ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು ಜೀವವಿತ್ತ ದೀಪಾವಳಿ!

Date:

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ ಮಹಿಳಾ ಒಕ್ಕೂಟದ ಪ್ರೇರಣೆ ಹಾಗೂ ಆರ್ಥಿಕ ನೆರವಿನಿಂದ ಮಣ್ಣಿನ ದೀಪಗಳ ತಯಾರಿಕೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿರುವ ಮಂಜುಳಾ ಚನ್ನಬಸಪ್ಪ ಕುಂಬಾರ ಅವರು ಗ್ರಾಮೀಣ ಮಹಿಳೆಯರಿಗೆ ಮಾದರಿಯಾಗಿದ್ದಾರೆ.

ಕುರಹಟ್ಟಿ ಗ್ರಾಮದ ನಿವಾಸಿಯಾದ ಮಂಜುಳಾ ಅವರು ಕುಂಬಾರಿಕೆ ವೃತ್ತಿಯನ್ನು ಅವಲಂಬಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ತಮ್ಮ ಮಕ್ಕಳೊಂದಿಗೆ ಪ್ರತಿದಿನ ಮಣ್ಣಿನಿಂದ ವಿವಿಧ ವಿನ್ಯಾಸದ ದೀಪಾವಳಿ ಹಣತೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಎತ್ತಿನ ಬಂಡಿಗಳನ್ನು ತಯಾರಿಸುತ್ತಿದ್ದಾರೆ. ವಿಶೇಷವಾಗಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಣ್ಣಿನ ದೀಪಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ವಿವಿಧ ಬಗೆಯ ಹಣತೆಗಳನ್ನು ಸಿದ್ಧಪಡಿಸಿ ಮಾರಾಟ ಮಾಡುವ ಮೂಲಕ ಆದಾಯ ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

- Advertisement -

ಸಂಜೀವಿನಿ ಒಕ್ಕೂಟದಿಂದ ಆರ್ಥಿಕ ನೆರವು: ಮಂಜುಳಾ ಅವರು ಕಳೆದ ಆರು ವರ್ಷಗಳಿಂದ ಕುರಹಟ್ಟಿಯ ಶ್ರೀ ಬಾವಿ ಬಸವೇಶ್ವರ ಶ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರಾಗಿದ್ದಾರೆ. ಸಂಜೀವಿನಿ ಮಹಿಳಾ ಒಕ್ಕೂಟದ ಮೂಲಕ ಸಮುದಾಯ ಬಂಡವಾಳ ನಿಧಿಯಡಿ ₹10 ಸಾವಿರ ಆರ್ಥಿಕ ನೆರವು ಪಡೆದುಕೊಂಡು ತಮ್ಮ ಸಾಂಪ್ರದಾಯಿಕ ವೃತ್ತಿಗೆ ಮತ್ತಷ್ಟು ಬಲ ತುಂಬಿದ್ದಾರೆ. ಇದರ ಜೊತೆಗೆ ಸ್ವಂತವಾಗಿ ಸುಮಾರು ₹20 ಸಾವಿರ ಬಂಡವಾಳ ಹೂಡಿಕೆ ಮಾಡಿ ದೀಪಾವಳಿ ಹಬ್ಬಕ್ಕಾಗಿ ವಿವಿಧ ವಿನ್ಯಾಸದ ಮಣ್ಣಿನ ದೀಪಗಳನ್ನು ತಯಾರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಇಸ್ರೇಲ್ ಚುಕ್ಕಾಣಿ ಹಿಡಿಯಲು ಮುಂದಾದ ‘ಗಾಡಿ ಐಸೆನ್‌ಕೋಟ್’; ಗಾಜಾ...

