ಗದಗ | ಬೆಳೆ ನಷ್ಟ ಪರಿಹಾರಕ್ಕೆ ದತ್ತಾಂಶ, ಜಂಟಿ ಕ್ಷೇತ್ರ ಸಮೀಕ್ಷೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

Date:

“ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆಯ ವ್ಯತ್ಯಯ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಬೆಳೆಗಳು ಎದುರಿಸುತ್ತಿರುವ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ‘ಮಧ್ಯ ಋತು ಸಂಕಷ್ಟ’ (Mid-Season Adversity) ನಿಯಮಾವಳಿಗಳನ್ನು ಜಾರಿಗೊಳಿಸುವ (invoke) ಕುರಿತು ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಒದಗಿಸಲು ಉಪಗ್ರಹ ದತ್ತಾಂಶ ಹಾಗೂ ಜಂಟಿ ಕ್ಷೇತ್ರ ಸಮೀಕ್ಷೆಗೆ ಸೂಚನೆ ನೀಡಬೇಕು” ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ತಿಳಿಸಿದರು.

- Advertisement -

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಗಸ್ಟ್ (20)ರಂದು ಜರುಗಿದ ಮುಂಗಾರು ಹಂಗಾಮಿನ ಬೆಳೆಗಳಿಗೆ ‘ಮಧ್ಯ ಋತು ಸಂಕಷ್ಟ’ (Mid-Season Adversity) ಜಾರಿ ಕುರಿತು   ಜಿಲ್ಲಾ ಮಟ್ಟದ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

​ಜಿಲ್ಲಾಧಿಕಾರಿಗಳು ಮಾತನಾಡಿ, “ಪ್ರಸಕ್ತ ಮುಂಗಾರು ಋತುವಿನಲ್ಲಿ ಎದುರಾಗಿರುವ ಪ್ರಕೃತಿ ವಿಕೋಪ ಹಾಗೂ ಬರದಂತಹ ಹವಾಮಾನ ಪರಿಸ್ಥಿತಿಯಿಂದಾಗಿ ರೈತರ ಬೆಳೆಗಳು ತೀವ್ರ ಹಾನಿಗೊಳಗಾಗಿವೆ. ಆದ್ದರಿಂದ ರೈತರಿಗೆ ಶೀಘ್ರವಾಗಿ ಆರ್ಥಿಕ ನೆರವು ಕಲ್ಪಿಸಲು ‘ಮಿಡ್ ಸೀಸನ್ ಅಡ್ವರ್ಸಿಟಿ’ ನಿಯಮದಡಿ ಪರಿಹಾರ ಕಲ್ಪಿಸುವುದು ಅಗತ್ಯವಾಗಿದೆ. “ಮಳೆ ಅಭಾವ ಅಥವಾ ದೀರ್ಘಕಾಲದ ಒಣ ಹವೆಯಿಂದಾಗಿ ಶೇ. 50 ಕ್ಕಿಂತ ಹೆಚ್ಚು ಬೆಳೆ ನಷ್ಟ ಉಂಟಾಗಿರುವ ಸಾಧ್ಯತೆ ಇರುವ ಪ್ರದೇಶಗಳನ್ನು ನಿಖರವಾಗಿ ಗುರುತಿಸಬೇಕು” ಎಂದು ಹೇಳಿದರು.

“ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಮಾರ್ಗದರ್ಶಿ ಸೂತ್ರಗಳನ್ವಯ ರೈತರಿಗೆ ಶೇ. 25 ರಷ್ಟು ಮುಂಗಡ ಮಧ್ಯಂತರ ಪರಿಹಾರ ತಲುಪಿಸಲು ಅಗತ್ಯ ಕ್ರಮ ವಹಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ವಿಮಾ ಸಂಸ್ಥೆಗಳು ತಕ್ಷಣವೇ ಜಂಟಿ ಕ್ಷೇತ್ರ ಪರಿಶೀಲನೆ ನಡೆಸಿ, ನಿಯಮಾವಳಿಗಳಂತೆ ವರದಿ ಸಲ್ಲಿಸಬೇಕು” ಎಂದು ಅಧಿಕಾರಿಗಳಿಗೆ ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳಿಗೆ ಸೂಚಿಸಿದರು.

