ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

Date:

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ ಮೇಲೆ ನಡೆದಿರುವ ಅಮಾನವೀಯ ಹಲ್ಲೆ ಮತ್ತು ಜಾತಿ ನಿಂದನೆಯ ಘಟನೆಯನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

- Advertisement -

ಘಟನೆಯ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ರೋಣ ಪಟ್ಟಣದ ಪೋಲಿಸ್ ಠಾಣೆ ಎದುರು ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ ಮೇಲೆ ನಡೆದಿರುವ ಅಮಾನವೀಯ ಹಲ್ಲೆ ಮತ್ತು ಜಾತಿ ನಿಂದನೆಯ ಘಟನೆಯನ್ನು ಖಂಡಿಸಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

 “ದಿನಾಂಕ 20/03/2026 ರಂದು ರಾತ್ರಿ ಅಂದಪ್ಪ ಮಾದರ ಅವರು ರೋಣದಿಂದ ಜಕ್ಕಲಿಗೆ ಬರುತ್ತಿದ್ದಾಗ, ಸಾರ್ವಜನಿಕ ರಸ್ತೆಯಲ್ಲಿ ಲಾರಿಗಳನ್ನು ಅಡ್ಡಗಟ್ಟಿ ಗಲಾಟೆ ಮಾಡಿದ್ದಲ್ಲದೆ, ಸ್ಥಳೀಯರಾದ ಸಂದೇಶ ಮೇಟಿ ಮತ್ತು ವೀರಭದ್ರಪ್ಪ ಗಾಣಿಗೇರ ಎಂಬುವವರು ಸೇರಿಕೊಂಡು ದಲಿತ ಯುವಕರನ್ನು ಜಾತಿ ಹಿಡಿದು ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ ಮತ್ತು ಕಾನೂನುಬಾಹಿರ ಕೃತ್ಯವಾಗಿದೆ” ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನರೇಗಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ SC/ST ದೌರ್ಜನ್ಯ ತಡೆ ಕಾಯ್ದೆಯಡಿ FIR ದಾಖಲಾಗಿ ಮೂರು ದಿನಗಳಾಗುತ್ತಾ ಬಂದರೂ, ಪೊಲೀಸರು ಈವರೆಗೂ ಪ್ರಮುಖ ಆರೋಪಿಗಳನ್ನು ಬಂಧಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಆರೋಪಿಗಳ ಹಿಂದೆ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರೂ ಪೊಲೀಸರು ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“FIR ನಲ್ಲಿ ಹೆಸರಿಸಲಾದ ಎಲ್ಲಾ ಆರೋಪಿಗಳನ್ನು ಮತ್ತು ಆ ಐದು ಲಾರಿಗಳನ್ನು ತಕ್ಷಣವೇ ವಶಕ್ಕೆ ಪಡೆಯಬೇಕು. ಸಂತ್ರಸ್ತ ಅಂದಪ್ಪ ಮಾದರ ಮತ್ತು ಸಾಕ್ಷಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯು ಕೂಡಲೇ ಸಂತ್ರಸ್ತರಿಗೆ ನಿಯಮಾನುಸಾರ ಪರಿಹಾರ ಧನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಒಂದು ವೇಳೆ ಪೊಲೀಸರು ವಿಳಂಬ ಧೋರಣೆ ಅನುಸರಿಸಿದರೆ, ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳನ್ನು ಒಗ್ಗೂಡಿಸಿ ರೋಣ ತಾಲ್ಲೂಕು ಕಚೇರಿ ಹಾಗೂ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ. 

ಪ್ರತಿಭಟನಾ ಸ್ಥಳಕ್ಕೆ ಎಡಿಷನಲ್ ಎಸ್ಪಿ ಬೇಟಿ ನೀಡಿದ್ದು ದಲಿತ ಮುಖಂಡರ ಮನವಿ ಸ್ವೀಕರಿಸಿ, “ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಮುಖಂಡರು ರಮೇಶ ಕಡೆಮನಿ, ಡಿ.ಜೆ ಕಟ್ಟಿಮನಿ, ಅಭಿಷೇಕ್, ಸೋಮು ನಾಗರಾಜ, ಮಾರುತಿ ಹಾದಿಮನಿ, ಚಂದ್ರು ಹಂಚಿನಾಳ, ಮಲ್ಲು ಮಾದರ, ಸುರೇಶ ನಡುವಿನಮನಿ ನಿಂಗಪ್ಪ ಚಿಕ್ಕಮನ್ನೂರು, ಶರಣಪ್ಪ ದೊಡ್ಡಮನಿ, ಹನಮಂತ ದಾಸಲ ಸೇರೊದಂತೆ ಇನ್ನೂ ಅನೇಕರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...