ಗದಗ | ಬರ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

Date:

ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.

ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ (ಜ.22) ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವಿನ ಸ್ಥಿತಿಗತಿ ಮತ್ತು ಬರನಿರ್ವಹಣೆ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಅಧಿಕಾರಿ ವರ್ಗ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ತೊಂದರೆಗೊಳಗಾದ ಗ್ರಾಮಗಳನ್ನು ಈಗಾಗಲೇ ಗುರುತಿಸಿದ್ದು ಯಾವುದೇ ಕಾರಣಕ್ಕೂ ಜಿಲ್ಲೆಯ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಜರುಗಿಸಬೇಕೆಂದು ತಿಳಿಸಿದರು.

ಅಗತ್ಯ ಬಿದ್ದಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಬೋರ್‍ವೆಲ್‍ಗಳ ಸಹಾಯದ ಮೂಲಕ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಬ್ಯಾಂಕ್‍ಗಳಲ್ಲಿ ಸಮರ್ಪಕ ಮೇವಿನ ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಿನಾಂಕ 22/01/2024ರಿಂದ 01/02/2024ರವರೆಗೆ ನವೀಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆಕಾಲುವೆಯ ಮೂಲಕ ನೀರು ಬಿಡುಗಡೆಯಾಗುತ್ತಿದೆ. ಕಾಲುವೆಯ ಪಾತ್ರದಲ್ಲಿ ಜನ ಜಾನುವಾರುಗಳನ್ನು ಬಿಡದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಂಬಂಧಿತ ತಹಸೀಲ್ದಾರರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ನೀರು ಬಿಡುತ್ತಿರುವುದು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ. ಕಾಲುವೆ ಪಾತ್ರದಲ್ಲಿರುವ ರೈತ ಬಾಂದವರು ನೀರನ್ನು ಪಂಪ್‍ಸೆಟ್‍ಗಳ ಮೂಲಕ ನೀರೆತ್ತಿ ಬೆಳೆಗಳಿಗೆ ಹಾಯಿಸಬಾರದು. ಈ ಕುರಿತು ತಹಶೀಲ್ದಾರರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಕುಡಿಯುವ ಉದ್ದೇಶಕ್ಕಾಗಿ ನವಿಲು ತೀರ್ಥ ಜಲಾಶಯದಿಂದ ನೀರು ಬಿಡುಗಡೆಯಾಗಿದ್ದು ರೋಣ ತಾಲೂಕಿನ ಜಿಗಳೂರು, ಅಸೂಟಿ ಹಾಗೂ ಹೊಳೆಆಲೂರು ಕೆರೆಗಳನ್ನು ಕುಡಿಯುವ ಉದ್ದೇಶಕ್ಕಾಗಿ ನೀರು ಸಂಗ್ರಹಿಸಬೇಕು. ಈ ಬಗ್ಗೆ ತಾಲೂಕಿನ ತಹಸೀಲ್ದಾರರು ಹಾಗೂ ಇನ್ನುಳಿದ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿಗಾ ವಹಿಸುವಂತೆ ಹೇಳಿದರು.

ಪ್ರಸ್ತುತ ಜಲಾಶಯಗಳಲ್ಲಿ ಹಿಂದಿನ ವರ್ಷಕ್ಕಿಂತ ನೀರಿನ ಪ್ರಮಾಣ ಕಡಿಮೆ ಇದ್ದು ಮುಂದಿನ ದಿನಗಳಲ್ಲಿ ನೀರಿನ ಬೇಡಿಕೆ ಹೆಚ್ಚಾಗುವ ಸಾಧ್ಯತೆಯನ್ನು ಮನಗಂಡು ಈಗ ಹರಿಬಿಡಲಾಗುವ ನೀರನ್ನು ಪೋಲಾಗದಂತೆ ಸಂಗ್ರಹಿಸಿಕೊಂಡು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ಕ್ರಮ ವಹಿಸಬೇಕು. ಹೆಸ್ಕಾಂ ಅಧಿಕಾರಿಗಳು ನೀರು ಬಿಡುವ ದಿನಗಳಲ್ಲಿ ಕಾಲುವೆಗುಂಟ ಅಳವಡಿಸಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವ ಮೂಲಕ ರೈತರು ಬೆಳೆಗಳಿಗೆ ನೀರು ಬಳಸದಂತೆ ಜಾಗೃತ ವಹಿಸಬೇಕು ಎಂದರು.

ತಾಲೂಕಾವಾರು ತಹಸೀಲ್ದಾರರು ಪ್ರತೀ ಹದಿನೈದು ದಿನಕ್ಕೊಮ್ಮೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಿ ಮುಂಜಾಗ್ರತಾ ಕ್ರಮಗಳನ್ನು ವಹಿಸಿದ ಬಗ್ಗೆ ಕಚೇರಿಗೆ ವರದಿ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಧಿಕಾರಿ ಡಾ. ವೆಂಕಟೇಶ್ ನಾಯಕ್, ಕೃಷಿ ಜಂಟಿ ನಿರ್ದೇಶಕಿ ತಾರಾಮಣಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟೆಮನಿ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಹುಲಗಣ್ಣವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಪಿ.ಆರ್.ಇ.ಡಿ. ಕಾರ್ಯಪಾಲಕ ಅಭಿಯಂತರ ಎಸ್.ಆರ್. ಗೌಡರ, ತಾಲೂಕಾ ತಹಸೀಲ್ದಾರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | 29ರಂದು ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಜಾಗೃತಿ ಸಭೆ

ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ...

ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ...

ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ...

ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500...