ಗದಗ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತೆ ಆಗ್ರಹ

Date:

“ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಂಬಂಧಿತ ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

- Advertisement -

ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಸೋಲಿಡೆಟಾರಿಟಿ ಯೂತ್ ಮೂವಮೆಂಟ್ ಸಂಘಟನೆಯ ಮುಖಂಡರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ರಾಷ್ಟ್ರೀಯ ಶಿಕ್ಷಣ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಖಚಿತಪಡಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಉಪವಾಸ ಸತ್ಯಾಗ್ರಹ ಹಾಗೂ ಸಾರ್ವಜನಿಕ ಅಭಿಯಾನವು, ಬಾಧಿತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು, ತಪ್ಪಿತಸ್ಥರನ್ನು ಹೊಣೆಗಾರರನ್ನಾಗಿ ಮಾಡುವುದು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಜಾರಿಗೊಳಿಸುವ ಅಗತ್ಯತೆಗಳನ್ನು ಕೈಗೊಳ್ಳಬೇಕು” ಎಂದು ಸೋಲಿಡೆಟಾರಿಟಿ ಯೂತ್ ಮೂವಮೆಂಟ್ ಮುಖಂಡರು ಒತ್ತಾಯಿಸಿದರು.

Advertisements

“ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ವಿಶ್ವಾಸ ಕುಸಿಯುತ್ತಿರುವ ಗಂಭೀರ ಪರಿಸ್ಥಿತಿ ಎದುರಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಹಲವು ವರ್ಷಗಳ ಕಾಲ ಶ್ರಮಿಸುತ್ತಾರೆ. ಅವರ ಕುಟುಂಬಗಳು ಸಹ ಅಪಾರ ಆರ್ಥಿಕ ಹಾಗೂ ವೈಯಕ್ತಿಕ ತ್ಯಾಗಗಳನ್ನು ಮಾಡಿರುವರು” ಎಂದರು.

“ಇಂತಹ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ಆಡಳಿತಾತ್ಮಕ ನಿರ್ಲಕ್ಷ್ಯ ಅಥವಾ ಪಾರದರ್ಶಕತೆಯ ಕೊರತೆ ಉಂಟಾದರೆ ಅದು ಅರ್ಹ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗುವುದು. ಅಲ್ಲದೆ ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೂ ಕುಂದಿಸುತ್ತದೆ.” ಎಂದು ಮುಖಂಡರು ಹೇಳಿದರು.

“ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಂಬಂಧಿತ ಅಕ್ರಮಗಳ ಕುರಿತು ಸ್ವತಂತ್ರ, ನಿಷ್ಪಕ್ಷಪಾತ ಮತ್ತು ಕಾಲಮಿತಿಯ ತನಿಖೆ ನಡೆಸಬೇಕು. ಇದರಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಸಂಸ್ಥೆಗಳು, ಮಧ್ಯವರ್ತಿಗಳು ಹಾಗೂ ಸಂಘಟಿತ ಜಾಲಗಳ ಪಾತ್ರವನ್ನು ಸಮಗ್ರವಾಗಿ ತನಿಖೆ ಮಾಡಬೇಕು. ನೀಟ್ ಪರೀಕ್ಷೆಯ ಗೌಪ್ಯತೆಯನ್ನು ಕಾಪಾಡುವಲ್ಲಿ ವಿಫಲರಾದ ಎಲ್ಲ ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಮತ್ತು ಇಲಾಖಾ ಮಟ್ಟದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಬಾಧಿತ ವಿದ್ಯಾರ್ಥಿಗಳಿಗೆ ನ್ಯಾಯ ಮತ್ತು ಪರಿಹಾರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ರಕ್ಷಿಸಬೇಕು. ಅಗತ್ಯವಿರುವಲ್ಲಿ ಸೂಕ್ತ ತಿದ್ದುಪಡಿ ಕ್ರಮಗಳು, ಆರ್ಥಿಕ ನೆರವು, ಮಾನಸಿಕ ಸಮಾಲೋಚನಾ ಸೇವೆ ಹಾಗೂ ಹೆಚ್ಚುವರಿ ಪರೀಕ್ಷಾ ಅವಕಾಶಗಳನ್ನು ಒದಗಿಸಬೇಕು” ಎಂದರು.

“ಸಂವಾದ ಹಾಗೂ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆ ಸರ್ಕಾರವು ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಹಾಗೂ ಸಂಬಂಧಿತ ನಾಗರಿಕರೊಂದಿಗೆ ಅರ್ಥಪೂರ್ಣ ಸಂವಾದ ನಡೆಸಬೇಕು. ನ್ಯಾಯಸಮ್ಮತ ಬೇಡಿಕೆಗಳನ್ನು ಮಂಡಿಸುವ ಹಾಗೂ ಶಾಂತಿಯುತ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಭಾಗವಹಿಸುವ ಸಂವಿಧಾನಬದ್ಧ ಹಕ್ಕನ್ನು ಗೌರವಿಸಿ ರಕ್ಷಿಸಬೇಕು” ಎಂದರು.

ಮನವಿ ಸಂದರ್ಭದಲ್ಲಿ ಸೋಲಿಡೆಟಾರಿಟಿ ಯೂತ್ ಮೂವಮೇಂಟ್ ಜಿಲ್ಲಾಧ್ಯಕ್ಷರು ಮಹಮ್ಮದ್ ಯೂಸೂಫ್ ಮುಲ್ಲಾ, ಸಂಘಟನೆ ಮುಖಂಡರು ರೀಯಾಜ್ ಶೈಖ್, ಮುನ್ನಾ ಕಲ್ಮನಿ, ಬಾಶಾಸಾಬ್ ಮಲಸಮುದ್ರ, ಯೂಸುಫ್ ನಮಾಜಿ, ಬಾಬಜಾನ್ ಬಳಗಾನೂರು, ಮುನ್ನಾ ಶೈಖ್, ದಾದಾಪೀರ್ ಮುಂಡರಗಿ, ಬಿಲಾಲ್ ಗೋಕಾವಿ, ಮೆಹಬೂಬ್ ರೋಣ, ಅತೀಕ್ ಡಂಬಳ, ಅಕ್ಬರ್ ಅತ್ತರ, ವಾಸಿಮ್ ನದಾಫ್, ಹಜರತ್ ಪಟ್ಟಣದ, ಜಾಹೀರ್ ಅಹ್ಮದ್ ಅವರಸಂಗ್ ಹಾಗೂ ರಿಯಾಜ್ ಅಹ್ಮದ್ ಗುಡಿಸಲ್ಮನಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...