ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

Date:

“ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ ಸ್ಕೀಂ ನೀರಾವರಿ ಯೋಜನೆ ಅಡಿಯಲ್ಲಿ ಕೆರೆಗಳಿಗೆ ನೀರು ತುಂಬಿಸಲು, ಹಾಗೂ ರೈತರಿಗೆ ಬರ ಪರಿಹಾರ ಕಲ್ಪಿಸಲು, ಗಜೇಂದ್ರಗಡ ಸರ್ಕಾರಿ ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಬಾಕಿ ಇರುವ ಮಾಶಾಸನಗಳನ್ನು ಬಿಡುಗಡೆ ಮಾಡಬೇಕು, ಬಗರ್ ಹಕ್ಕು, ಬಿದಿ ಬದಿ ವ್ಯಾಪಾರಿಗಳ ಬೇಡಿಕೆ ಈಡೇರಿಸವಂತೆ ರೈತ ಮುಖಂಡರು ಆಗ್ರಹಿಸಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ತಹಶಿಲ್ದಾರರ ಕಚೇರಿ ಎದುರು ಧರಣಿ ನಡೆಸಿದರು.

- Advertisement -

ಕರ್ಮಾಟಕ ಪ್ರಾಂತ ರಾಜ್ಯ ರೈತ ಸಂಘ ನೇತೃತ್ವದಲ್ಲಿ ತಾಲೂಕಿನ ಬೆಳೆಗ್ಗೆ 10ಕ್ಕೆ ಮ್ಯಾಕಲಝರಿ ಗ್ರಾಮದಿಂದ ರೈತರ ಕಾಲ್ನಡಿಗೆ ಜಾಥಾ ಮೂಲಕ ಗಜೇಂದ್ರಗಡ ತಹಶೀಲ್ದಾರ ಕಛೇರಿ ಎದುರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರಾಜ್ಯ ರೈತ ಸಂಘದ ಮುಖಂಡರು ಬಾಲು ರಾಠೋಡ್ ಮಾತನಾಡಿ, ” ಗದಗ ಜಿಲ್ಲೆಯ ಬಗರ ಹುಕ್ಕಂ ಸಾಗುವಾಳಿದಾರ ರೈತರಿಗೆ ಹಕ್ಕು ಪತ್ರಗಳನ್ನು ವಿತರಿಸಬೇಕು. ಕೃಷ್ಣಾ ಬಿ ಸ್ಟೀಂ 3ನೇಹಂತದ ಕೊಪ್ಪಳ ಏತ ನೀರಾವರಿ ಯೋಜನೆ ಅಡಿಯಲ್ಲಿ ಗಜೇಂದ್ರಗಡ ತಾಲೂಕಿನ ಗೋಗೇರಿ, ಬೆಣಚಮಟ್ಟಿ, ನಾಗರಸಕೊಪ್ಪ, ಮ್ಯಾಕಲಝರಿ, ಗಜೇಂದ್ರಗಡ, ರಾಂಪೂರ ಸೇರಿದಂತೆ ಹಲವು ಗ್ರಾಮಗಳಲ್ಲಿ ಇರುವ ಕೆರೆಗಳಿಗೆ ನೀರು ತುಂಬಿಸಬೇಕು” ಎಂದು ಆಗ್ರಹಿಸಿದರು.

1004228363

“ಉದ್ಯೋಗ ಖಾತ್ರಿ ಯೋಜನೆಯನ್ನು ಜಿಲ್ಲೆಯಾದ್ಯಂತ ಪ್ರತಿ ಗ್ರಾಮಗಳಲ್ಲಿ ಸಮಗ್ರವಾಗಿ ಅನುಷ್ಠಾನಗೊಳಿಸಿ ಅವರಿಗೆ ತಕ್ಷಣವೇ ಸಂಬಳ ಕೊಡಬೇಕು. ಸರಕಾರದಿಂದ ಬಿಡುಗಡೆಯಾಗದಿರುವ ಅಂಗವಿಕಲ, ವೃದ್ದಾಪ್ಯ ಹಾಗೂ ವಿಧವಾ ಮಾಸಾಶನ ತಕ್ಷಣ ಬಿಡುಗಡೆಗೊಳಿಸಬೇಕು. ರೈತರ ಬೆಳೆಗೆ ಸೂಕ್ತ ಬರ ನಷ್ಟ ಪರಿಹಾರ ನೀಡಬೇಕು ಹಾಗೂ ರೈತರ ಸಾಲ ಮನ್ನಾ ಮಾಡಬೇಕು ಮತ್ತು ಜಾನುವಾರುಗಳಿಗೆ ಮೇವು ಪೂರೈಸಬೇಕು” ಎಂದು ಒತ್ತಾಯಿಸಿದರು.

ವಕೀಲರು ಎಮ್.ಎಸ್ ಹಡಪದ ಮಾತನಾಡಿ, “ವಿದ್ಯುತ್ ಕ್ಷೇತ್ರದ ಖಾಸಗೀಕರಣ ಕೈಬಿಡಬೇಕು ಮತ್ತು ಗ್ರಾಮೀಣ ರೈತರ ಪಂಪಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು. ಗಜೇಂದ್ರಗಡ ಸರಕಾರಿ ಆಸ್ಪತ್ರೆಯನ್ನು ಸಕಲ ಮೂಲಭೂತ ಸೌಕರ್ಯಗಳೊಂದಿಗೆ ತಾಲೂಕ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸುವ ಮೂಲಕ ಈ ಭಾಗದ ಜನಸಾಮಾನ್ಯರಿಗೆ ಆರೋಗ್ಯ ಭಾಗ್ಯವನ್ನು ಖಾತರಿಗೊಳಿಸಬೇಕು” ಎಂದು ಆಗ್ರಹಿಸಿದರು.

ಪೀರು ರಾಠೋಡ್ ಮಾತನಾಡಿ, “ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿಗಳನ್ನು ನೀಡುವ ಮೂಲಕ ಅವರ ವ್ಯಾಪಾರದ ಸ್ಥಳವನ್ನು ಖಾತರಿಗೊಳಿಸಿ ಅವರಿಗೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅವರಿಗೆ ವ್ಯಾಪಾರ ಭದ್ರತೆಯನ್ನು ಖಾತರಿಗೊಳಿಸಬೇಕು. ಹಾಗೂ ಬೀದಿ ಬದಿ ವ್ಯಾಪಾರಸ್ಥ ಕಾಯ್ದೆಯನ್ನು ಗಜೇಂದ್ರಗಡ ಪುರಸಭೆ ಸಮಗ್ರವಾಗಿ ಜಾರಿಗೊಳಿಸಬೇಕು. ಸರ್ಜಾಪುರ ಹಾಗೂ ಇತರೆ 16 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಸಮರ್ಪಕವಾಗಿ ಜಾರಿಯಾಗಬೇಕು. ಸ್ಥಳೀಯ ಪುರಸಭೆ, ಗ್ರಾಮೀಣ ವ್ಯಾಪ್ತಿಯ ವಸತಿ ರಹಿತ ಬಡವರಿಗೆ ಸರ್ಕಾರ ಸ್ವಂತ ಖರ್ಚಿನಲ್ಲಿ ನಿವೇಶನ ಖರೀದಿಸಿ ಮನೆ ನಿರ್ಮಿಸಿ ಕೊಡಬೇಕು”ಎಂದು ಆಗ್ರಹಿಸಿದರು.

ತಹಶಿಲ್ದಾರರು, ತಾಲೂಕಿ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಅಧಿಕಾರಿಗಳು ಧರಣಿ ಸ್ಥಳಕ್ಕೆ ಭೇಟಿ ಬೇಡಿಕೆಗಳನ್ನು ಆಲಿಸಿ ಲ, ಏತ ನೀರಾವರಿ ಯೋಜನೆ ಅಡಿಯಲ್ಲಿ ಕೆರೆಗಳಿಗೆ ನೀರು ತಮಬಿಸುವ ಯೋಜನೆ ಕುರಿತು ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಇನ್ನೂ ಕೆಲವು ಬೇಡಿಕೆಗಳ ಕುರಿತು ನಾವು ನೀವು ಕೂಡಿ ಸಭೆ ನಡೆಸಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರು ಹೋರಾಟಗಾರರು ಮಹಿಳೆಯರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಯುವಜನರು ಜವಾಬ್ದಾರಿಯುತ ನೀತಿ ನಿರೂಪಕರಾಗಲಿ: ಡಿಸಿ ಆನಂದ ಕೆ

ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ...

ಚಿಕ್ಕಮಗಳೂರು | ಪ. ಜಾತಿ, ಪ. ಪಂಗಡ:ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ 

ಜಿಲ್ಲೆಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ...

ಹಾಸನ | ಆನ್‌ಲೈನ್ : ದೇವಿ ದರ್ಶನಕ್ಕೆ ಟಿಕೆಟ್ ಹಾಗೂ ಪ್ರಸಾದ ಲಭ್ಯವಿದೆ 

₹300 ಮತ್ತು ₹1,000 ವಿಶೇಷ ದರ್ಶನ ಟಿಕೆಟ್ಭ ಕ್ತರಿಗೆ ತ್ವರಿತ ಹಾಗೂ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...