ಗದಗ | ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳ ಏರಿಕೆ: ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ವಿರೋಧ

Date:

“ಗೃಹಬಳಕೆ ಮತ್ತು ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳ ತೀವ್ರ ಏರಿಕೆ, ಕುಗ್ಗುತ್ತಿರುವ ನೈಜ ಆದಾಯದಿಂದ ತತ್ತರಿಸುತ್ತಿರುವ ಮಧ್ಯಮ ವರ್ಗ ಮತ್ತು ದುಡಿಯುವ ಜನರ ಮೇಲೆ ಇನ್ನಷ್ಟು ಹೊರೆಗಳನ್ನು ಹೇರುತ್ತಿವೆ” ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ್ ವಿರೋಧ ವ್ಯಕ್ತಪಡಿಸಿದರು‌.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, “ಗೃಹಬಳಕೆದಾರರಿಗೆ ರೂ. 60/- ರಷ್ಟು ಏರಿಕೆ ಉಜ್ವಲ ಯೋಜನೆಯ ಬಡ ಫಲಾನುಭವಿಗಳನ್ನು ಸಹ ಬಿಡುವುದಿಲ್ಲ. ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ರೂ. 114.50 ರಷ್ಟು ಏರಿಕೆಯನ್ನು ಕೂಡ ಅಂತಿಮವಾಗಿ ಗ್ರಾಹಕರ ಮೇಲೆಯೇ ದಾಟಿಸಲಾಗುತ್ತದೆ. ನಿರಂತರ ಬೆಲೆ ಏರಿಕೆ ಮತ್ತು ಕುಗ್ಗುತ್ತಿರುವ ನೈಜ ಆದಾಯದಿಂದ ತತ್ತರಿಸುತ್ತಿರುವ ಮಧ್ಯಮ ವರ್ಗ ಮತ್ತು ದುಡಿಯುವ ಜನರ ಮೇಲೆ ಇನ್ನಷ್ಟು ಹೊರೆಗಳನ್ನು ಹೇರುತ್ತಿವೆ. ಸಿಲಿಂಡರ್‌ಗಳ ಮೇಲಿನ ತೆರಿಗೆಯಿಂದ ಬರುವ ಆದಾಯವನ್ನು ಬಿಟ್ಟುಕೊಡಲು ನಿರಾಕರಿಸುವುದು ಈ ಸರ್ಕಾರದ ಜನವಿರೋಧಿ ಸ್ವಭಾವವನ್ನು ಬಯಲಿಗೆ ತರುತ್ತಿದೆ” ಎಂದು ಸಿಪಿಐ(ಎಂ) ಖಂಡಿಸಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

“ಪಶ್ಚಿಮ ಏಷ್ಯಾದ-ಸಂಘರ್ಷವನ್ನು ಉಲ್ಲೇಖಿಸುವ ಮೂಲಕ ಈ ಅನಿಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುವ ಮೋದಿ ಸರ್ಕಾರದ ಬೂಟಾಟಿಕೆಯ ಪ್ರಯತ್ನವು ಇದರಲ್ಲಿ ತನ್ನ ಸ್ವಂತ ಅಪರಾಧವನ್ನು ಮುಚ್ಚಿಹಾಕುವ ಒರಟು ಪ್ರಯತ್ನವಲ್ಲದೆ ಬೇರೇನೂ ಅಲ್ಲ. ವಾಸ್ತವದಲ್ಲಿ, ಇದು ಟ್ರಂಪ್ ಆಡಳಿತದ ಯುದ್ಧಕೋರ ನೀತಿಗಳ ಮುಂದೆ ಸರ್ಕಾರದ ಶರಣಾಗತಿ. ನಮ್ಮ ದೇಶದ ಜನರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿ ಯುಎಸ್ ಜಾಗತಿಕ ಯಜಮಾನಿಕೆಯ ಹಿತಾಸಕ್ತಿಗಳನ್ನು ಪೂರೈಸಲು ಅದು ಸಿದ್ಧವಾಗಿರುವುದನ್ನು ಬಿಂಬಿಸುತ್ತದೆ. ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಮಾಡಲಾದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ” ಕೇಂದ್ರ ಸರ್ಕಾರಕ್ಕೆ ಬಾಲು ರಾಠೋಡ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....

ಯಾದಗಿರಿ | ಬುದ್ಧನ ಸಮಾನತೆ, ಶಾಂತಿ ಸಂದೇಶದೊಂದಿಗೆ ವರ್ಷವಾಸ ಸಮಾರೋಪ; ಭಿಕ್ಕುಗಳಿಗೆ ಚೀವರದಾನ

ಬುದ್ಧನ ಸಮಾನತೆ, ಶಾಂತಿ, ಮಾನವೀಯತೆ ಹಾಗೂ ಪ್ರಜ್ಞೆಯ ಸಂದೇಶವನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವ...

ರಾಯಚೂರು | ದೇವರಗುಡ್ಡ ಸೀಮಾಂತರದಲ್ಲಿ ₹11.94 ಲಕ್ಷ ಮೌಲ್ಯದ 23.89 ಕೆ.ಜಿ. ಗಾಂಜಾ ಜಪ್ತಿ: ಆರೋಪಿ ಬಂಧನ

ದೇವದುರ್ಗ ತಾಲೂಕಿನ ದೇವರಗುಡ್ಡ ಸೀಮಾಂತರದಲ್ಲಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಬೆಳೆದಿದ್ದ...