ಗದಗ | ಸೇನೆಗೆ ಆಯ್ಕೆಯಾದ ಸರ್ಕಾರಿ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು

Date:

ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್‌ಗೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

- Advertisement -

ಈಚೆಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ  ಬಿಎ 6ನೇ ಸೆಮಿಸ್ಟರ್‌ನ ಕಳಕಾಪುರ ಗ್ರಾಮದ ಶಾರುಖ್ ಹಸನಸಾಬ್ ಗೌಡರ, ಬಿಎ 4ನೇ ಸೆಮಿಸ್ಟರ್‌ನ ಮಾರನಬಸರಿ ಗ್ರಾಮದ ಬಸವರಾಜ್ ಲಂಕೆಪ್ಪ ಕುರಿ,  ಬಿಎ 4ನೇ ಸೆಮಿಸ್ಟರ್‌ನ ಜಕ್ಕಲಿ ಗ್ರಾಮದ ಶಬ್ಬೀರಸಾಬ್ ಅಲ್ಲಿಸಾಬ್ ಬಸಾಪುರ ಮತ್ತು  ಬಿಎಸ್‌ಸಿ 4ನೇ ಸೆಮಿಸ್ಟರ್‌ನ ಜಕ್ಕಲಿ ಗ್ರಾಮದ  ಶಂಕರಪ್ಪ ಮಲ್ಲಪ್ಪ ಇಟಗಿ  ಇವರು ಸೇನೆಗೆ ಆಯ್ಕೆಯಾಗಿದ್ದಾರೆ” ಎಂದು ಪ್ರಾಂಶುಪಾಲರು ಜಯಶ್ರೀ ಮುತಗಾರ ಪ್ರಕಟಣೆಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಗ್ನಿವೀರ್‌ಗೆ‌ ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರು ಹಾಗೂ ರೋಣ ಮತಕ್ಷೇತ್ರದ ಶಾಸಕರಾದ ಜಿ. ಎಸ್.‌ ಪಾಟೀಲ ಅವರು ಹಾಗೂ ಸಿಡಿಸಿ ಸದಸ್ಯರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಈಚೆಗೆ ಕಾಲೇಜಿನಲ್ಲಿ ನಡೆದ ಕಾಂಪಸ್‌ ಸಂದರ್ಶನದಲ್ಲಿ ವಿವಿಧ ಕಂಪನಿಗಳಿಗೆ 79 ವಿದ್ಯಾರ್ಥಿಗಳು ಆಯ್ಕೆಯಾಗಿ ಬದುಕು ಕಟ್ಟಿಕೊಂಡಿದ್ದಾರೆ. ಈಗ ನಾಲ್ಕು ವಿದ್ಯಾರ್ಥಿಗಳು ಸೇನೆಗೆ ಆಯ್ಕೆಯಾಗುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

“ಪ್ರಸಕ್ತ ಸಾಲಿನ ಪ್ರಥಮ ವರ್ಷದ ಪದವಿ ಕೋರ್ಸ್‌ನ ಪ್ರವೇಶಾತಿಗೆ ವಿವಿಧ ಊರುಗಳಿಂದ ವಿದ್ಯಾರ್ಥಿಗಳು ಬರುತ್ತಿರುವುದು ವಿಶೇಷವಾಗಿದೆ. ಈಗಾಗಲೇ ನಮ್ಮಲ್ಲಿ ಬಿಸಿಎ ವಿಭಾಗದ ಪ್ರವೇಶಾತಿ ಪೂರ್ಣಗೊಂಡಿದ್ದು ಬಿಎ, ಬಿಕಾಂ, ಹಾಗೂ ಬಿಎಸ್‌ಸಿ (ಸಿಎಸ್)‌ ವಿಭಾಗಕ್ಕೆ ಪ್ರವೇಶಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಹಾಗೂ ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...