ಗದಗ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಜಾಗ ಶುದ್ಧೀಕರಣ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

Date:

ಹಿರಿಯ ರಾಜಕಾರಣಿ, ಸಂಸದ ಮಲ್ಲಿ‌ಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಕೆಲ ಹಿಂದೂಪರ ಸಂಘಟನೆಗಳು ಹೋಮ ಹವನ ಮಾಡಿ, ಶುದ್ಧೀಕರಿಸಿದ್ದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಂಖಂಡರು ಪ್ರತಿಭಟನೆ ನಡೆಸಿದರು.

- Advertisement -

ಗದಗ ಪಟ್ಟಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಗಾಂಧಿ ವೃತ್ತ ಸುತ್ತ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ದಿಕರಣ ಮಾಡಿದ್ದು, ನೋವಿನ ಸಂಗತಿ. ಸಂವಿಧಾನ ಜಾರಿಯಾಗಿ ಎಪ್ಪತ್ತ್ರೊಂಬತ್ತು ವರ್ಷಗಳು ಕಳೆದರೂ ಇನ್ನೂ ಕೆಲವು ಮನುವಾದಿಗಳು, ಮನುಸ್ಮೃತಿ ಅಸ್ಪೃಷ್ಯತೆ ಆಚರಿಸುತ್ತಿದ್ದಾರೆ. ಈ ದೇಶದಲ್ಲಿ ಅಸ್ಪೃಷ್ಯತೆ ಇದೆ ಅನ್ನುವುದಕ್ಕೆ ಇದು ಸಾಕ್ಷಿ” ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

“ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿರುವುದು ಖೇದಕರ ಸಂಗತಿ. ಕೆಳ ಸಮುದಾಯದಲ್ಲಿ ಹುಟ್ಟಿದ ಕಾರಣಕ್ಕೆ ಅವರು ನಿಂತು ಭಾಷಣ ಮಾಡಿದ ಸ್ಥಳವನ್ನು ಶುದ್ದಿಕರಿಸಿದ್ದು, ಖಂಡನೀಯ. ಖರ್ಗೆ ಅವರಿಗೆ ಆದ ಅವಮಾನವನ್ನು ನಾವು ಸಹಿಸುವುದಿಲ್ಲ. ಕೇವಲ ಅವರಿಗಷ್ಟೆ ಅಲ್ಲ, ಈ ದೇಶದ ದಲಿತರು, ಅಂಭೇಡ್ಕರ ಅವರಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದರು. ಆರ್.ಎಸ್.ಎಸ್, ಹಿಂದೂ ಪರಿಷತ್  ಅಸ್ಪೃಷ್ಯತ, ಅಸಮಾನತೆ ಮಾಡುತ್ತಾ ಬಂದವರು, ಈ ದೇಶದವರಲ್ಲ. ನಾವು ಈ ದೇಶದ ಮೂಲ ನಿವಾಸಿಗಳು. ಖರ್ಗೆ ಅವರನ್ನು ಅವಮಾನ ಮಾಡಿದ್ದನ್ನು ಎಲ್ಲರು ವಿರೋಧಿಸಬೇಕು” ಎಂದು ದಲಿತಪರ ಮುಖಂಡರು ಆಗ್ರಹಿಸಿದರು.

“ಮನುವಾದಿಗಳು ಮನುಸ್ಮೃತಿಯನ್ನು ಜೀವಂತವಾಗಿಡಲು ಮತ್ತೆ ಮತ್ತೆ ಇಂತಹ ಘಟನೆಗಳು ಮರುಕಳಿಸುತ್ತಿವೆ. ನಾವು ನಿಜವಾಗಿಯು ಬದ್ಧ, ಬಸವ, ಅಂಬೇಡ್ಕರ ಅವರ ಅನುಯಾಯಿಯಗಳೆ ಆಗಿದ್ದರೆ, ಇಂತಹ ಕ್ಷುದ್ರ ಶಕ್ತಗಳ ವಿರುದ್ಧ ವಿವಿಧ ಆಯಾಮಗಳಲ್ಲಿ ಚಳುವಳಿಗಳನ್ನು ಕೊಂಡೊಯ್ಯಬೇಕಿದೆ. ಮನೆ ಮನಗಳಿಗೆ ಸುದ್ದಿ ಮುಟ್ಟಿಸಬೇಕಿದೆ”” ಎಂದು ಮುಖಂಡರು ಹೇಳಿದರು.

“ಯಾವ ಒಂದು ಪಕ್ಷ ಸನಾತನವನ್ನು, ಬೆಂಬಲಿಸುತ್ತದೆಯೋ, ನಮ್ಮ ನಾಡನ್ನು ಆಳುತ್ತಿದೆಯೋ, ಅಂತಹ ಪಕ್ಷದಲ್ಲಿ ಇರುವ ದಲಿತರು, ಶೋಷನೆಯ ವಿರುದ್ಧ ಧ್ವನಿ ಎತ್ತುವ ಪ್ರಗತಿಪರರು ಎಲ್ಲರೂ ಕೂಡ ಖರ್ಗೆ ಅವರಿಗೆ ಆದ ಅಪಮಾನ, ಈ ನಾಡಿಗೆ ಆಗಿರುವ ಅಪಮಾನ ಎಂದು ಗಮನಿಸದೇ ಹೋದಲ್ಲಿ ನಾಯಕರಾಗಲು ಸಾಧ್ಯವಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಹಿರಿಯ ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ, ಅಶೋಕ ಬರಗುಂಡಿ, ಬಸವರಾಜ ಕಡೆಮನಿ, ಮುತ್ತು ಬಿಳಿಯಲಿ, ಶರೀಫ್ ಬಿಳಿಯಲಿ, ಆನಂದ ಶಿಂಗಾಡಿ, ಬಾಲರಾಜ ಅರಬರ್, ಕೆ.ಎಚ್ ಬೇಲೂರು ಸೇರಿದಂತೆ ಅನೇಕ ಪ್ರಗತಿ ಪರ ಚಿಂತಕರು, ಸಾಮಾಜಿಕಿ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...