ಬೆಳೆಗಳ ಬೆಳವಣಿಗೆ ಹಾಗೂ ತೇವಾಂಶದ ಕೊರತೆಯನ್ನು ನಿಖರವಾಗಿ ವಿಶ್ಲೇಷಿಸಲು NDVI, NDWI ಮತ್ತು ಕೆ.ಎಸ್.ಎನ್.ಎಂ.ಡಿ.ಸಿ (KSNMDC) ಯ ಮಳೆ ಆಧಾರಿತ ಉಪಗ್ರಹ ದತ್ತಾಂಶಗಳನ್ನು (Satellite Data) ಬಳಸಿಕೊಳ್ಳಲು ತೀರ್ಮಾನಿಸಲಾಯಿತು. ​ಜಂಟಿ ಕ್ಷೇತ್ರ ಸಮೀಕ್ಷೆ ನಡೆಸಲು ವಿಮಾ ಕಂಪನಿ, ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡವು ಬಾಧಿತ ಕೃಷಿ ಕ್ಷೇತ್ರಗಳಲ್ಲಿ ಪ್ರತ್ಯಕ್ಷ ಪರಿಶೀಲನೆ ನಡೆಸಿ ಶೀಘ್ರ ವರದಿ ಸಲ್ಲಿಸಲು ನಿರ್ದೇಶಿಸಿದರು.

ಬೆಳೆ ಕೊಯ್ಲು ಮುಕ್ತಾಯಗೊಳ್ಳುವ ಮುನ್ನವೇ ಎಂ.ಎಸ್.ಎ (MSA) ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ರೈತರಿಗೆ ನ್ಯಾಯಯುತ ಪರಿಹಾರ ಸಿಗುವಂತೆ ನೋಡಿಕೊಳ್ಳಲು ಸೂಚಿಸಲಾಯಿತು.

​ಜಂಟಿ ಕೃಷಿ ನಿರ್ದೇಶಕಿ  ಶ್ರೀಮತಿ ಚೇತನಾ ಪಾಟೀಲ್ ಅವರು ಮಾತನಾಡಿ, “ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ಹಾಗೂ ಇತರ ಬೆಳೆಗಳ ಪ್ರಸ್ತುತ ಸ್ಥಿತಿಗತಿಯನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ. ಎನ್.ಡಿ.ವಿ.ಐ (NDVI) ಹಾಗೂ ತೇವಾಂಶ ಸೂಚಿ ಆಧಾರಿತ ಮಾಹಿತಿಗಳನ್ನು ಪರಿಶೀಲಿಸಿ, ಎಂ.ಎಸ್.ಎ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸಕ್ರಿಯಗೊಳಿಸಬಹುದಾದ ಬೆಳೆ ನಿಯೋಜಿತ ಘಟಕಗಳನ್ನು (Insurance Unit – IU) ಗುರುತಿಸಲಾಗುತ್ತಿದೆ,” ಎಂದು ಮಾಹಿತಿ ನೀಡಿದರು.

“​ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ, ಯಾವುದೇ ಅರ್ಹ ರೈತರು ಯೋಜನೆಯ ಸೌಲಭ್ಯದಿಂದ ವಂಚಿತರಾಗದಂತೆ ಎಚ್ಚರವಹಿಸಬೇಕು” ಎಂದು ಅವರು ಮನವಿ ಮಾಡಿದರು.

“ಕೃಷಿ ಇಲಾಖೆಯು ಕಂದಾಯ ಮತ್ತು ವಿಮಾ ಕಂಪನಿಗಳೊಂದಿಗೆ ಒಗ್ಗೂಡಿ ಹಾನಿಯ ಪ್ರಮಾಣವನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಲಿದೆ. ನೋಂದಾಯಿತ ಅರ್ಹ ರೈತರಿಗೆ ನಿಯಮಾನುಸಾರ ವಿಮಾ ಸೌಲಭ್ಯ ದೊರಕಿಸಲು ಇಲಾಖೆ ಬದ್ಧವಾಗಿದೆ” ಎಂದು  ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬೆಳೆಗಳ ಪ್ರಸ್ತುತ ಸ್ಥಿತಿಗತಿ ಹಾಗೂ ರೈತರಿಗೆ ವಿಮಾ ಯೋಜನೆಯಡಿ ತಕ್ಷಣದ ಮಧ್ಯಂತರ ಪರಿಹಾರ ಒದಗಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.

​ಈ ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಕೆ.ಎಸ್.ಎನ್.ಎಂ.ಡಿ.ಸಿ ಪ್ರತಿನಿಧಿಗಳು ಹಾಗೂ ವಿಮಾ ಕಂಪನಿಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...