ಗದಗ | ಬರ ಪರಿಸ್ಥಿತಿ ಅವಲೋಕನ: ಬೆಳೆ ಹಾನಿ ಪರಿಶೀಲಿಸಿದ ಸಚಿವ ಬಸವರಾಜ ರಾಯರಡ್ಡಿ

Date:

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಮತ್ತು ಮುಂಡರಗಿ ತಾಲೂಕುಗಳ ಕೃಷಿ ಜಮೀನುಗಳಿಗೆ ಸಂಪುಟ ದರ್ಜೆ ಸಚಿವ ಬಸವರಾಜ ರಾಯರೆಡ್ಡಿ ಶುಕ್ರವಾರ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.

- Advertisement -

ರೈತರ ಜಮೀನುಗಳಿಗೆ ತೆರಳಿ ಬೆಳೆಗಳ ಬೆಳವಣಿಗೆ, ಮಳೆಯ ಅಭಾವದಿಂದ ಉಂಟಾಗಿರುವ ಹಾನಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸ್ಥಳದಲ್ಲೇ ಮಾಹಿತಿ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ಮೊದಲಿಗೆ ಗದಗ ತಾಲೂಕಿನ ಗಂಗಿಮಡಿ ಗ್ರಾಮದ ಜಮೀನಿಗೆ ಭೇಟಿ ನೀಡಿದ ಸಚಿವರು, ಜಮೀನಿನಲ್ಲಿ ಬೆಳೆಯಲಾಗಿದ್ದ ಶೇಂಗಾ, ಹೆಸರು ಹಾಗೂ ಮೆಣಸಿನಕಾಯಿ ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿದರು. ಮಳೆಯ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತವಾಗಿರುವುದು, ತೇವಾಂಶದ ಕೊರತೆಯಿಂದ ಬೆಳೆಗಳು ಒಣಗುತ್ತಿರುವುದು ಹಾಗೂ ಉತ್ಪಾದನೆಯ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಕೃಷಿ ಇಲಾಖೆ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು.

ಇದೇ ವೇಳೆ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರು ಎದುರಿಸುತ್ತಿರುವ ಸಮಸ್ಯೆಗಳು, ಬಿತ್ತನೆ ವೆಚ್ಚ, ನೀರಿನ ಲಭ್ಯತೆ ಹಾಗೂ ಬೆಳೆ ನಷ್ಟದ ಕುರಿತು ಅಹವಾಲುಗಳನ್ನು ಆಲಿಸಿದರು. ಬಳಿಕ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದ ಜಮೀನಿಗೆ ಭೇಟಿ ನೀಡಿ, ರೈತರ ಜಮೀನಿನಲ್ಲಿ ಬೆಳೆಯಲಾಗಿದ್ದ ಮೆಣಸಿನಕಾಯಿ, ಈರುಳ್ಳಿ ಬೆಳೆಗಳನ್ನು ಪರಿಶೀಲಿಸಿದರು. ಮಳೆಯ ಅಭಾವದಿಂದ ಬೆಳೆಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು, ಕೆಲವು ಕಡೆ ಬೆಳೆಗಳು ಬಾಡುತ್ತಿರುವುದು ಹಾಗೂ ಮುಂದಿನ ದಿನಗಳಲ್ಲಿ ಮಳೆ ಬಾರದಿದ್ದರೆ ಇನ್ನಷ್ಟು ಹಾನಿಯಾಗುವ ಸಾಧ್ಯತೆಗಳ ಕುರಿತು ಅಧಿಕಾರಿಗಳು ಸಚಿವರಿಗೆ ವಿವರಿಸಿದರು.

ಪರಿಶೀಲನೆ ವೇಳೆ ಸಚಿವ ಬಸವರಾಜ ರಾಯರೆಡ್ಡಿ, ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ದಾಖಲಿಸಿ ನೈಜ ವರದಿ ಸರ್ಕಾರಕ್ಕೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ನಷ್ಟವನ್ನು ಸಮರ್ಪಕವಾಗಿ ದಾಖಲಿಸಬೇಕು. ಯಾವುದೇ ಅರ್ಹ ರೈತರಿಗೆ ಸರ್ಕಾರದ ಸೌಲಭ್ಯಗಳಿಂದ ವಂಚನೆಯಾಗದಂತೆ ನೋಡಿಕೊಳ್ಳಬೇಕು. ಬೆಳೆ ಹಾನಿ ಮೌಲ್ಯಮಾಪನವನ್ನು ಪಾರದರ್ಶಕವಾಗಿ ನಡೆಸಿ, ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಲಿದೆ. ಬೆಳೆ ಹಾನಿಯ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು. ಅಗತ್ಯವಿರುವ ಎಲ್ಲಾ ನೆರವು, ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಸಚಿವರು ರೈತರಿಗೆ ಭರವಸೆ ನೀಡಿದರು.

ಪರಿಶೀಲನಾ ಸಂದರ್ಭದಲ್ಲಿ ಶಾಸಕರಾದ ಎಚ್.ಕೆ. ಪಾಟೀಲ, ಡಾ. ಚಂದ್ರು ಲಮಾಣಿ, ಡಿ.ಸಿ. ಸಿ.ಎನ್. ಶ್ರೀಧರ, ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರೈತರು ಉಪಸ್ಥಿತರಿದ್ದರು.

ಸಚಿವರು ಅಧಿಕಾರಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿ, ಬರ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಹಾಗೂ ರೈತರಿಗೆ ಅಗತ್ಯ ತಾಂತ್ರಿಕ ಸಲಹೆಗಳನ್ನು ನೀಡುವಂತೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ಟಿವಿ ವಾಹಿನಿಗಳ ವಿಶ್ವಾಸಾರ್ಹತೆ ಕೊರತೆಗೆ ಕನ್ನಡಿ ಎಂದ ‘ಎಡಿಟರ್ಸ್ ಗಿಲ್ಡ್’

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ (CJP) ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ಬಹುತೇಕ ಮುಖ್ಯವಾಹಿನಿಯ...

ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ...

ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ್ದ 8 ವಿದ್ಯಾರ್ಥಿಗಳಿಗೆ ಐಐಐಟಿ ಹೈದರಾಬಾದ್ ನೋಟಿಸ್

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ...