ಗದಗ | ಬಡವರ ಬದುಕಿಗೆ ಹಕ್ಕಿನ ದಾಖಲೆ, ಸ್ವಾಭಿಮಾನದ ಹೊಸ ಅಧ್ಯಾಯ: ಎಚ್.ಕೆ. ಪಾಟೀಲ

Date:

“ಬಡವರು ಹಲವು ವರ್ಷಗಳಿಂದ ವಾಸಿಸುತ್ತಿದ್ದ ಜಾಗಕ್ಕೆ ಅಧಿಕೃತ ಹಕ್ಕು ದೊರೆಯುವುದು ಅವರ ಬದುಕಿನಲ್ಲಿ ಸ್ವಾಭಿಮಾನ ಮತ್ತು ನೆಮ್ಮದಿಯ ಹೊಸ ಅಧ್ಯಾಯ ಆರಂಭವಾದಂತಾಗಿದೆ. ಮನೆ ಮತ್ತು ಜಾಗದ ಹಕ್ಕು ಕೇವಲ ದಾಖಲೆಗಳಿಗೆ ಸೀಮಿತವಾಗದೆ, ಬಡ ಕುಟುಂಬಗಳ ಭವಿಷ್ಯವನ್ನು ಭದ್ರಪಡಿಸುವ ಮಹತ್ವದ ಹೆಜ್ಜೆಯಾಗಿದೆ” ಎಂದು ಶಾಸಕ ಎಚ್.ಕೆ. ಪಾಟೀಲರು ಹೇಳಿದರು.

- Advertisement -

ಗದಗ ನಗರದ ಕಾಟನ್ ಸೇಲ್ಸ್ ಸೊಸೈಟಿ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಗುರುವಾರ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ವಿವಿಧ ಆಶ್ರಯ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ನಮೂನೆ-3 ಹಾಗೂ ಪರಿಚಯ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನಕ್ಕೆ 77 ವರ್ಷ | ಸಂವಿಧಾನ ಸೋತಿದೆಯೇ?, ಅನುಷ್ಠಾನದಲ್ಲಿ...

26 ನವೆಂಬರ್ 1949. ಭಾರತದ ಇತಿಹಾಸದಲ್ಲಿ ಇದೊಂದು ಮಹತ್ವದ ಐತಿಹಾಸಿಕ ದಿನ. ಶತಮಾನಗಳ ಸಾಮಾಜಿಕ ಅಸಮಾನತೆ, ಶೋಷಣೆ, ದಮನ ಮತ್ತು ಅನ್ಯಾಯದ ವಿರುದ್ಧ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಆಧಾರದಲ್ಲಿ ಹೊಸ...

ಪಂಜಾಬ್ ಚುನಾವಣೆ  | ‘ಎಎಪಿ’ಗೆ ಅಳಿವು-ಉಳಿವಿನ ಕದನ; ಹಳೆಯ...

ಮುಂದಿನ ವರ್ಷದ ಆರಂಭದಲ್ಲಿ, ಅಂದರೆ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ ) ಪಾಲಿಗೆ ಅಕ್ಷರಶಃ 'ಸಾವು-ಬದುಕಿನ' ಪ್ರಶ್ನೆಯಾಗಿ ಪರಿಣಮಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತನ್ನ...

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

“ಜವಳಗಲ್ಲಿ ಹಾಗೂ ಸುಗುಗಾಡುಸಿದ್ಧರ ಕಾಲೋನಿ ಸೇರಿದಂತೆ ಸುಮಾರು 800 ಫಲಾನುಭವಿಗಳಿಗೆ ಫಾರಮ್ ನಂ 3 ಸೇರಿದಂತೆ ಅಧಿಕೃತ ದಾಖಲೆಗಳನ್ನು ವಿತರಿಸಲಾಯಿತು.

“ಜವಳಗಲ್ಲಿಯಲ್ಲಿ ಹಲವು ಕುಟುಂಬಗಳು ವರ್ಷಗಳಿಂದ ವಾಸಿಸುತ್ತಿದ್ದರೂ, ಜಾಗಗಳು ಅವರ ಹೆಸರಿನಲ್ಲಿ ಇರಲಿಲ್ಲ. ಯಾವುದೇ ಅಧಿಕೃತ ದಾಖಲೆಗಳಿಲ್ಲದ ಕಾರಣ ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೂ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಡವರ ಹಕ್ಕಿಗಾಗಿ ಹೈಕೋರ್ಟ್‌ವರೆಗೂ ಹೋರಾಟ ನಡೆಸಬೇಕಾಯಿತು” ಎಂದು ಎಚ್ ಕೆ ಪಾಟೀಲರು ತಿಳಿಸಿದರು.

“ಜವಳಗಲ್ಲಿಯ 352 ಕುಟುಂಬಗಳಿಗೆ ಯಾವುದೇ ದಾಖಲೆಗಳಿಲ್ಲದಿದ್ದರೂ, ಅವರ ಹಕ್ಕುಗಳನ್ನು ದೊರಕಿಸಲು ಪ್ರಯತ್ನಿಸಲಾಯಿತು. ಇಂದು ಸರ್ಕಾರದ ವತಿಯಿಂದ ಅಧಿಕೃತವಾಗಿ ಹಕ್ಕು ನೀಡಿರುವುದರಿಂದ ಅಲ್ಲಿನ ನಿವಾಸಿಗಳು ಇನ್ನು ಮುಂದೆ ಆತಂಕಪಡುವ ಅಗತ್ಯವಿಲ್ಲ. ತಮ್ಮ ಜಾಗದಲ್ಲಿ ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬಹುದು” ಎಂದರು.

