಾದಿ, ಶರಣಮ್ಮ ವಾಲಿ, ಮೈಬು ಹವಲ್ದಾರ, ಮುತ್ತಪ್ಪ ಚಲವಾದಿ, ನಾಗರತ್ನ ಬಡಗನ್ನವರ, ಗಿರಿಜಾ ಮಾಚಕನೂರ, ಗೀತಾ ಪಾಟೀಲ, ಕಮಲಾಕ್ಷಿ ಬೀಳಗಿ, ಹಾಲಪ್ಪ ತಪ್ಪಡಿ ಇನ್ನು ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...