ಇಡೀ ಜಗತ್ತು ಕಾತರದಿಂದ ಕೇಳುತ್ತಿರುವ ಅತಿದೊಡ್ಡ ಪ್ರಶ್ನೆಯೆಂದರೆ, ಐಸೆನ್‌ಕೋಟ್‌ ಆಡಳಿತದಲ್ಲಿ ಗಾಜಾ ಬಿಕ್ಕಟ್ಟು ಶಾಶ್ವತವಾಗಿ ಪರಿಹಾರವಾಗುತ್ತದೆಯೇ ಎಂಬುದು. ಆದರೆ, ಇದು ವಾಸ್ತವಕ್ಕೆ ತೀರಾ ದೂರವಾದ ನಿರೀಕ್ಷೆಯಾಗಿದೆ. ಐಸೆನ್‌ಕೋಟ್‌ ಅವರು ವಾಸ್ತವಿಕವಾದಿ ನಾಯಕನೇ ಹೊರತು,...

“ಹಬ್ಬದ ಸಂದರ್ಭದಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ದೀಪಗಳನ್ನು ಸಿದ್ಧಪಡಿಸುತ್ತಿದ್ದು, ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಿದ್ದಾರೆ. ಈ ಬಾರಿ ದೀಪಗಳ ಮಾರಾಟದಿಂದ ಕನಿಷ್ಠ ₹30 ಸಾವಿರ ಆದಾಯ ಗಳಿಸುವ ನಿರೀಕ್ಷೆಯನ್ನು ಹೊಂದಿದ್ದಾರೆ. ಸಂಜೀವಿನಿ ಯೋಜನೆಯಿಂದ ದೊರೆತ ಆರ್ಥಿಕ ನೆರವು ತಮ್ಮ ಉದ್ಯಮವನ್ನು ವಿಸ್ತರಿಸಲು ಸಹಕಾರಿಯಾಗಿದೆ” ಎಂದು ಮಂಜುಳಾ ಚನ್ನಬಸಪ್ಪ ಕುಂಬಾರ ಹೇಳಿದ್ದಾರೆ.

ಸಾಂಪ್ರದಾಯಿಕ ಕಲೆ ಉಳಿಸುವ ಪ್ರಯತ್ನ: ಇಂದಿನ ದಿನಗಳಲ್ಲಿ ಆಧುನಿಕ ಅಲಂಕಾರಿಕ ದೀಪಗಳು ಮಾರುಕಟ್ಟೆಯಲ್ಲಿ ಹೆಚ್ಚಾಗಿ ಲಭ್ಯವಿದ್ದರೂ, ಮಣ್ಣಿನ ಹಣತೆಗಳಿಗೆ ತನ್ನದೇ ಆದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪರಿಸರ ಸ್ನೇಹಿ ಮಹತ್ವವಿದೆ. ಇಂತಹ ಸಂದರ್ಭದಲ್ಲಿ ಮಣ್ಣಿನ ದೀಪಗಳನ್ನು ತಯಾರಿಸುವ ಮೂಲಕ ಕುಂಬಾರಿಕೆ ಕಲೆಯನ್ನು ಉಳಿಸುವುದರ ಜೊತೆಗೆ ಮುಂದಿನ ಪೀಳಿಗೆಗೂ ಈ ಸಾಂಪ್ರದಾಯಿಕ ವೃತ್ತಿಯನ್ನು ಪರಿಚಯಿಸುವ ಕೆಲಸವನ್ನು ಮಂಜುಳಾ ಕುಟುಂಬ ಮಾಡುತ್ತಿದೆ.

ಮಹಿಳೆಯರ ಸ್ವಾವಲಂಬಿ ಬದುಕಿಗೆ ಪ್ರೇರಣೆ: ಮಹಿಳೆಯರ ಆರ್ಥಿಕ ಸಬಲೀಕರಣ ಎಂದರೆ ಕೇವಲ ಹೊರಗಡೆ ಉದ್ಯೋಗ ಮಾಡುವುದಷ್ಟೇ ಅಲ್ಲ. ಗೃಹಿಣಿಯಾಗಿದ್ದುಕೊಂಡೇ ತಮ್ಮಲ್ಲಿರುವ ಕೌಶಲ್ಯ, ಆಸಕ್ತಿ ಮತ್ತು ಸಾಂಪ್ರದಾಯಿಕ ಜ್ಞಾನವನ್ನು ಬಳಸಿಕೊಂಡು ಕುಟುಂಬದ ಆದಾಯಕ್ಕೆ ನೆರವಾಗಬಹುದು ಎಂಬುದನ್ನು ಮಂಜುಳಾ ಅವರ ಪ್ರಯತ್ನ ತೋರಿಸಿಕೊಟ್ಟಿದೆ.

