ಗದಗ | 35 ಎಕರೆ ಪ್ರದೇಶದಲ್ಲಿ ಭವ್ಯ ಬ್ಯುಸಿನೆಸ್ ಸೆಂಟರ್

Date:

ನಗರದ ಹೃದಯ ಭಾಗದಲ್ಲಿರುವ ಸುಮಾರು 35 ಎಕರೆ ಭೂಮಿಯಲ್ಲಿ ಆಧುನಿಕ ಹಾಗೂ ಸಮಗ್ರ ವಾಣಿಜ್ಯ ಕೇಂದ್ರ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಗೆ ವೇಗ ದೊರೆತಿದ್ದು, ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರದ ಆಶ್ರಯದಲ್ಲಿ ಶನಿವಾರ ಜಿಲ್ಲಾಡಳಿತ ಭವನದಲ್ಲಿ ದ್ವಿತೀಯ ಸಮಾಲೋಚನಾ ಸಭೆ ನಡೆಯಿತು.

- Advertisement -

ಶಾಸಕ ಡಾ. ಎಚ್.ಕೆ. ಪಾಟೀಲ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗದಗ-ಬೆಟಗೇರಿ ಬ್ಯುಸಿನೆಸ್ ಸೆಂಟರ್ ಅನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಸಂಬಂಧ ಆಹ್ವಾನಿಸಲಾಗಿರುವ Expression of Interest (EOI) ನಲ್ಲಿ ಭಾಗವಹಿಸಿರುವ ಬಿಡ್‌ದಾರರು, ಉದ್ಯಮಿಗಳು, ವ್ಯಾಪಾರಸ್ಥರು ಹಾಗೂ ಹೂಡಿಕೆದಾರರೊಂದಿಗೆ ಯೋಜನೆಯ ವಿವಿಧ ಆಯಾಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಸಭೆಯಲ್ಲಿ ಮಾತನಾಡಿದ ಶಾಸಕ ಡಾ. ಎಚ್.ಕೆ. ಪಾಟೀಲ ಅವರು, ಈಗಾಗಲೇ ಯೋಜಿತಗೊಳಿಸಿರುವ ಕಟ್ಟಡ ಮತ್ತು ಮೂಲಸೌಕರ್ಯಗಳು ಅತ್ಯುತ್ತಮ ಗುಣಮಟ್ಟದಲ್ಲಿ ನಿರ್ಮಾಣವಾಗಬೇಕು. ಗುಣಮಟ್ಟಕ್ಕೆ ಯಾವುದೇ ಕಾರಣಕ್ಕೂ ರಾಜಿಯಾಗಬಾರದು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ವಕಾರ ಸಾಲಿನ ಜಾಗದಲ್ಲಿ ನಿರ್ಮಾಣವಾಗಲಿರುವ ಯೋಜನೆಗೆ ರೂಪಿಸಲಾಗಿರುವ ವಿನ್ಯಾಸದಂತೆ ಅತ್ಯಾಕರ್ಷಕ ಹಾಗೂ ಜನೋಪಯೋಗಿ ಕಟ್ಟಡ ನಿರ್ಮಾಣವಾಗಬೇಕು. ಯೋಜನೆಯ ಪ್ರತಿಯೊಂದು ಕಾಮಗಾರಿಯೂ ಸಾರ್ವಜನಿಕರಿಗೆ ದೀರ್ಘಕಾಲಿಕವಾಗಿ ಸದ್ಬಳಕೆಯಾಗುವಂತಿರಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರಬೇಕು” ಎಂದರು.

“ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮೂಲಕ ಯೋಜನೆ ಅನುಷ್ಠಾನಗೊಳ್ಳುತ್ತಿರುವುದರಿಂದ ಬಿಡ್‌ದಾರರು ಕೇವಲ ಲಾಭದ ದೃಷ್ಟಿಯಿಂದ ಮಾತ್ರ ಯೋಜನೆಯಲ್ಲಿ ಭಾಗವಹಿಸದೆ ಸೇವಾ ಮನೋಭಾವದಿಂದ ಪಾಲ್ಗೊಳ್ಳಬೇಕು. ಸರ್ಕಾರ, ಸಾರ್ವಜನಿಕರು ಹಾಗೂ ಖಾಸಗಿ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ರೂಪುಗೊಳ್ಳುತ್ತಿರುವ ಈ ಯೋಜನೆಯ ಮೂಲ ಉದ್ದೇಶ ಜನಸಾಮಾನ್ಯರಿಗೆ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸುವುದಾಗಿದೆ” ಎಂದು ತಿಳಿಸಿದರು.

ಏಳು ಸೆಕ್ಟರ್‌ಗಳಲ್ಲಿ ಹಂತಹಂತವಾಗಿ ಅಭಿವೃದ್ಧಿ: ಬ್ಯುಸಿನೆಸ್ ಸೆಂಟರ್ ಯೋಜನೆಯನ್ನು ಒಟ್ಟು ಏಳು ಸೆಕ್ಟರ್‌ಗಳಾಗಿ ವಿಂಗಡಿಸಿ ಹಂತಹಂತವಾಗಿ ಅನುಷ್ಠಾನಗೊಳಿಸುವ ಉದ್ದೇಶ ಹೊಂದಲಾಗಿದೆ. ಯೋಜನೆಯಡಿ ಪಂಚತಾರಾ ಹೋಟೆಲ್, ಆಧುನಿಕ ವಾಣಿಜ್ಯ ಮಳಿಗೆಗಳು, ಸಭಾಂಗಣ, ಟೆಕ್ಸ್‌ಟೈಲ್ ಕೇಂದ್ರ, ಮಕ್ಕಳ ಮನರಂಜನಾ ಪ್ರದೇಶ, ಗಾಂಧಿ ಭವನ, ಆಕರ್ಷಕ ವೃತ್ತಗಳು, ಅಗಲವಾದ ರಸ್ತೆಗಳು ಹಾಗೂ ವ್ಯವಸ್ಥಿತ ಸಾರಿಗೆ ಸಂಪರ್ಕ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಯೋಜಿಸಲಾಗಿದೆ” ಎಂದು ತಿಳಿಸಿದರು.

ಸೆಪ್ಟೆಂಬರ್ 10ರೊಳಗಾಗಿ ಹೂಡಿಕೆದಾರರು ಹಾಗೂ ವ್ಯಾಪಾರಸ್ಥರು ತಮ್ಮ ಅಗತ್ಯತೆಗಳು ಮತ್ತು ಸಲಹೆಗಳನ್ನು ಲಿಖಿತವಾಗಿ ಸಲ್ಲಿಸುವ ಮೂಲಕ ಯೋಜನೆಯ ಅನುಷ್ಠಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಶಾಸಕ ಡಾ. ಎಚ್.ಕೆ. ಪಾಟೀಲ ಮನವಿ ಮಾಡಿದರು.

ಸಭೆಯಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಡಾ. ಎನ್.ಎಚ್. ನಾಗನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ ಎಂ., ಬಸನಗೌಡ ಕೊಟೂರ, ರಾಜಾರಾಮ ಪವಾರ್, ಕೊಟ್ರೇಶ್ ವಿಭೂತಿ, ವಸಂತ ಮಡ್ಲೂರ, ಜಿ.ಜೆ. ರುದ್ರಣ್ಣಗೌಡ, ನಿಜಾಮುದ್ದೀನ್, ಜಂಟಿ ನಿರ್ದೇಶಕ (ಕೈಗಾರಿಕೆ) ಪ್ರಕಾಶ್, ಗೋಪಾಲ್ ಅಗರವಾಲ್, ಆಕಾಶ್ ಅಗರವಾಲ್, ನವೀನ್ ಸೇರಿದಂತೆ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು, ವ್ಯಾಪಾರಸ್ಥರು, ಸಣ್ಣ ಕಟ್ಟಡ ಹಾಗೂ ಬಡಾವಣೆ ನಿರ್ಮಾಣದಾರರು, ಹೂಡಿಕೆದಾರರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...