ಗದಗ | ಎಚ್ ಕೆ ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: ಕಾಂಗ್ರೆಸ್ ಸದಸ್ಯರ ರಾಜೀನಾಮೆ

Date:

ಎರಡನೇ ನೂತನ ಸಚಿವ ಸಂಪುಟದಲ್ಲಿ ಎಚ್ ಕೆ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಗದಗ-ಬೆಟಗೇರಿ ನಗರಸಭೆಯ ಕಾಂಗ್ರೆಸ್ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಗೆ ಸಾಮೂಹಿಕವಾಗಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

- Advertisement -

ಗದಗ ಪಟ್ಟಣದ ಹಳೆಯ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಎಚ್ ಕೆ ಪಾಟೀಲ್ ಬೆಂಬಲಿಗರು, ಕಾರ್ಯಕರ್ತರು ರಸ್ತೆ ತಡೆದು ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಹೈ ಕಮಾಂಡ್, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಗರಸಭೆಯ 16 ಚುನಾಯಿತ ಕಾಂಗ್ರೆಸ್ ಸದಸ್ಯರು ಹಾಗೂ 5 ಮಂದಿ ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 21 ಮಂದಿ ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ನೀಡಿದರು.

ಈ ವೇಳೆ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಪಕ್ಷದ ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಸದಸ್ಯರು, ಉತ್ತರ ಕರ್ನಾಟಕ ಭಾಗಕ್ಕೆ ಸತತವಾಗಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ‘ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ’ಕ್ಕೆ ಬೇಡಿಕೆ ಇಡುವ ಮೂಲಕ ತಮ್ಮ ಪ್ರತಿಭಟನೆ ದಾಖಲಿಸಿದರು.

ಈ ಸುದ್ದಿ ಓದಿದ್ದೀರಾ? ಮಾನವೀಯತೆಗೂ SIRಗೂ ಸಂಬಂಧವೇನು? ಪ್ರಜಾಪ್ರಭುತ್ವದ ಹಕ್ಕು, ದಾಖಲೆಗಳ ಗೊಂದಲ-ಉತ್ತರ ಸಿಗದ ಪ್ರಶ್ನೆಗಳು

ಎಚ್ ಕೆ ಪಾಟೀಲ ಅವರು ನಾಲ್ಕು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿ, ಮೂರು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ನಾಡಿನ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಇಂತಹ ಹಿರಿಯ ಹಾಗೂ ಅನುಭವಿ ರಾಜಕಾರಣಿಯ ಸೇವೆಯನ್ನು ಪರಿಗಣಿಸದೆ, ಅವರಿಗೆ ಸಚಿವ ಸ್ಥಾನ ತಪ್ಪಿಸಿ ಹೈಕಮಾಂಡ್ ತೀವ್ರ ಅನ್ಯಾಯ ಎಸಗಿದೆ. ಈ ನಿರ್ಧಾರಕ್ಕೆ ಬೇಸತ್ತು ತಾವೆಲ್ಲರೂ ಸಾಮೂಹಿಕ ರಾಜೀನಾಮೆ ನೀಡುತ್ತಿರುವುದಾಗಿ ನಗರಸಭೆ ಸದಸ್ಯರು ತಿಳಿಸಿದರು.

ನಗರಸಭೆ ಸದಸ್ಯರಾದ ಕೃಷ್ಣಾ ಪರಾಪೂರ, ಸುರೇಶ ಕಟ್ಟಿಮನಿ, ಬರಕತಾಲಿ ಮುಲ್ಲಾ, ರವಿ ಕಮತರ, ಚಂದ್ರು ಕರಿಸೋಮನಗೌಡ್ರ, ಇಮ್ತಿಯಾಜ್ ಶಿರಹಟ್ಟಿ, ಪದ್ಮಾ ಕಟಗಿ, ಪರವೀನಬಾನು ಮುಲ್ಲಾ, ಶಕುಂತಲಾ ಅಕ್ಕಿ, ಜೈನುದ್ದೀನ ನಮಾಜಿ ಸೇರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....