ಗದಗ | ಅರ್ಹ ಫಲಾನುಭವಿಗಳಿಗೆ ವಸತಿ ಕಲ್ಪಿಸಲು ಜಿಲ್ಲಾ ಸ್ಲಂ ಸಮಿತಿ ಆಗ್ರಹ

Date:

ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳ ಅಭಿವೃದ್ಧಿಗಾಗಿ ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಅನೇಕ ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ನಗರಸಭೆ ಪೌರಾಯುಕ್ತರು ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಗಮನ ನೀಡದೆ ಸ್ಲಂ ನಿವಾಸಿಗಳ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಆರೋಪಿಸಿದ್ದಾರೆ.

- Advertisement -

ಗದಗ ನಗರಸಭೆ ಉದ್ಯಾನವನದಲ್ಲಿ ಸ್ಲಂ ನಿವಾಸಿಗಳು ಹಾಗೂ ವಸತಿರಹಿತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಳೆದ ೨೦೧೪ರಿಂದ ಗದಗ-ಬೆಟಗೇರಿ ನಗರದ ವಸತಿರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ನಿರಂತರ ಹೋರಾಟ ನಡೆಸುತ್ತ ಬಂದಿದ್ದೇವೆ. ನಗರದ 348 ಕುಟುಂಬಗಳಿಗೆ ನಮ್ಮ ಕ್ಷೇತ್ರದ ಶಾಸಕರು ಮನೆ ಮಂಜೂರಾತಿ ಪತ್ರಗಳನ್ನು ವಿತರಿಸಿದ್ದಾರೆ. ಮನೆ ಹಂಚಿಕೆ ಸಂದರ್ಭದಲ್ಲಿ ನೈಜ ಫಲಾನುಭವಿಗಳನ್ನು ಕೈಬಿಟ್ಟು ಸ್ಥಿತಿವಂತರು ಹಾಗೂ ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಮನೆಗಳನ್ನು ಹಂಚಿಕೆ ಮಾಡಲಾಗಿದೆ. ನಗರಸಭೆ ಪೌರಾಯುಕ್ತರು ಹಾಗೂ ಆಶ್ರಯ ಯೋಜನೆ ಸಿಬ್ಬಂದಿ ಬೇಜವಬ್ದಾರಿತನ ಇದಕ್ಕೆ ಕಾರಣ. ಬಡಜನ ವಿರೋಧಿ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಹೋರಾಟ ನಡೆಸಲಾಗುತ್ತದೆ” ಎಂದು ಎಚ್ಚರಿಸಿದರು.

“ಸ್ಲಂ ಜನರ ವಿರೋಧಿ ನಗರಸಭೆ ಪೌರಾಯುಕ್ತರ ಕ್ರಮವನ್ನು ಖಂಡಿಸಿ ಶೀಘ್ರವೇ ನಗರಸಭೆ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಯಲ್ಲಿ ನಗರದ ಸ್ಲಂ ನಿವಾಸಿಗಳು ಹಾಗೂ ವಸತಿರಹಿತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು” ಎಂದು ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಅನೇಕ ಕೊಳಗೇರಿ ಪ್ರದೇಶಗಳಲ್ಲಿ ಮಹಿಳೆಯರಿಗೆ ಶೌಚಾಲಯ ವ್ಯವಸ್ಥೆ ಇಲ್ಲದ ಕಾರಣ ಬಯಲು ಶೌಚಾಲಯವನ್ನು ಅವಲಂಬಿಸಬೇಕಾಗಿದೆ. ಇದರಿಂದ ಪ್ರತಿದಿನ ಸ್ಲಂ ಪ್ರದೇಶದ ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ವಾಸ್ತವ ಸ್ಥಿತಿಯನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಪೌರಾಯುಕ್ತರು ಹಾಗೂ ಆರೋಗ್ಯ ವಿಭಾಗದ ಅಧಿಕಾರಿಗಳು ಬಯಲುಮುಕ್ತ ಶೌಚಾಲಯಕ್ಕೆ ಕ್ರಮ ಕೈಗೊಳ್ಳದೆ, ಕಣ್ಣಿದ್ದರೂ ಕುರುಡರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದರು.

“ಸ್ಲಂಗಳಲ್ಲಿ ಇಂತಹ ಗಂಭೀರ ಸಮಸ್ಯೆಗಳಿದ್ದರೂ ಅಧಿಕಾರಿಗಳು ಬೇಡಿಕೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ನಗರಸಭೆಯ ಜನವಿರೋಧಿ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಲು ಸ್ಲಂ ಸಮಿತಿ ತೀರ್ಮಾನಿಸಿದೆ. ನಗರದ ಸ್ಲಂ ನಿವಾಸಿಗಳು ಮತ್ತು ವಸತಿರಹಿತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಜನವಿರೋಧಿ ಅಧಿಕಾರಿಗಳನ್ನು ಗದಗ ಜಿಲ್ಲೆಯಿಂದ ತೆರವುಗೊಳಿಸಲು ನಿರಂತರ ಹೋರಾಟಕ್ಕೆ ಸಿದ್ಧರಾಗಬೇಕು” ಎಂದು ಆಗ್ರಹಿಸಿದರು.

ಸಭೆಯಲ್ಲಿ ಸಂಘಟನೆಯ ಮುಖಂಡರಾದ ಎಂ.ಬಿ. ನದಾಫ್ (ವಕೀಲರು), ಮಹಿಳಾ ಸಮಿತಿ ಸಂಚಾಲಕಿ ಪರವೀನ್ ಬಾನು ಹವಾಲ್ದಾರ್, ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೌಲಸಾಬ್ ಗಚ್ಚಿ, ಮೆಹಬೂಬ್ ಸಾಬ್ ಬಳ್ಳಾರಿ, ಪುಷ್ಪಾ ಬಿಜಾಪುರ್, ಖಾಜಾ ಸಾಬ್ ಇಸ್ಮಾಯಿಲ್, ವಿಶಾಲಾಕ್ಷಿ ಹರೇಗೌಡ್ರ, ಲಕ್ಷ್ಮಿ ಮಳೆಕರ್, ಮುನ್ನಾ ಅಗಡಿ, ನಜಮುನ್ನಿಸಾ ಮುರಗೋಡ್, ಖಾಜಾ ಸಾಬ್ ಬಳ್ಳಾರಿ, ವೆಂಕಟೇಶ್ ಬಿಂಕದಕಟ್ಟಿ, ರವಿ ಗೋಸಾವಿ, ಮಕ್ತುಮ್ ಸಾಬ್ ಮುಲ್ಲಾ, ಸಾಕ್ರುಬಾಯಿ ಗೋಸಾವಿ ಹಾಗೂ ನಗರದ ವಿವಿಧ ಸ್ಲಂ ಪ್ರದೇಶಗಳ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ...

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...