ಗದಗ | ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿ ಚಳವಳಿಗೆ ಸಿಕ್ಕ ಜಯ: ಮುತ್ತು ಬಿಳಿಯಲಿ ಪ್ರತಿಕ್ರಿಯೆ

Date:

“ಕಾಕ್ರೋಚ್ ಜನತಾ ಪಾರ್ಟಿ ಹಾಗೂ ದೇಶದ ಎಡ ರಂಗದ ವಿದ್ಯಾರ್ಥಿ ಸಂಘಟನೆಗಳ ಹೋರಾಟಕ್ಕೆ ಮಣಿದು, ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರು ಪ್ರಧಾನ ಮಂತ್ರಿಗಳಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇದು ವಿದ್ಯಾರ್ಥಿ ಚಳವಳಿಗೆ ಸಿಕ್ಕ ಜಯ” ಎಂದು ಸಮಾಜಿಕ ಹೋರಾಟಗಾರ ಮುತ್ತು ಬಿಳಿಯಲಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

ಗದಗ ಪಟ್ಟಣದಲ್ಲಿ ಅವರು ಈದಿನ.ಕಾಮ್ ಗೆ ಪ್ರತಿಕ್ರಿಯೆ ನೀಡಿ, “ದೇಶದಲ್ಲಿ NEET ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವೈದ್ಯರಾಗುವ ಕನಸನ್ನು ಹೊತ್ತಿದ್ದ 20 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಇಡೀ ದೇಶದ ಸುದ್ದಿಯಾಗಿತ್ತು. ಇದನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿಯ ಸ್ಥಾಪಕ ಅಭಿಜಿತ್ ದೀಪ್ಕೆ ಹಾಗೂ ದೇಶದ ಎಡರಂಗದ ವಿದ್ಯಾರ್ಥಿ ಸಂಘಟನೆಗಳು ಸೇರಿ ದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರು ರಾಜೀನಾಮೆ ಸಲ್ಲಿಸಬೇಕು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರ ನ್ಯಾಯವನ್ನು ಒದಗಿಸಬೇಕೆಂದು ನಿರಂತರವಾಗಿ ಹೋರಾಟ ಮಾಡುತ್ತ ಬಂದಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...
1003789511

“ಅಭಿಜಿತ್ ದೀಪ್ಕೆ ಹಾಗೂ ಎಡರಂಗದ ವಿದ್ಯಾರ್ಥಿ ಸಂಘಟನೆಗಳ ಈ ಹೋರಾಟಕ್ಕೆ ಲಡಾಖ್ ನ ಮಾನವ ಹಕ್ಕುಗಳ ಹೋರಾಟಗಾರ ಸೊನಮ್ ವಾಂಗ್ಚುಕ್ ಅವರು ಜೊತೆಗೂಡಿಕೊಂಡ ನಂತರ ಈ ಹೋರಾಟಕ್ಕೆ ಮತ್ತಷ್ಟು ಬಲ ತಂದು ಕೊಟ್ಟಿತು.ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸೋನಮ್ ವಾಂಗ್ಚೂಕ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರು ರಾಜೀನಾಮೆ ನೀಡುವವರೆಗೂ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡರು” ಎಂದು ತಿಳಿಸಿದರು.

“ಸೋನಮ್ ವಾಂಗ್ಚೂಕ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಯ್ತು.ಗದಗ ಜಿಲ್ಲೆಯಲ್ಲಿಯೂ ಸಮಾನತೆಗಾಗಿ ನಾವು ಎಂಬ ವೇದಿಕೆಯಿಂದ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ನಗರದ ಗಾಂಧಿ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗಿತ್ತು” ಎಂದರು.

“ಇಂದು ಕಾಕ್ರೋಚ್ ಜನತಾ ಪಾರ್ಟಿ ಹಾಗೂ ದೇಶದ ಎಡ ರಂಗದ ವಿದ್ಯಾರ್ಥಿ ಸಂಘಟನೆಗಳ ಹೋರಾಟಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರು ಪ್ರಧಾನ ಮಂತ್ರಿಗಳಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇದು ದೇಶದ ವಿದ್ಯಾರ್ಥಿ ಚಳವಳಿಗೆ ಸಿಕ್ಕ ಜಯ” ಎಂದು ಬಣ್ಣಿಸಿದ್ದಾರೆ. 

“ಬರೀ ಶಿಕ್ಷಣ ಸಚಿವರ ರಾಜೀನಾಮೆಯಿಂದ ಹೋರಾಟ ಅಂತ್ಯಗೊಳಿಸಬಾರದು. ಕಾಕ್ರೋಚ್ ಜನತಾ ಪಾರ್ಟಿ ಹಾಗೂ ವಿದ್ಯಾರ್ಥಿ ಸಂಘಟನೆಗಳ ಉಳಿದ  ಹಕ್ಕೋತ್ತಾಯಗಳನ್ನು ಕೇಂದ್ರ ಸರ್ಕಾರ ಈಡೇರಿಸಿ ಡಾಕ್ಟರ್ ಆಗುವ ಕನಸನ್ನು ಹೊತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಆಗ್ರಹಿಸುತ್ತೆವೆ” ಎಂದು ಮುತ್ತು ಬಿಳಿಯಲಿ ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...

ರಾಯಚೂರು | ಉದ್ರಿ ಕೊಡಲಿಲ್ಲವೆಂದು ಅಂಗಡಿ ಮಾಲೀಕನ ಬರ್ಬರ ಕೊಲೆ

ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ...

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...