ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ: KA-42 F-1652) ನ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಕಂಡಕ್ಟರ್ ಗೆ ಗಾಯವಾದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕನಕಾಪುರ ದ್ಯಾಮವ್ವ ದೇವಸ್ಥಾನದ ಬಳಿ ನಡೆದಿದೆ.
ಬೆಳಟ್ಟಿಯಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಚರಿಸುತ್ತಿದ್ದ ಸಾರಿಗೆ ಬಸ್ ಕನಕಾಪುರ ದ್ಯಾಮವ್ವ ದೇವಸ್ಥಾನದ ಬಳಿ ಟಾಯರ್ ಸ್ಪೋಟಗೊಂಡ ಘಟನೆ ನಡೆದಿದೆ. ಈ ಘಟನೆಯಲ್ಲಿ ಸಾರಿಗೆ ಬಸ್ಸಿನ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗುಡ್ಡಯ್ಯ ಈಳಿಗೇರ ಅವರ ಕಾಲಿಗೆ ಗಾಯವಾಗಿದೆ. ಟೈರ್ ಸ್ಫೋಟದ ರಭಸಕ್ಕೆ ಕಾಲಿನಲ್ಲಿ ರಕ್ತಸ್ರಾವ ಉಂಟಾಗಿದೆ.
ಗಾಯಾಳುವನ್ನು ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಲಾಗಿದ್ದು. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.
ಟಾಯರ್ ಸ್ಫೋಟದಲ್ಲಿ ಪ್ರಯಾಣಿಕರಿಗೆ ಯಾವುದೇ ಗಂಬೀರ ಅಪಾಯ ಸಂಬವಿಸಿಲ್ಲ. ಈ ಟಾಯರ್ ಸ್ಪೋಟಗೊಂಡಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿರುವುದಲ್ಲಿ.
ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ




