ಗದಗ | ಬೆಳೆ ವಿಮಾ ಪರಿಹಾರ ನೀಡುವಂತೆ ರೈತರು ಬೃಹತ್ ಪ್ರತಿಭಟನೆ

Date:

ಗದಗ ಜಿಲ್ಲೆಯ 2025-26ನೇ ಸಾಲಿನ ಪ್ರಧಾನಮಂತ್ರಿ ಫಸಲಾ ಭೀಮಾ ಯೋಜನೆಯ ಬೆಳೆ ವಿಮಾ ಪರಿಹಾರ ಹಾಗೂ ಬೆಳೆವಿಮೆ ನೀಡುವಂತೆ ಕರ್ನಾಟಕ ರಾಜ್ಯ ಬೆಳೆ ವಿಮಾ ಹೋರಾಟ ಸಮಿತಿ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದರು ಬೃಹತ್ ಪ್ರತಿಭಟನೆ ನಡೆಸಿ ಉಪ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -
1003264019

ಮನವಿ ಸಲ್ಲಿಸಿ ಸಂಘಟನೆಯ ರಾಜ್ಯಾಧ್ಯಕ್ಷರು ಪರಮೇಶ್ವರಪ್ಪ ಪಿ. ಜಂತ್ಲಿ ಮಾತನಾಡಿ, “ಗದಗ ಜಿಲ್ಲೆಯ ಕೆಂಪು ಮೆಣಸಿನಕಾಯಿ, ಉಳ್ಳಾಗಡ್ಡಿ, ಹೆಸರು, ಶೇಂಗಾ, ಗೋವಿನ ಜೋಳ ಮುಂತಾದ ಮುಂಗಾರು ಬೆಳೆಗಳಲ್ಲಿ ಪ್ರಧಾನಮಂತ್ರಿ ಫಸಲ ಭೀಮಾ ಯೋಜನೆಯಡಿ ಲಕ್ಷಾಂತರ ರೈತರು ಬೆಳೆ ವಿಮಾ ಪಾವತಿಸಿದ್ದು, ಇಲ್ಲಿಯವರೆಗೂ ವಿಮಾ ಕಂಪನಿ ಯಾವುದೇ ಮಧ್ಯಂತರ ಪಾವತಿ ಮರೀಚಿಕೆಯಾಗಿದೆ. ಓರಿಯಂಟಲ್ ವಿಮಾ ಕಂಪನಿ ಗದಗ ಜಿಲ್ಲೆಯ ರೈತರಿಗೂ ಮತ್ತು ಸರಕಾರಕ್ಕೂ ಮೋಸ ಮಾಡುತ್ತಿದ್ದು, ಮಧ್ಯಂತರ ಸ್ಥಳೀಯ ಗಂಡಾಂತರ ಪರಿಹಾರ ಹಾಕದೇ ಕುಂಟ ನೆಪ ಹೇಳುತ್ತ ದಿನ ಮುಂದೆ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ...

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

“ಜಿಲ್ಲಾಧಿಕಾರಿಗಳು ತಕ್ಷಣ ಬೆಳೆ ವಿಮಾ ಕಂಪನಿಗೆ ಆದೇಶ ಮಾಡಿ ಬೆಳೆ ವಿಮಾ ತುಂಬಿದ ಎಲ್ಲಾ ರೈತರಿಗೂ ಸ್ಥಳೀಯ ಗಂಡಾಂತರ ಬೆಳೆ ವಿಮಾ ಪರಿಹಾರ ಮತ್ತು ಬೆಳೆ ವಿಮಾ ಪಾವತಿಸುವಂತೆ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

Advertisements

“ಜಿಲ್ಲಾಧಿಕಾರಿಗಳು ಒಂದು ವಾರದೊಳಗಾಗಿ ಓರಿಯಂಟಲ್ ವಿಮಾ ಕಂಪನಿಗೆ ಬೆಳೆವಿಮೆ ಹಣ ರೈತರ ಖಾತೆಗೆ ಜಮೆ ಮಾಡುವಂತೆ ಆದೇಶ ಮಾಡದಿದ್ದರೆ ಗದಗ ಜಿಲ್ಲೆಯ ರೈತರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ಸತ್ಯಾಗ್ರಹ ಮಾಡಲಾಗುವುದು” ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ರೈತರು ತಂದರು. 

ಈ ಸುದ್ದಿ ಓದಿದ್ದೀರಾ? ಕೊಡಗು | ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ

ಉಮೇಶ ಲಿಂಗರಡ್ಡಿಯವರು ಮಾತನಾಡಿ, “ದೂರು ದಾಖಲಿಸಿದ ಕೆಂಪು ಮೆಣಸಿನಕಾಯಿ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ನಿಯಮಾನುಸಾರ ಮಾದರಿ ಸಮೀಕ್ಷೆ ಪ್ರಕಾರ ಕೆಂಪು ಮೆಣಸಿನಕಾಯಿ ರೈತರಿಗೆ ಕಂಪನಿಯವರು ಹಣ ನೀಡುತ್ತಿಲ್ಲ. ಇದನ್ನು ಸರಿಪಡಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹನಮರೆಡ್ಡಿ ಮರಬರಡ್ಡಿ, ಎಫ್. ಎಸ್. ಪಾಟೀಲ, ಉಮೇಶ ಲಿಂಗರೆಡ್ಡಿ, ಬೂದೇಶ ಮೈಲಾರ, ರುದ್ರಯ್ಯ ಎಸ್. ಹಿರೇಮಠ, ಅಶೋಕ ಬಸೆಟ್ಟಿ, ಸತೀಶ ಗಿಡ್ಡಹನಮಣ್ಣವರ ಸೇರಿದಂತೆ ನೂರಾರು ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಭಾರತದಲ್ಲೇ ಮೊದಲ ಬಾರಿಗೆ eSIM ಬಾಕ್ಸ್ ಜಾಲ ಪತ್ತೆ; 55 ದಿನಗಳ ಕಾರ್ಯಾಚರಣೆ ಬಳಿಕ ನಾಲ್ವರ ಬಂಧನ

ದೇಶದಲ್ಲೇ ಮೊದಲ ಬಾರಿಗೆ ಇಂತಹ ಪ್ರಕರಣವನ್ನು ಭೇದಿಸಿರುವುದಾಗಿ ಹೇಳಲಾಗಿರುವ ಕರ್ನಾಟಕ ರಾಜ್ಯ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...