ಗದಗ | ಯುವಜನರ ಸಬಲೀಕರಣಕ್ಕಾಗಿ ‘ಭಾರತ್ ಜೋಡೋ ಯುವ ಸಂಘಗಳ’ ಸ್ಥಾಪನೆ

Date:

ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ, ಕ್ರೀಡಾ ಮನೋಭಾವ ಹಾಗೂ ಸಮುದಾಯ ಸೇವೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಾರ್ಗದರ್ಶನದಲ್ಲಿ ‘ಭಾರತ್ ಜೋಡೋ ಯುವ ಸಂಘಗಳನ್ನು’ ಸ್ಥಾಪಿಸುವ ಕುರಿತು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.

- Advertisement -

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಕುರಿತು ಪೂರ್ವಭಾವಿ ಪರಿಶೀಲನಾ ಸಭೆಯ ಅಧ್ಯಕ್ಷತೆಯಲ್ಲಿ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

“ಯುವಶಕ್ತಿಯು ದೇಶದ ಅಭಿವೃದ್ಧಿಯ ಪ್ರಮುಖ , ಯುವಜನರ ಸಾಮರ್ಥ್ಯವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ. ಈ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳು ಯುವಕರಲ್ಲಿ ನಾಯಕತ್ವ ಗುಣ, ಶಿಸ್ತು ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವ ವೇದಿಕೆಯಾಗಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

“ಯುವ ಸಂಘಗಳ ರಚನೆ ಪ್ರಕ್ರಿಯೆಯು ಸಂಪೂರ್ಣ ನಿಯಮಾನುಸಾರ, ಪಾರದರ್ಶಕ ಹಾಗೂ ಯಶಸ್ವಿಯಾಗಿ ನಡೆಯಬೇಕು. ಯುವಜನತೆಗೆ ಕ್ರೀಡೆ, ಕೌಶಲ್ಯಾಭಿವೃದ್ಧಿ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಪ್ರತಿ 4,000 ಜನಸಂಖ್ಯೆಗೆ ಒಂದರಂತೆ ‘ಭಾರತ್ ಜೋಡೋ ಯುವ ಸಂಘ’ವನ್ನು ರಚಿಸಲಾಗುವುದು. 16 ರಿಂದ 35 ವರ್ಷದೊಳಗಿನ ಯುವಕ ಯುವತಿಯರು ಈ ಸಂಘದ ಸದಸ್ಯರಾಗಲು ಅರ್ಹರಿರುತ್ತಾರೆ. ಪ್ರತಿಯೊಂದು ಸಂಘದಲ್ಲಿ 15 ಜನ ಕಾರ್ಯಕಾರಿ ಸಮಿತಿ ಸದಸ್ಯರಿರುತ್ತಾರೆ. ಪಾರದರ್ಶಕತೆಗಾಗಿ ಲಾಟರಿ (ಚೀಟಿ ಎತ್ತುವ) ಪದ್ಧತಿಯ ಮೂಲಕ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ)- 3 ಸದಸ್ಯರು ( 1 ಮಹಿಳೆ), ಹಿಂದುಳಿದ ವರ್ಗಗಳು + ಅಲ್ಪಸಂಖ್ಯಾತರು – 4 ಸದಸ್ಯರು ( 1 ಮಹಿಳೆ), ಸಾಮಾನ್ಯ – 8 ಸದಸ್ಯರು ( 3 ಮಹಿಳೆಯರು) ಹೀಗೆ ಮೀಸಲಾತಿ ಕಲ್ಪಿಸಲಾಗುವುದು” ಎಂದರು.

ಸಭೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಉದ್ದೇಶ, ರಚನೆ, ಕಾರ್ಯವ್ಯಾಪ್ತಿ ಹಾಗೂ ಯುವಜನರನ್ನು ಸಂಘಟಿಸಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸುವ ಕುರಿತು ಚರ್ಚಿಸಲಾಯಿತು. ಯುವಜನರಲ್ಲಿ ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ, ರಾಷ್ಟಿçÃಯ ಏಕತೆ ಹಾಗೂ ಸಹೋದರತ್ವದ ಭಾವನೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಸಂಘಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಶರಣು ಗೋಗೇರಿ ಮಾತನಾಡಿ ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 6000 ಸಂಘಗಳನ್ನು ಹಾಗೂ ನಗರ ವಾರ್ಡ್ ಗಳ ವ್ಯಾಪ್ತಿಯಲ್ಲಿ ಸರಾಸರಿ 4000 ಸಂಘಗಳನ್ನು ಹೀಗೆ ಒಟ್ಟು 10,000 ಭಾರತ್ ಜೋಡೋ ಯುವ ಸಂಘಗಳನ್ನು ಪ್ರತಿ ಸಂಘಕ್ಕೆ ಪ್ರತಿ ವರ್ಷ ತಲ್ಲಾ ರೂ. 10.00 ಲಕ್ಷಗಳ ಅನುದಾನದ ನೀಡಲಾಗುತ್ತದೆ” ಎಂದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಶರಣು ಗೋಗೇರಿ ಮಾತನಾಡಿ, “BJYS  ಪೋರ್ಟಲ್ ಅಥವಾ ಮೊಬೈಲ್ ಆಪ್ ಮೂಲಕ ಅಥವಾ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ನಾಗರೀಕ ಸೇವಾ ಕೇಂದ್ರಗಳ ಸಹಾಯದಿಂದ ಅರ್ಜಿ ಸಲ್ಲಿಸಬಹುದು. ಪ್ರತಿಯೊಬ್ಬ ಸದಸ್ಯರ ನೋಂದಣಿಗೆ ಆಧಾರ್ ಕಡ್ಡಾಯವಾಗಿದೆ. 16 ವರ್ಷದಿಂದ 35 ವರ್ಷದವರೆಗಿನ ಯುವಕ ಯುವತಿಯರು ಇರಬೇಕು. ಘಟಕ ರಚನೆಗೆ ಕನಿಷ್ಠ 100 ಯುವ ಸದಸ್ಯರಿರಬೇಕು. ಪ್ರತಿ ಸದಸ್ಯನಿಗೆ ನೋಂದಣಿ ಶುಲ್ಕ ರೂ. 10/- ಇದ್ದು ಪ್ರತಿಯೊಂದು ಸಂಘವನ್ನು ಕರ್ನಾಟಕ ಸೊಸೈಟಿಸ್ ರಿಜಿಸ್ಟೆಷನ್ ಆಕ್ಟ್ 1960 ಅಡಿಯಲ್ಲಿ ನೋಂದಾಯಿಸಬೇಕು. ಅರ್ಜಿದಾರರು ಅದೇ ಗ್ರಾಮದ ಪಂಚಾಯಿತಿ ವಾರ್ಡಿನ ಸಾಮಾನ್ಯ ನಿವಾಸಿ ಆಗಿರಬೇಕು. ಪ್ರತಿಯೊಬ್ಬ ಸದಸ್ಯರು ಒಂದು ಸಂಘಕ್ಕೆ ಮಾತ್ರ ಸದಸ್ಯರಾಗಲು ಅರ್ಹರಿರುತ್ತಾರೆ” ಎಂದು ಸಭೆಯಲ್ಲಿ ತಿಳಿಸಿದರು.

“ಜವಾಬ್ದಾರಿಯುತವಾಗಿ ಅನುದಾನವನ್ನು ಬಳಸಿ ಪಾರದರ್ಶಕತೆಯನ್ನು ಕಾಪಾಡುವುದು. ಸರ್ಕಾರದ / ಸಮುದಾಯದ ಕಾರ್ಯಕ್ರಮಗಳಲ್ಲಿ ಸಕ್ರಿಯ ಸಹಯೋಗ ಇರಬೇಕು.ಸಮುದಾಯದಲ್ಲಿ ಏಕತೆ, ಸಾಮರಸ್ಯ ಮತ್ತು ಶಿಸ್ತಿನ ಕಾರ್ಯ ನಿರ್ವಹಣೆಯನ್ನು ಖಚಿತಪಡಿಸುವುದು. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡುವುದು,ಬಾಲ್ಯ ವಿವಾಹಗಳ ವಿರುದ್ಧ ಜಾಗೃತಿ ಮೂಡಿಸುವುದು, ಅಪೌಷ್ಟಿಕತೆಯನ್ನು ಹೋಗಲಾಡಿಸಲು ಕ್ರಮವಹಿಸಬೇಕು. ಘಟಕಗಳ ನೊಂದಣಿ ಮತ್ತು ಸಾಪ್ಟವೇರ್ ಸಜ್ಜುಗೊಳಿಸುವಿಕೆಗೆ 31 ಜುಲೈ 2026 ರೊಳಗೆ ನೊಂದಣಿ ಮಾಡಿಸಬೇಕು” ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಶರಣು ಗೋಗೇರಿ ತಿಳಿಸಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸಿ. ಆರ್. ಮುಂಡರಗಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...

ಕಲಬುರಗಿ | ನಕಲಿ ಎಸ್‌ಟಿ ಪ್ರಮಾಣ ಪತ್ರಗಳಿಗೆ ಕಡಿವಾಣ, ಮೀಸಲಾತಿ ರಕ್ಷಣೆಗೆ ಆಗ್ರಹ

ನಕಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಜಾತಿ ಪ್ರಮಾಣಪತ್ರಗಳ ಹಾವಳಿಗೆ ಕಡಿವಾಣ ಹಾಕಬೇಕು...

ಕಲಬುರಗಿ | ಸಿಮೆಂಟ್ ಕಂಪನಿಯಲ್ಲಿ ಡೀಸೆಲ್ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮೆಂಟ್ ಕಂಪನಿಯ ಆವರಣದಲ್ಲಿ...

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...