ಕರ್ನಾಟಕ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಗದಗ ಜಿಲ್ಲೆಯಲ್ಲಿ ಆಗಸ್ಟ್ 5ರಿಂದ 7ರವರೆಗೆ ಪ್ರವಾಸ ಕೈಗೊಳ್ಳಲಿದ್ದು, ಆ.5ರ ಮಧ್ಯಾಹ್ನ 3.20ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಸಂಜೆ 4.45ಕ್ಕೆ ಹುಬ್ಬಳ್ಳಿಗೆ ಆಗಮಿಸುವರು. ಸಂಜೆ 4.45 ರಿಂದ ಹುಬ್ಬಳ್ಳಿ ಏರ್‌ಪೋರ್ಟ್‌ನಿಂದ ಹೊರಟು 5.45ಕ್ಕೆ ಗದಗ ಜಿಲ್ಲೆಗೆ ಆಗಮಿಸಿ ವಾಸ್ತವ್ಯ ಮಾಡುವರು.
ಆಗಸ್ಟ್ 6ರಂದು ಬೆಳಿಗ್ಗೆ 9ರಿಂದ 10ರವರೆಗೆ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯನ್ನು ಉದ್ಘಾಟಿಸುವರು. ಬಳಿಕ ಮಧ್ಯಾಹ್ನ 1.30ರವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸಾರ್ವಜನಿಕರ ದೂರು ಅರ್ಜಿ ಸ್ವೀಕರಿಸಿ ವಿಚಾರಣೆ ನಡೆಸುವರು. ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸಾರ್ವಜನಿಕರಿಂದ ದೂರು/ ಅರ್ಜಿಗಳನ್ನು ವಿಚಾರಣೆ ನಡೆಸುವರು ನಂತರ ಗದಗನಲ್ಲಿ ವಾಸ್ತವ್ಯ ಮಾಡುವರು.
ಈ ಸುದ್ದಿ ಓದಿದ್ದೀರಾ? ಒಂಡೆಡೆ ನೀರಿಗಾಗಿ ಹಾಹಾಕಾರ, ಹೋರಾಟ; ಮತ್ತೊಂದೆಡೆ ಪ್ರವಾಹ: ರಾಜ್ಯದ ಮುಂದೆ ಬಹುಮುಖ ಜಲ ಸವಾಲು
ಆ.7ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಬಾಕಿ ಉಳಿದ ದೂರು ಅರ್ಜಿಗಳನ್ನು ವಿಚಾರಣೆ ನಡೆಸುವರು. ನಂತರ ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ. ಸಂಜೆ 7.10ಕ್ಕೆ ಗದಗದಿಂದ ರೈಲು ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುವರು ಎಂದು ಲೋಕಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.




