ಗದಗ | ಉಚಿತ ನೇತ್ರ, ಶಸ್ತ್ರ ಚಿಕಿತ್ಸಾ ಶಿಬಿರ

Date:

ಹುಬ್ಬಳ್ಳಿಯ ​ಜಯಪ್ರಿಯ ಫೌಂಡೇಶನ್, ಅಬ್ಬಿಗೇರಿಯ ನವಜ್ಯೋತಿ ಗ್ರಾಮೀಣಾಭಿವೃದ್ಧಿ ವಿವಿಧೋದ್ದೇಶ ಹಾಗೂ ಶಿಕ್ಷಣ ಸೇವಾ ಸಂಸ್ಥೆ, ಕರ್ನಾಟಕ ರಾಜ್ಯ ರೈತ ಸಂಘ ರೋಣ ಘಟಕ ಮತ್ತು ಗ್ರಾಮ, ಗದಗ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘ ಇವರ ಆಶ್ರಯದಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿಯ ಅನ್ನದಾನೇಶ್ವರ ಮಠದಲ್ಲಿ ಬುಧವಾರ ನಡೆದ ಉಚಿತ ನೇತ್ರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.

- Advertisement -

ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಮುತ್ತಣ್ಣ ಚೌಡರೆಡ್ಡಿ ಮಾತನಾಡಿ, “ಆರೋಗ್ಯ ರಕ್ಷಣೆಗೆ ಶಿಬಿರಗಳು ಸಹಕಾರಿ. ಗ್ರಾಮೀಣ ಭಾಗದ ಬಡ ಜನರಿಗೆ ಉನ್ನತ ಗುಣಮಟ್ಟದ ಕಣ್ಣಿನ ಚಿಕಿತ್ಸೆ ಸಿಗುವುದು ಕಷ್ಟಸಾಧ್ಯವಾಗಿದೆ. ಇಂತಹ ಪ್ರಮುಖ ಸಂಸ್ಥೆಗಳು ಒಗ್ಗೂಡಿ ಅಬ್ಬಿಗೇರಿಯಲ್ಲಿ ಉಚಿತ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಬಡವರ ಕಣ್ಣಿಗೆ ಬೆಳಕು ನೀಡುವ ಈ ಸೇವೆ ನಿರಂತರವಾಗಿ ನಡೆಯಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಕರ್ನಾಟಕ ರಾಜ್ಯ ರೈತ ಸಂಘದ ರೋಣ ತಾಲ್ಲೂಕು ಘಟಕದ ಅಧ್ಯಕ್ಷ ಸಂಗಣ್ಣ ಪವಾಡಶೆಟ್ಟಿ ಮಾತನಾಡಿ, “ನಮ್ಮ ರೈತರು ದಿನವಿಡೀ ಬಿಸಿಲು, ದೂಳಿನಲ್ಲಿ ದುಡಿಯುವುದರಿಂದ ಕಣ್ಣಿನ ಸಮಸ್ಯೆಗಳಿಗೆ ಬೇಗನೆ ತುತ್ತಾಗುತ್ತಾರೆ. ಆದರೆ, ಆರ್ಥಿಕ ತೊಂದರೆಯಿಂದ ಚಿಕಿತ್ಸೆ ಪಡೆಯಲು ಹಿಂಜರಿಯುತ್ತಾರೆ. ಇಂತಹ ಉಚಿತ ಶಿಬಿರಗಳು ನೇರವಾಗಿ ಗ್ರಾಮೀಣ ಭಾಗದ ರೈತರ ಮನೆಬಾಗಿಲಿಗೆ ಆರೋಗ್ಯ ಸೇವೆಯನ್ನು ತಲುಪಿಸುತ್ತಿವೆ” ಎಂದು ಹೇಳಿದರು.

ಗದಗ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ವೀರೇಶ ಕಲಹಾಳ ಪ್ರಾಸ್ತಾವಿಕವಾಗಿ ಮಾತನಾಡಿ, ಕಟ್ಟಡ ಕಾರ್ಮಿಕರು ಅಪಾಯಕಾರಿ ಸನ್ನಿವೇಶಗಳಲ್ಲಿ ಕೆಲಸ ಮಾಡುವುದರಿಂದ ಅವರ ಕಣ್ಣಿನ ರಕ್ಷಣೆ ಅತ್ಯಂತ ಅಗತ್ಯವಾಗಿದೆ’ ಎಂದರು.

​ಹುಬ್ಬಳ್ಳಿಯ ಜಯಪ್ರಿಯಾ ಕಣ್ಣಿನ ಆಸ್ಪತ್ರೆಯ ನೇತ್ರ ವಿಭಾಗದ ಡಾ.ಚಂದ್ರು ಹುಬ್ಬಳ್ಳಿ, ಶ್ರೀಕಾಂತ ರೋಣ ಮತ್ತು ಸಿಬ್ಬಂದಿಗಳು ನೊಂದಾಯಿಸಿಕೊಂಡ 150 ಜನರನ್ನು ತಪಾಸಣೆ ನಡೆಸಿದರು. 30 ಜನರನ್ನು ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳನ್ನು ಗುರುತಿಸಿ, ಅವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಿದರು.

ಬಸವರಾಜ ಪಲ್ಲೇದ, ವಿನಾಯಕ ಜೋಶಿ, ವೀರಯ್ಯ ಅರಳಿಕಟ್ಟಿ, ಸಂಗಣ್ಣ ದಂಡಿನ, ಶಿವಲಿಂಗಪ್ಪ ತಿಪಶೆಟ್ಟಿ, ಬಸನಗೌಡ್ರ ಚನ್ನಪ್ಪಗೌಡ್ರ, ಶಂಕ್ರಪ್ಪ ಆರೇರ, ಬುದ್ದಿವಂತಪ್ಪ ಉಪಾಧ್ಯ, ಸೋಮಣ್ಣ ಕಣವಿ, ಕಳಕಪ್ಪ ನೀರಲೋಟ್ಟಿ, ಮೖಲಾರಪ್ಪ ಚವಡಿ, ಮಾದೇವಿ ಅಸೂಟಿ, ರಮೇಶ ಇಮ್ರಾಪುರ, ಮಲ್ಲಪ್ಪ ಎಂಡಿಗೇರಿ, ಮಲ್ಲಪ್ಪ ನೀರಲೋಟ್ಟಿ, ಪ್ರಕಾಶ ಮಾರನಬಸರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...