“ಜವಳಗಲ್ಲಿಯ ಗಟಾರ್ ಮೇಲೆಯೇ ಉದ್ಯಾನ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿರುವುದು ಗದಗ ಜಿಲ್ಲೆಯಲ್ಲಿ ನಡೆದ ವಿಶೇಷ ಕಾರ್ಯವಾಗಿದೆ” ಎಂದು ಶಾಸಕ ಎಚ್ ಕೆ ಪಾಟೀಲರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

“ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲರು ಮಾತನಾಡಿ, ನಮೂನೆ-3 ಮೂಲಕ ದೊರೆಯುವ ಆಸ್ತಿಯನ್ನು ಯಾವುದೇ ಕಾರಣಕ್ಕೂ ಮಾರಿಕೊಳ್ಳಬೇಡಿ. ಅದನ್ನು ಮುಂದಿನ ಪೀಳಿಗೆಗೆ ಉಳಿಸಿ, ಮಕ್ಕಳ ಭವಿಷ್ಯಕ್ಕೆ ಆಧಾರವಾಗಿಸಿಕೊಳ್ಳಿ” ಎಂದು ಫಲಾನುಭವಿಗಳಿಗೆ ಸಲಹೆ ನೀಡಿದರು.

“ಸುಗುಗಾಡುಸಿದ್ಧರ ಕಾಲೋನಿಯಲ್ಲಿ 152 ಕುಟುಂಬಗಳು ವಾಸಿಸುತ್ತಿದ್ದು, ಅವರಿಗೆ ನಮೂನೆ-3 ವಿತರಿಸಲಾಗುತ್ತಿದೆ. ಈ ಹಿಂದೆ ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳಿಲ್ಲದೆ ಸೌಲಭ್ಯಗಳಿಂದ ವಂಚಿತರಾಗಿದ್ದ ಕುಟುಂಬಗಳಿಗೆ ಈಗ ಅಧಿಕೃತ ದಾಖಲೆ ದೊರೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಇಂದು ಅಲ್ಲಿನ ನಿವಾಸಿಗಳು ತಮ್ಮ ಜಾಗದ ಮಾಲೀಕರಾಗಿದ್ದಾರೆ” ಎಂದರು.

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮಾತನಾಡಿ, “ಬಡವರ ಸೇವೆ ಮಾಡುವುದೇ ದೇವರ ಸೇವೆ ಮಾಡಿದಂತೆ. ಜನಸಾಮಾನ್ಯರ ಸೇವೆಯಲ್ಲಿಯೇ ನಿಜವಾದ ಸಾರ್ಥಕತೆ” ಇದೆ ಎಂದು ಹೇಳಿದರು.

“ಶಾಸಕ ಎಚ್.ಕೆ. ಪಾಟೀಲ ಅವರು ಜನಸಾಮಾನ್ಯರ ಸೇವೆಯೇ ದೇವರ ಆರಾಧನೆ ಎಂಬುದನ್ನು ಅರಿತು ನಿರಂತರವಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬಡವರು ಹಾಗೂ ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವ ಕೆಲಸ ಮಾಡುವುದರಲ್ಲಿಯೇ ನಿಜವಾದ ತೃಪ್ತಿ ಮತ್ತು ಸಾರ್ಥಕತೆ ಇದೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ಡಿ ಆರ್ ಪಾಟೀಲರು ಹೇಳಿದರು.

ಕಾರ್ಯಕ್ರಮದಲ್ಲಿ ಮುಖಂಡರು ವಾಸಣ್ಣ ಕುರುಡಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಪ್ರಭು ಬುರುಬುರೆ, ನಗರಸಭೆ ಸದಸ್ಯರಾದ ನಮಾಜಿ, ವಿಭೂತಿ , ನಗರಸಭೆ ಪೌರಾಯುಕ್ತ ರಾಜರಾಮ್ ಪವಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಗ್ಯಾಮಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕಾಧ್ಯಕ್ಷ ಅಶೋಕ ಮಂದಾಲಿ ಕಾರ್ಯಕ್ರಮ ನಿರ್ವಹಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಂವಿಧಾನದ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕನೂ ಜಾಗೃತನಾಗಬೇಕು: ಪ್ರೊ. ಫಣಿರಾಜ್

ಭಾರತದ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಜೊತೆಗೆ ಅವುಗಳ ರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕನೂ...

ಬಾಗಲಕೋಟೆ |ಸಾಲದ ಅರ್ಜಿದಾರರನ್ನು ಬ್ಯಾಂಕ್‌ಗಳಿಗೆ ಅಲೆದಾಡಿಸಬೇಡಿ: ಗಜಾನನ ಬಾಲೆ

ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಬ್ಯಾಂಕ್‌ಗಳಿಗೆ...

ಕಲಬುರಗಿ | ನಾಡು, ನುಡಿ ಮೇಲೆ ಅಭಿಮಾನವಿರಲಿ’: ನಾಲವಾರಕರ್

ಕನ್ನಡ ನಾಡು, ನುಡಿ ಮೇಲೆ ಸದಾ ಅಭಿಮಾನ ಇರಬೇಕು ಎಂದು ಕರವೇ...

ಬಾಗಲಕೋಟೆ | ಜಿಲ್ಲಾಡಳಿತದಿಂದ ಸಂವಿಧಾನ ದಿನ ಆಚರಣೆ : ಸಾಮೂಹಿಕ ಸಂವಿಧಾನ ಪೀಠಿಕೆ ಬೋಧನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತದ...