ಗದಗ | ಮಲಗಿದ್ದ ಪತಿಯನ್ನು ಕಬ್ಬಿನ ರಾಡ್ ನಿಂದ ಹೊಡೆದು ಕೊಲೆ: ಆರೋಪಿ ಪತ್ನಿ ಬಂಧನ

Date:

ಮನೆಯಲ್ಲಿ ಮಲಗಿದ್ದ ಪತಿಯನ್ನು ಪತ್ನಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೈದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದಲ್ಲಿ ನಡೆದಿದಿದ್ದು, ಪತ್ನೆಯನ್ನು ಪೋಲಿಸರು ಬಂಧಿಸಿದ್ದಾರೆ.

- Advertisement -

ವಿಶ್ವನಾಥ ಹಾದಿಮನಿ (28) ಕೊಲೆಯಾದ ಯುವಕ. ಮೃತರ ಪತ್ನಿ ಕವಿತಾ (ಶ್ವೇತಾ) ಹಾದಿಮನಿ (26) ಕೊಲೆ ಆರೋಪಿಯಾಗಿದ್ದು ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಕೊಲೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ. ದಂಪತಿಗೆ ಮೂರು ವರ್ಷದ ಪುತ್ರನಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ವಿಶ್ವನಾಥ ಹಾದಿಮನಿ ಬಾಗಲಕೋಟೆಯ ಶ್ರೀಕುಮಾರೇಶ್ವರ ನಗರ ಬಡಾವಣೆ ನಿವಾಸಿ, ದೂರದ ಸಂಬಂಧಿಕಳೂ ಆಗಿರುವ ಕವಿತಾಳನ್ನು ಪ್ರೀತಿಸಿ ಕುಟುಂಬದ ಹಿರಿಯರ ಸಮ್ಮುಖದಲ್ಲಿ 2022ರ ಫೆ. 7ರಂದು ವಿವಾಹವಾಗಿದ್ದರು. ಬಳಿಕ ಇವರೊಳಗೆ ವೈಮನಸ್ಸು ಉಂಟಾಗಿದ್ದು, ಕವಿತಾ ಮೂರು ವರ್ಷಗಳ ಹಿಂದೆಯೇ ತವರು ಮನೆಗೆ ತೆರಳಿದ್ದಳು. ಇತ್ತೀಚೆಗೆ ವಿಶ್ವನಾಥನ ಸಹೋದರಿಯ ವಿವಾಹ ನಿಶ್ಚಯವಾಗಿತ್ತು. ಹೀಗಾಗಿ ತಂದೆ-ತಾಯಿ ಒತ್ತಾಯದ ಮೇರೆಗೆ ಕವಿತಾ ಇತ್ತೀಚೆಗೆ ರಡ್ಡೆರನಾಗನೂರ ಗ್ರಾಮಕ್ಕೆ ಆಗಮಿಸಿದ್ದಳು. ನಾದಿನಿಯ ಮದುವೆ ಬಳಿಕ ಕವಿತಾ ಪುನಹ ತವರಿಗೆ ವಾಪಸಾಗಿದ್ದಳು.

ಒಂದು ವಾರದ ಬಳಿಕ ಅಂದರೆ ಮೇ 18ರಂದು ಕವಿತಾ ಪತಿಯ ಮನೆಗೆ ವಾಪಸಾಗಿದ್ದಳು. ಮಂಗಳವಾರ ರಾತ್ರಿ ವಿಶ್ವನಾಥ ಮನೆಯ ಕೋಣೆಯಲ್ಲಿ ಮಲಗಿದ್ದಾಗ ವಿಶ್ವನಾಥರ ತಲೆಗೆ ಕವಿತಾ ಕಬ್ಬಿಣದ ರಾಡ್ ನಿಂದ ಬಲವಾಗಿ ಹೊಡೆದಿದ್ದು, ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ವಿಶ್ವನಾಥರ ತಾಯಿ ಗೌರವ್ವ ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ನರಗುಂದ ಠಾಣೆಯ ಪೊಲೀಸರು ಆರೋಪಿ ಕವಿತಾಳನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...