ಗದಗ | ಬುದ್ದ, ಬಸವಣ್ಣ, ಅಂಬೇಡ್ಕರ್ ಬಗ್ಗೆ ಅವಹೇಳನ; ಆರೋಪಿ ಗಡಿಪಾರಿಗೆ ಆಗ್ರಹ

Date:

“ಸಂವಿಧಾನ ಶಿಲ್ಪಿ ಡಾ:ಬಿ.ಆರ್.ಅಂಬೇಡ್ಕರ್, ಬುದ್ದ ಹಾಗೂ ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತಡಿರುವ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ದೊಡ್ಡಯಾಚೆನಹಳ್ಳಿಯ ವೇದಮೂರ್ತಿ ಎಂಬ ಕೋಮುವಾದಿಯನ್ನು ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ಆಗ್ರಹಿಸಿ ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಎದರು ಸ್ಲಂ ಜನಾಂದೋನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರು ಇಮ್ತಿಯಾಜ.ಆರ್.ಮಾನ್ವಿ ಮಾತನಾಡಿ, “ಬುದ್ದ, ಬಸವ, ಅಂಬೇಡ್ಕರ್ ಅವರು ನಮ್ಮ ದೇಶದಲ್ಲಿ ಜಾತಿ, ಧರ್ಮದ ಭೇದಭಾವನ್ನು ತೊಡೆದು, ಎಲ್ಲರೂ ಒಂದಾಗಿ ಬದುಕನ್ನು ನಡೆಸಬೇಕೆಂದು ಜಗತ್ತಿಗೆ ಶಾಂತಿಯ ಸಂದೇಶ ಸಾರಿದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಾಲಾಯಕ ಸಂವಿಧಾನ ವಿರೋಧಿ ವೇದಮೂರ್ತಿ ಎಂಬುವನ ವಿರುಧ್ದ ರಾಷ್ಟ್ರ ದ್ರೋಹ ಪ್ರಕರಣವನ್ನು ದಾಖಲಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೀಸಲಾತಿ ಸೇರಿದಂತೆ ಸಂವಿಧಾನಾತ್ಮಕ ವಿಚಾರಗಳ ಬಗ್ಗೆಯೂ ಅಕ್ಷೇಪಾರ್ಹ ರೀತಿಯಲ್ಲಿ ಹೇಳಿಕೆ ನೀಡಿರುವುದು ಇಂತಹ ಹೇಳಿಕೆಗಳು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದಲ್ಲದೆ, ಸಮಾಜದಲ್ಲಿ ಅಶಾಂತಿ ಹಾಗೂ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಯಾಗುವ ಸಾಧ್ಯತೆಯಿದೆ ಹಾಗಾಗಿ ಇಂತಹವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

“ಬೆಂಗಳೂರು ನಗರಾಭಿವೃಧ್ದಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಪೌರಕಾರ್ಮಿಕರು ಭೇಡಿ ಮಾಡಿದ ಪೌರ ಕಾರ್ಮಿಕರು ‘ನಾವು ಸುಮಾರು ದಶಕಗಳಿಂದ ಗುತ್ತಿಗೆ ಆದಾರದಲ್ಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗುತ್ತದೆ. ನಮ್ಮ ಕೆಲಸವನ್ನು ಕಾಯಂ ಮಾಡಿ ನ್ಯಾಯ ದೂರಕಿಸಿ ಕೊಡಿ’ ಎಂದು ಕೇಳಿದರೆ ಸಚಿವರು ಪೌರಕಾರ್ಮಿರ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ದರ್ಪದಿಂದ ಮಾಡನಾಡಿರುವುದನ್ನು ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಖಂಡಿಸುತ್ತೇವೆ” ಎಂದರು.

ಪೌರಕಾರ್ಮಿಕರಿಗೆ ಗುತ್ತಿಗೆದಾರರಿಂದ ನೀಡಲಾಗುತ್ತಿರುವ ಕನಿಷ್ಟ ಸಂಬಳದಲ್ಲಿ ಈಗಿನ ಬೆಲೆ ಏರಿಕೆ ಕಾಲದಲ್ಲಿ ಒಂದು ಕುಟುಂಬ ನಿರ್ವಹಣೆ ಮಾಡಲು ಹೇಗೆ ಸಾಧ್ಯ ಎಂಬ ಕನಿಷ್ಟ ಜ್ಞಾನ ಇಲ್ಲದ ಸಚಿವರು ಪೌರಕಾರ್ಮಿರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದು ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕು. ಸಚಿವರು ಕೊಡಲೇ ರಾಜ್ಯದ ಜನತೆಯಲ್ಲಿ ಬಹಿರಂಗವಾಗಿ ಕ್ಷೇಮೆಯನ್ನು ಕೇಳಬೇಕು” ಎಂದು ಒತ್ತಾಯಿಸಿದರು. 

ಮನವಿ ಸಂದರ್ಭದಲ್ಲಿ ಎಂ.ಬಿ.ನದಾಫ ವಕೀಲರು, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಸ್ಲಂ ಸಮಿತಿ ಮುಖಂಡರು ಶರಣಪ್ಪ ಸೂಡಿ, ಇಬ್ರಾಹಿಂ ಮುಲ್ಲಾ, ಮೆಹಬೂಬಸಾನ ಬಳ್ಳಾರಿ, ಪುಷ್ಪಾ ಬಿಜಾಪೂರ, ಸಲೀಂ ಹರಿಹರ, ಖಾಜಾಸಾಬ ಇಸ್ಮಾಯಿಲನವರ, ಸಾಕ್ರುಬಾಯಿ ಗೋಸಾವಿ, ಮಕ್ತುಮಸಾಬ ಮುಲ್ಲಾನವರ, ಅಫ್ರೋಜಾ ಗುಳಗುಂದಿ, ಗೌಸಸಾಬ ಅಕ್ಕಿ, ರವಿ ಗೋಸಾವಿ, ಮಾಲಾ ಗೋಸಾವಿ ಹಾಗೂ ವಿವಿಧ ಸ್ಲಂ ಪ್ರದೇಶದ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...