ದೀಪಾವಳಿಯ ಹಣತೆಗಳ ಮೂಲಕ ಮನೆಮನೆಗಳಲ್ಲಿ ಬೆಳಕು ಹರಿಸುವುದರ ಜೊತೆಗೆ ತಮ್ಮ ಕುಟುಂಬದ ಬದುಕಿನಲ್ಲಿಯೂ ಆರ್ಥಿಕ ಪ್ರಗತಿಯ ಬೆಳಕು ಮೂಡಿಸುತ್ತಿರುವ ಮಂಜುಳಾ ಅವರ ಪ್ರಯತ್ನ ನಿಜಕ್ಕೂ ಮೆಚ್ಚುವಂತಹದ್ದಾಗಿದೆ.

ಭೇಟಿ ನೀಡಿದ ಸಂದರ್ಭದಲ್ಲಿ ರೋಣ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಅವರು ಮಾತನಾಡಿ, “ಗ್ರಾಮೀಣ ಭಾಗದ ಮಹಿಳೆಯರು ಸ್ವಸಹಾಯ ಸಂಘಗಳ ಸದಸ್ಯತ್ವ ಪಡೆದು, ಸಂಜೀವಿನಿ ಯೋಜನೆಯಡಿ ದೊರೆಯುವ ಸಮುದಾಯ ಬಂಡವಾಳ ನಿಧಿ ಹಾಗೂ ಇತರ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಣ್ಣ ಉದ್ಯಮಗಳನ್ನು ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು. ಮಹಿಳೆಯರಲ್ಲಿರುವ ಕೌಶಲ್ಯಕ್ಕೆ ಸೂಕ್ತ ಪ್ರೋತ್ಸಾಹ ಮತ್ತು ಆರ್ಥಿಕ ನೆರವು ದೊರೆತರೆ ಗ್ರಾಮೀಣ ಮಟ್ಟದಲ್ಲಿಯೇ ಉತ್ತಮ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಬಹುದು ಎಂಬುದಕ್ಕೆ ಮಂಜುಳಾ ಕುಂಬಾರ ಅವರ ಸಾಧನೆ ಸಾಕ್ಷಿಯಾಗಿದೆ” ಎಂದು ಮೆಚ್ಚುಗ ವ್ಯಕ್ತಪಡಿಸಿದ್ದಾರೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಂಡನ್‌ | ಭಾರತೀಯ ಮೂಲದ ಯುವತಿ ಗುಂಡೇಟಿಗೆ ಬಲಿ; ಓರ್ವನ ಬಂಧನ

ಭಾರತೀಯ ಮೂಲದ 26 ವರ್ಷದ ಯುವತಿಯೊಬ್ಬರು ಗುಂಡೇಟಿನಿಂದ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ...

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ ಲೆಕ್ಕಾಚಾರವೇನು?

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್...

ವಾಯು ಮಾಲಿನ್ಯ ವಿವಾದ: ಹರಿಯಾಣದ ಹೊಗೆ ಪಾಕಿಸ್ತಾನಕ್ಕೆ ಹೋಗುತ್ತದೆಯೇ? BJP ವಿರುದ್ಧ AAP ವಾಗ್ದಾಳಿ

ದೆಹಲಿಯಲ್ಲಿ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ವಾಯು ಮಾಲಿನ್ಯ ಮತ್ತು...

ತವರಿಗೆ ಮರಳಲು ಹೊಸ ಪಾಸ್‌ಪೋರ್ಟ್ ಕೋರಿದ ಶೇಖ್ ಹಸೀನಾ; ಮನವಿ ತಿರಸ್ಕರಿಸಿದ ಬಾಂಗ್ಲಾದೇಶ

ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ, ಸ್ವದೇಶಕ್ಕೆ...