ಗದಗ | ಚುನಾವಣೆ ಕರ್ತವ್ಯ ಜವಾಬ್ದಾರಿಯಿಂದ ನಿರ್ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

Date:

“ಕರ್ನಾಟಕ ಪಶ್ಚಿಮ ಪಧವಿದರ ದೈವಾರ್ಷಿಕ ಚುನಾವಣಾ2026 ರ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ, ಪಾರದರ್ಶಕವಾಗಿ ಮತ್ತು ಯಾವುದೇ ಲೋಪದೋಷಗಳಿಲ್ಲದೆ ಕಾರ್ಯ ನಿರ್ವಹಿಸಬೇಕು” ಎಂದು  ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.  

- Advertisement -

ಗದಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಅಕ್ಟೋಬರ್ (14)​ರಂದು ಜರುಗಿದ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ  ಚುನಾವಣಾ ಪ್ರಿಸೈಡಿಂಗ ಹಾಗೂ ಪೋಲಿಂಗ್ ಅಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ತರಬೇತಿ ಕಾರ್ಯಕ್ರಮ ಸಭೆಯ  ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಚುನಾವಣಾ ಕಾರ್ಯದಲ್ಲಿ ಅಧಿಕಾರಿಗಳು ನಿಖರತೆ ಮತ್ತು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಚುನಾವಣೆ ಪ್ರಕ್ರಿಯೆಯಲ್ಲಿ ಆಚಾತುರ್ಯವಾಗದಂತೆ ಕರ್ತವ್ಯ ನಿರ್ವಹಿಸಬೇಕು” ಎಂದು ಸೂಚಿಸಿದರು.

“ಪ್ರಿಸೈಡಿಂಗ್ ಹಾಗೂ ಪೋಲಿಂಗ್ ಅಧಿಕಾರಿಗಳ ಜವಾಬ್ದಾರಿ: ಪ್ರಿಸೈಡಿಂಗ್ ಹಾಗೂ ಪೋಲಿಂಗ್ ಅಧಿಕಾರಿಗಳು ತಮ್ಮ ಜವಾಬ್ದಾರಿಗಳು ಮತ್ತು ಕರ್ತವ್ಯಗಳನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು. ತರಬೇತಿ ಅವಧಿಯಲ್ಲಿ ಹೇಳಿಕೊಡುವ ಪ್ರತಿಯೊಂದು ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕು. ಮತದಾನದ ಅಂಕಿ-ಅಂಶಗಳು ಹಾಗೂ ವರದಿಗಳನ್ನು ಸಿದ್ಧಪಡಿಸುವಾಗ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಿಖರವಾದ ಲೆಕ್ಕಾಚಾರವಿರಬೇಕು” ಎಂದು ಹೇಳಿದರು.

“ಚುನಾವಣಾ ಪ್ರಕ್ರಿಯೆಯಲ್ಲಿ ಸಮಯಪಾಲನೆ ಅತ್ಯಂತ ಮುಖ್ಯವಾದುದು. ಮಾಹಿತಿಯನ್ನು ಕಾಲಕಾಲಕ್ಕೆ ನೀಡಬೇಕು” ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ  ಎಚ್ಚರಿಸಿದರು.  

“ಕ್ಷೇತ್ರವಾರು ಶಾಸಕಾಂಗ ನಿಯಮಗಳು ಹಾಗೂ ಮತದಾನ ಕೇಂದ್ರಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ಎಲ್ಲಾ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿ, ಚುನಾವಣೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕು” ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಮಾಸ್ಟರ್ ಟ್ರೈನರ್ ಬಿ.ಜಿ. ಗಿರೀತಿಮ್ಮಣ್ಣವರ ಚುನಾವಣಾ ತರಬೇತಿ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಮ್, ಆಹಾರ ಇಲಾಖೆಯ ಉಪ ನಿರ್ದೇಶಕ ಎಸ್. ಡಿ. ಪಾಟೀಲ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶ್ರೀಮತಿ ಡಾ. ನಂದಾ ಹಣಬರಹಟ್ಟಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಕೋಲಾರ | ಮಾನವ ಹಕ್ಕುಗಳ ಮಂಡಳಿಯ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್ ನೇಮಕ

ಅಖಿಲ ಭಾರತ ಮಾನವ ಹಕ್ಕುಗಳ ಮಂಡಳಿಯ ನೂತನ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್...