ಪೊಲೀಸ್ ಇಲಾಖೆ ನಿರಂತರವಾಗಿ ಆಧುನಿಕತೆಯತ್ತ ನೋಡುತ್ತಿರುತ್ತದೆ. ಸಮಾಜದಲ್ಲಿ ನಡೆಯುವ ಘಟನೆಗಳನ್ನು ಅರಿತು ಜನರಿಗೆ ನ್ಯಾಯ ಒದಗಿಸಿ ಕೊಡಲು ಆಧುನಿಕ ತಂತ್ರಜ್ಞಾನಗಳ ಅವಶ್ಯಕತೆವಿದೆ. ಗದಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿರುವ ಥರ್ಡ್-ಐ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಜಿಲ್ಲೆಯಲ್ಲಿನ ಅಪರಾಧಗಳ ಪ್ರಕರಣಗಳ ಪ್ರಮಾಣ ನಿಯಂತ್ರಿಸಲು ತುಂಬಾ ಸಹಕಾರಿಯಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದರು.
ಗದಗ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜರುಗಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
“ಪೊಲೀಸ್ ಇಲಾಖೆಯಲ್ಲಿ ಅಪರಾಧಗಳನ್ನು ಪರಿಹರಿಸುವುದು ಅತ್ಯಂತ ಸವಾಲಿನ ಕಾರ್ಯವಾಗಿದೆ. ಇಂತಹ ಸವಾಲಿನ ಕಾರ್ಯವನ್ನು ಸುಸಲಲಿತವಾಗಿ ಪರಿಹರಿಸಲು ಥರ್ಡ್-ಐ ತುಂಬ ಉಪಯಕ್ತವಾಗಲಿದೆ ಎಂದರು.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪ್ರಾರಂಭಿಸಲಾಗಿರುವ ಈ ಕಮಾಂಡ್ ಸೆಂಟರ್ ನಗರಕ್ಕೆ ಸೀಮಿತವಾಗಿದ್ದರೂ ಸಹ ಮುಂದಿನ ದಿನಮಾನಗಳಲ್ಲಿ ಇದನ್ನು ಇಡೀ ಜಿಲ್ಲೆಗೆ ವಿಸ್ತರಿಸಲಾಗುವುದು. ಬೆಂಗಳೂರಿನ ಸಮನಾಗಿ ಈ ಕಾರ್ಯ ಜಿಲ್ಲೆಯಲ್ಲಿ ಜರುಗಿರುವುದು ಅಭಿನಂದನಾರ್ಹ ಕಾರ್ಯವಾಗಿದೆ” ಎಂದು ಶ್ಲಾಘಿಸಿದರು.
“ಜಿಲ್ಲೆಯಲ್ಲಿ ಕ್ರೈಂ ರೇಟ್ ತುಂಬ ಕಡಿಮೆ ಇರುವುದು ಅಭಿನಂದನಾರ್ಹ. ರಾಜ್ಯದಲ್ಲಿ ಮಾದಕ ದ್ರವ್ಯಗಳ ನಿಯಂತ್ರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದರ ಪ್ರಭಾವ ತುಂಬಾ ಕಡಿಮ ಇದ್ದು, ಆರು ತಿಂಗಳೊಳಗಾಗಿ ಜಿಲ್ಲೆಯನ್ನು ಮಾದಕ ವಸ್ತು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಸವಾಲನ್ನು ನೀಡಲಾಗಿದೆ. ಗದಗ ಜಿಲ್ಲೆಯನ್ನು ಮಾದರಿಯನ್ನಾಗಿಟ್ಟುಕೊಂಡು ಇತರೆ ಜಿಲ್ಲೆಗಳು ಕಾರ್ಯ ಪ್ರವೃತ್ತರಾಗುವಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ” ಎಂದು ಗೃಹ ಸಚಿವರು ತಿಳಿಸಿದರು.
ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಮಾತನಾಡಿ, “ಗದಗ ಜಿಲ್ಲೆಯನ್ನು ಪ್ರವಾಸೋದ್ಯಮ ಜಿಲ್ಲೆಯನ್ನಾಗಿಸಬೇಕು. ಇಲ್ಲಿಯ ಐತಿಹಾಸಿಕ ಸ್ಥಳಗಳನ್ನು ಪ್ರವಾಸಿಗರಿಗೆ ತೋರಿಸುವ ಕಾರ್ಯವಾಗಬೇಕಿದೆ. ಈ ನಿಟ್ಟಿನಲ್ಲಿ 2016-17ನೇ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡನೆಯಲ್ಲಿ ಲಕ್ಕುಂಡಿ ಪ್ರಾಧಿಕಾರ ರಚಿಸುವ ಕುರಿತು ಉಲ್ಲೇಖಿಸಿದ್ದರು. ಇಂದು ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಗದಗ ಜಿಲ್ಲಾ ಕೇಂದ್ರದ ಜಿಲ್ಲಾಡಳಿತ ಭವನದಲ್ಲಿ ಕಾರ್ಯಾಲಯ ಪುನರಾರಂಭ ಮಾಡಿದೆ. ಈ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವರು. ಅಲ್ಲದೇ ಲಕ್ಕುಂಡಿ ಅಭಿವೃದ್ಧಿ ರಾಜ್ಯ ಸಲಹಾ ಸಮಿತಿ ರಚಿಸಲಾಗಿದ್ದು, ಸಮಿತಿಯ ಅಧ್ಯಕ್ಷರಾಗಿ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಉಪಾಧ್ಯಕ್ಷರುಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಇರುತ್ತಾರೆ” ಎಂದರು.
ಪತ್ತೆ ಮಾಡಲಾದ ಮೊಬೈಲ್ ಪೋನ್, ಆಭರಣಗಳನ್ನು ಮೂಲ ಮಾಲೀಕರಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಹಸ್ತಾಂತರಿಸಿದರು. ಥರ್ಡ್-ಐ ಅನುಷ್ಠಾನದಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದರು.
ಈ ಸುದ್ದಿ ಓದಿದ್ದೀರಾ? ಭಾರತದ ಭಾವೈಕ್ಯತಾ ಪರಂಪರೆ ಕಾಪಾಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ ಭರವಸೆ
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜಿ ಎಸ್ ಪಾಟೀಲ, ಬೆಳಗಾವಿ ನರಗ ಪೊಲೀಸ್ ಆಯುಕ್ತ ಎಸ್ ಸಿದ್ದರಾಮಪ್ಪ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಇದ್ದರು.
ಇದೇ ಸಂದರ್ಭದಲ್ಲಿ ಪತ್ತೆ ಮಾಡಲಾದ ಮೊಬೈಲ ಪೋನ, ಆಭರಣಗಳನ್ನು ಮೂಲ ಮಾಲೀಕರಿಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಹಸ್ಥಾಂತರಿಸಿದರು. ಥರ್ಡ-ಐ ಅನುಷ್ಠಾನದಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದರು.