ಗದಗ | ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

Date:

“ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚಿಸಿದರು.

- Advertisement -

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ( ನವೆಂಬರ್ 11 ರಂದು)   ಜಿಲ್ಲಾ ಮಟ್ಟದ ಪ.ಜಾ/ ಪ.ಪಂ.  ಜಿಲ್ಲಾ ಜಾಗೃತ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

“ಜಿಲ್ಲೆಯಲ್ಲಿನ  ಪ್ರತಿಷ್ಟಿತ ಶಾಲೆಗಳಿಗೆ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಶಾಲೆಗಳಲ್ಲಿನ ಮೂಲ ಸೌಕರ್ಯ ಹಾಗೂ  ಶೈಕ್ಷಣಿಕ ಪ್ರಗತಿ ಕುರಿತು ನಡೆಸಬೇಕು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಯಾವುದೇ ತಾರತಮ್ಯ ಮಾಡದೇ ಎಲ್ಲರಿಗೂ ಪ್ರೋತ್ಸಾಹಿಸುವಂತಾಗಬೇಕು. ಗುಣಮಟ್ಟದ ಶಿಕ್ಷಣವನ್ನು  ಶಾಲಾ ಮಕ್ಕಳಿಗೆ ನೀಡುವುದು ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ  ಅಧಿಕಾರಿಗಳು ಕ್ರಮ ವಹಿಸಬೇಕು” ಎಂದರು.

“ಪರಿಶಿಷ್ಟ ಸಮುದಾಯ ಕಾಲೋನಿಗಳಲ್ಲಿ  ರಸ್ತೆ, ವಿದ್ಯುತ್ ಪೂರೈಕೆ , ಸಮರ್ಪಕ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಮೂಲಭೂತ ಸೌಕರ್ಯಗಳು ಒದಗುವಂತೆ ನೋಡಿಕೊಳ್ಳಬೇಕು. ಪ.ಜಾ/ ಪ.ಪಂ. ದೌರ್ಜನ್ಯ ಪ್ರಕರಣದಡಿ ಅರ್ಹ ಸಂತ್ರಸ್ಥರಿಗೆ ಪರಿಹಾರ ಧನ ಒದಗಿಸುವಲ್ಲಿ ವಿನಾ ಕಾರಣ ವಿಳಂಬ ಮಾಡಬಾರದು. ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ವಿಳಂಬವಾಗದಂತೆ ಒದಗಿಸಬೇಕು.  ಅರ್ಹರಿಗೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. 

“ಎಸ್‌ಸಿಪಿ / ಟಿಎಸ್‌ಪಿ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಬೇಕು. ಪ.ಜಾ ಪ.ಪಂ ಜನರಿಗೆ  ತಲುಪಬೇಕಾದ  ವಸತಿ. ವೈದ್ಯಕೀಯ. ಶಿಕ್ಷಣ ಸೇರಿದಂತೆ ವಿವಿಧ ಸೌಲಭ್ಯಗಳು ಅರ್ಹರಿಗೆ ಸಕಾಲದಲ್ಲಿಯೆ ದೊರಕಬೇಕು. ಫಲಾನುಭವಿಗಳ ಆಯ್ಕೆಪಟ್ಟಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಯಾವುದೇ ಕಾರಣಕ್ಕೂ ಸೌಲಬ್ಯಗಳ ವಿತರಣೆಯಲ್ಲಿ  ದುರುಪಯೋಗವಾಗಬಾರದು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್  ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ  ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸರ್ಕಾರಿ ವಕೀಲರು ಮಲ್ಲಿಕಾರ್ಜುನಗೌಡ ದೊಡ್ಡನಗೌಡ್ರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ,  ಡಿಡಿಪಿಐ ಕೆ.ಡಿ.ಬಡಿಗೇರ, ಗದಗ ಬೆಟಗೇರಿ ನಗರಸಭೆಯ ಪೌರಾಯುಕ್ತ ರಾಜರಾಮ ಪವಾರ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್, ನಾಮನಿರ್ದೇಶಿತ  ಸದಸ್ಯರು  ಶರೀಫ್ ಬಿಳೆಯಲಿ, ವಿನಾಯಕ ಎಸ್ ಬಳ್ಳಾರಿ, ತುಕ್ಕಪ್ಪ ಚಂದಪ್ಪ ಪೂಜಾರ, ಸಂಗಮೇಶ ಹಾದಿಮನಿ,ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ. ನಂದಾ ಹಣಬರಟ್ಟಿ ಸರ್ವರನ್ನು ಸ್ವಾಗತಿಸಿ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಶಾಖೆಯೂ ಶೀಘ್ರದಲ್ಲೇ ಮೌಲ್ಯಯುತ ಗ್ರಾಹಕರನ್ನು ಹೊಂದಿ ಅಭಿವೃದ್ಧಿ ಹೊಂದಲಿ: ಸುಧಾ ನಿತ್ಯಾನಂದ

ಉಭಯ ಜಿಲ್ಲೆಗಳಲ್ಲಿ ಐದು ಶಾಖೆಗಳನ್ನು ಹೊಂದಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್...

ಮೈಸೂರಿನಲ್ಲಿ ನ.13ರಂದು ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸೋದ್ಯಮ ಹಾಗೂ ವಿಜ್ಞಾನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು...

ದಕ್ಷಿಣ ಕನ್ನಡ | ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರು: ಹೈನುಗಾರಿಕೆಯನ್ನು ಬಲಪಡಿಸಿ, ರೈತರ ಹಿತವನ್ನು ಕಾಪಾಡುವ ಉದ್ದೇಶದಿಂದ ಹಾಲಿನ ದರ...

ಬಾಗಲಕೋಟೆ |ಜಿಲ್ಲೆಯ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ: ವೀಣಾ ಕಾಶಪ್ಪನವರಿಗೆ ಕುತ್ಬುದ್ದೀನ್ ಖಾಜಿ ಮನವಿ

ಜಿಲ್ಲೆಯ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ...