ಗದಗ | ಸಂವಿಧಾನ ನಮ್ಮ ಬದುಕು, ಹಕ್ಕು, ಬಲ ನೀಡುವ ಮಹಾನ ಶಕ್ತಿ: ಸಚಿವ ಎಚ್.ಕೆ ಪಾಟೀಲ

Date:

ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾದದ್ದು. ರಾಷ್ಟ್ರದ ಬದುಕು ಹೇಗಿರಬೇಕು, ಜನಸೇವೆ, ನಮ್ಮ ಹಕ್ಕುಗಳ ಕುರಿತು ನಮ್ಮ ಸಂವಿಧಾನದ ಪೀಠಿಕೆ ಹೇಳುತ್ತದೆ. ಅದನ್ನು ಅರಿತುಕೊಂಡು ಸಂವಿಧಾನದ ಸದಾಶಯಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಡಾ.ಎಚ್.ಕೆ ಪಾಟೀಲ ಹೇಳಿದರು.

- Advertisement -

ಗದಗ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ಸಂವಿಧಾನದ ಪೀಠಿಕೆ ಮತ್ತು ಕಾರ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಸಂವಿಧಾನವು ಕಥೆ ಪುಸ್ತಕವಲ್ಲ. ಅದು ನಮ್ಮ ಬದುಕು, ನಮ್ಮ ಹಕ್ಕುಗಳನ್ನು ತಿಳಿಸುವ, ಬಲನೀಡುವ ಮಹಾನ್ ಶಕ್ತಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸಾಮಾಜಿಕ ನ್ಯಾಯದ ಜೊತೆಗೆ ಪ್ರತಿಯೊಬ್ಬರಿಗೂ ತಮ್ಮದೇ ಆದ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ಸ್ತ್ರೀ ಸ್ವಾತಂತ್ರ್ಯ ಕುರಿತು ತಿಳಿಸಿದ್ದರು. ಆದರೂ ಮನೆಯ ಹೆಣ್ಣುಮಕ್ಕಳನ್ನು ಮನೆಯಿಂದ ಆಚೆ ಕಳುಹಿಸುತ್ತಿರಲಿಲ್ಲ. ಸಂವಿಧಾನದಲ್ಲಿ ತಿದ್ದುಪಡಿ ತರುವ ಮೂಲಕ ಮೀಸಲಾತಿಯನ್ನು ಜಾರಿಗೊಳಿಸಿ ಮಹಿಳೆಯರ ಕೈಗೆ ಅಧಿಕಾರ ನೀಡಲಾಗಿದೆ” ಎಂದು ತಿಳಿಸಿದರು.

“ಸಂವಿಧಾನ ಶ್ರೇಷ್ಠ ಹಾಗೂ ಶಕ್ತಿಯುತವಾಗಿದೆ. ಜಾತಿ ವ್ಯವಸ್ಥೆಯಿಂದ ಗಲೀಜು ಆಗಿರುವ ಸಮಾಜವನ್ನು ತಿದ್ದುವ ಕಾರ್ಯ ಆಗಬೇಕಾಗಿದೆ. ಸಮಾಜದಲ್ಲಿ ಇನ್ನೂ ಕೂಡ ಅಸ್ಪಶ್ಯತೆ ಜೀವಂತವಾಗಿದ್ದು ಇದನ್ನು ತೊಡೆದು ಹಾಕುವ ಕಾರ್ಯವಾಗಬೇಕಾಗಿದೆ. ಸಮಾಜದಲ್ಲಿ ಸಮಾನತೆ ಬರಲು ಮನಸ್ಸುಗಳು ಕೂಡಬೇಕು. ಈ ಕುರಿತು ಸಂವಿಧಾನದಲ್ಲಿ ಸ್ಪಷ್ಟಪಡಿಸಲಾಗಿದೆ. ಅಸ್ಪೃಶ್ಯತೆ ನಿವಾರಣೆಗಾಗಿ ಪಂಚಾಯತಿಗಳಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡಲಾಗಿದೆ” ಎಂದರು.

“ಸಂವಿಧಾನದ ತಿಳುವಳಿಕೆ ಕೊರತೆಯಿಂದಾಗಿ ಸಮಾಜದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಪ್ರತಿಯೊಬ್ಬರು ಸಂವಿಧಾನದ ಕುರಿತು ಅರಿತುಕೊಳ್ಳುವುದು ಮುಖ್ಯವಾಗಿದೆ. ಸಂವಿಧಾನದಲ್ಲಿ ನೀಡಿರುವ ಹಕ್ಕನ್ನು ಪ್ರತಿಯೊಬ್ಬರು ಪಡೆದುಕೊಳ್ಳುತ್ತಾರೆಯೇ ಹೊರತು ಸಂವಿಧಾನದಲ್ಲಿ ತಿಳಿಸಿರುವ ಕರ್ತವ್ಯಗಳನ್ನು ಪಾಲಿಸಲಾಗುತ್ತಿಲ್ಲ. ಈ ಕುರಿತು ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ” ಎಂದರು.

ರೋಣ ಶಾಸಕ ಜಿ.ಎಸ್ ಪಾಟೀಲ ಮಾತನಾಡಿ, “ದೇಶಕ್ಕೆ ಸ್ವಾತಂತ್ರ್ಯ ದೊರೆತು ಎಪ್ಪತ್ತೈದು ವರ್ಷಗಳು ಗತಿಸಿದ್ದರೂ ಕೂಡ ದೇಶದಲ್ಲಿ ಅಷ್ಟೊಂದು ಸಾಧನೆ ಆಗಿಲ್ಲ. ದೇಶದ ಏಕತೆಯನ್ನು ಸಂವಿಧಾನ ಕರೆದೊಯ್ಯುತ್ತಿದೆ. ಸಮಾಜ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಅತೀ ಪ್ರಮುಖವಾಗಿದ್ದು, ಗಾಂಧೀಜಿ ಅವರ ಗ್ರಾಮ ಸ್ವರಾಜದ ಕನಸನ್ನು ನನಸಾಗಿಸಲು ಪ್ರತಿಯೊಬ್ಬರು ಸಂವಿಧಾನವನ್ನು ಅರಿತು ಅದರಂತೆ ನಡೆದುಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ?: ಪ್ರಧಾನಿ ಮೋದಿ ಹೇಳಿದರೂ ಈ ಸಿನಿಮಾವನ್ನು ನೋಡುವವರೇ ಇಲ್ಲ!

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, “ನ್ಯಾಯಾಂಗ, ಕಾರ್ಯಾಂಗ ಹಾಗೂ ಶಾಸಕಾಂಗವು ಸಂವಿಧಾನದ ಅಡಿಯಲ್ಲಿಯೇ ಕಾರ್ಯನಿರ್ವಹಿಸುತ್ತವೆ. ನಮ್ಮ ದೇಶದ ಪವಿತ್ರ ಸಂವಿಧಾನವನ್ನು ಅರಿತು ಸಧೃಢ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರು ಮುಂದಾಗಬೇಕು. ಸಂವಿಧಾನದಲ್ಲಿನ ತಿದ್ದುಪಡಿಯ ಮೂಲಕ ಮಹಿಳೆಯರು ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು ಸಂವಿಧಾನ ನೀಡಿದ ಹಕ್ಕು ಹಾಗೂ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವದರ ಮೂಲಕ ಸುಂದರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು” ಎಂದರು.

ಕಾರ್ಯಕ್ರಮದಲ್ಲಿ ಕೇರಳದ ಲೋಕಲ್ ಸೆಲ್ಫ ಗವರ್ನಮೆಂಟ್ ಜಂಟಿ ನಿರ್ದೇಶಕ ಸುದೇಶನ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಮಾಜಿ ಶಾಸಕ ಡಿ.ಆರ್.ಪಾಟೀಲ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ವಾಸಣ್ಣ ಕುರಡಗಿ, ಚುನಾಯಿತ ಜನಪತ್ರಿನಿಧಿಗಳು, ಮಹಿಳಾ ಚುನಾಯಿತ ಜನಪತ್ರಿನಿಧಿಗಳು, ಗಣ್ಯರು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...