ಗದಗ | ತಹಶಿಲ್ದಾರ್ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ

Date:

ಪೌರ ಕಾರ್ಮಿಕರು ಮತ್ತು ಗ್ರಾಮ ಮಟ್ಟದ ಸ್ವಚ್ಛತಾಗಾರರು ಎಂದರೆ ಜನಸಾಮಾನ್ಯರಿಂದ ಹಿಡಿದು ಸರ್ಕಾರಿ ಅಧಿಕಾರಿಗಳ ಮಟ್ಟದಲ್ಲೂ ನಿರ್ಲಕ್ಷ್ಯಗೊಳಗಾಗುತ್ತಾರೆ ಎಂದರೆ ತಪ್ಪಾಗಲಾದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಕಂದಾಯ ಮತ್ತು ತಹಶಿಲ್ದಾರ್ ಕಚೇರಿಯ ಮುಂಬಾಗ ಸ್ವಚ್ಚತಾ ಕಾರ್ಯದಲ್ಲಿ ನಿರತರಾಗಿದ್ದ ಪುರಸಭೆಯ ಪೌರಕಾರ್ಮಿಕರಿಗೆ ಸರಿಯಾದ ಉಪಕರಣಗಳನ್ನು ನೀಡಲಾಗಿಲ್ಲ. ಅವರಿಗೆ ಕೈಗವಸುಗಳು, ಮುಖಕ್ಕೆ ಮಾಸ್ಕ್ ಇಲ್ಲದೆ ಕೆಲಸ ಮಾಡಿದ್ದಾರೆ.

ಗ್ರಾಮ, ಪಟ್ಟಣ, ನಗರ, ಪುರಸಭೆಯನ್ನ ಸ್ವಚ್ಚವಾಗಿಡುವ ಕಡಿಮೆ ಸಂಬಳದಲ್ಲಿ ದುಡಿಯುವ ಈ ಕಾರ್ಮಿಕರಿಗೆ ಕೆಲಸ ಮಾಡಿ ದಣಿವಾದಾಗ ಕನಿಷ್ಠ ಪಕ್ಷ ಕುಡಿಯುವ ನೀರಿನ ವ್ಯವಸ್ಥೆಯೂ ತಹಶಿಲ್ದಾರ್ ಕಚೇರಿಯಲ್ಲಿ ಇಲ್ಲ.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾತನಾಡಿದ ಪೌರಕಾರ್ಮಿಕರೊಬ್ಬರು, “ನಮ್ಮ ಕಷ್ಟ ನಿವಾರ‌ಣೆ ಅಕ್ಕತೇನ್ರಿ? ಇಷ್ಟೋತ್ತು ಆದ್ರು ತಹಶಿಲ್ದಾರ್ ಕಛೇರಿಯಲ್ಲಿ ಕುಡಿಯಾಕ ಒಂದು ಹನಿ ನೀರು ಕೊಡ್ತಿಲ್ಲ! ‘ಕೇಳಿದ್ರ ನಮ್ಗ ಇಲ್ಲ ನಿಮ್ಗೆಲಿಂದ ತರೂನ ಎನ್ನುತ್ತಾರೆ” ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲಕ್ಷ್ಮೇಶ್ವರ ಕಂದಾಯ ಇಲಾಖೆಯಗೆ ಬರುವ ಸಾರ್ವಜನಿಕರಿಗೂ ನೀರಿನ ವ್ಯವಸ್ಥೆ ಇಲ್ಲ. ಕುಡಿಯುವ ನೀರು ಇದ್ರು ಶೌಚಾಲಯದ ಪಕ್ಕದಲ್ಲಿರುವರಿಂದ ಅಲ್ಲಿನ ನೀರು ಬಳಸಲು ಸಿಬ್ಬಂಧಿ ಮನಸ್ಸು ಮಾಡುತ್ತಿಲ್ಲ‌.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ 15 ಬ್ಯಾಂಕ್‌ಗಳಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿದ ದಂಪತಿ

ನಕಲಿ ದಾಖಲೆ ಸೃಷ್ಟಿ ಮಾಡಿ ದಂಪತಿಯೊಬ್ಬರು ರಾಷ್ಟ್ರೀಕೃತ ಬ್ಯಾಂಕ್‌ಗಳು, ಪ್ರಾದೇಶಿಕ ಸಹಕಾರಿ...

ವಿಜಯಪುರ | 29ರಂದು ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಜಾಗೃತಿ ಸಭೆ

ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ...

ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ...

ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ...