ಗದಗ | ಮಹನೀಯರ ಭಾವಚಿತ್ರಕ್ಕೆ ಅವಮಾನ; ಕಠಿಣ ಕ್ರಮಕ್ಕೆ ಡಿಎಸ್ಎಸ್ ಮನವಿ

Date:

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ವೀರಾಪೂರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ, ಬಸವಣ್ಣ ಸೇರಿದಂತೆ ಅನೇಕ ಮಹನೀಯರ, ರಾಷ್ಟ್ರೀಯ ನಾಯಕರ ಭಾವಚಿತ್ರಗಳಿಗೆ ಕಿಡಗೇಡಿಗಳು ಸೆಗಣಿ ಎರಚಿ ಅವಮಾನ ಮಾಡಿರುವುದು ಅತ್ಯಂತ ಹೀನ ಮತ್ತು ಹೇಯ ಕೃತ್ಯ. ಕೂಡಲೇ ಕೃತ್ಯ ಎಸಗಿದ ಕಿಡಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

ಡಿಎಸ್ಎಸ್ ವಿಭಾಗೀಯ ಸಂಚಾಲಕ ಶರಣು ಪೂಜಾರ ಮಾತನಾಡಿ, “ಮಾಹಾನ್ ನಾಯಕರಿಗೆ ಇಂತಹ ಹೀನ ಕೃತ್ಯ ನಡೆದಿರುವುದು ಅತ್ಯಂತ ಖಂಡನೀಯವಾಗಿದ್ದು, ಇದರ ಕುರಿತು ಗೌರವಾನ್ವಿತ ರಾಜ್ಯಪಾಲರು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆ ಸುಗ್ರಿವಾಜ್ಞೆಯನ್ನು ಹೊರಡಿಸಿದ್ದು,ರಾಜ್ಯದಲ್ಲಿ ರಾಷ್ಟ್ರೀಯ ನಾಯಕರುಗಳ ಮೂರ್ತಿಗಳಿಗೆ ಹಾಗೂ ಭಾವಚಿತ್ರಗಳಿಗೆ ಅವಮಾನ ಮಾಡುವುದು ರಾಷ್ಟ್ರೀಯ ಅಪರಾದವಾಗಿದೆ. ಇದರ ಕುರಿತು ಸರ್ಕಾರಗಳಿಗೆ ಸುತ್ತೋಲೆ ಹೊರಡಿಸಿ ಸೂಕ್ತ ಕಠಿಣ ಕಾನೂನು ರಚನೆ ಮಾಡಿ ಆದೇಶ ಹೊರಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ರಾಷ್ಟ್ರೀಯ ನಾಯಕರಾದ ಡಾ.ಬಿ.ಆರ್ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಅವಮಾನ ಮಾಡುವುದು ಸಾರ್ವಜನಿಕ ಶಾಂತಿ ಕದಡುವ ಮತ್ತು ಧಾರ್ಮಿಕ, ಸಮುದಾಯಿಕ ಭಾವನೆಗಳಿಗೆ ದಕ್ಕೆ ತರುವುದು ಅಪರಾಧವಾಗಿದೆ. ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ಆಶಾಂತಿ ಉಂಟು ಮಾಡುವ ಅಪರಾಧವಾಗಿದ್ದು, ಇಂತಹ ಘಟನೆಯು ರಾಷ್ಟ್ರೀಯ ಭಾವೈಕ್ಯತೆಗೆ ಭಂಗ ತರುವ ಕೃತ್ಯವಾಗಿರುತ್ತದೆ” ಎಂದರು.

 “ಇಂತಹ ಅಪರಾಧಗಳಲ್ಲಿ ತೊಡಗಿರುವ ಯಾವನೇ ವ್ಯಕ್ತಿ ಅಥವಾ ಪ್ರಚೋದಿಸುವ ಗುಂಪುಗಳಿಗೆ ಸೂಕ್ತ ಕಾನೂನು ರಚನೆ ಮಾಡಿ ಗಡಿಪಾರು ಮಾಡುವ ಕಠಿಣ ಕಾಯ್ದೆಯ ಅವಶ್ಯಕತೆ ಇದೆ. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ವೀರಾಪೂರ ಗ್ರಾಮದ ಘಟನೆಯ ಕುರಿತು ಗೃಹ ಇಲಾಖೆಗೆ ಸೂಕ್ತ ತನಿಖೆಯನ್ನು ಮಾಡಲು ಆದೇಶಿಸಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಮನವಿ ವೇಳೆ ಪ್ರೊ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಉಮೇಶ ಅರಳಿಗಿಡದ ರಾಘವೇಂದ್ರ ರಾಠೋಡ, ಸಿ.ಎಸ್. ಹೊನ್ನಾಪೂರ, ಮರಿಯಪ್ಪ ಮಾದರ, ಮುತ್ತು ಮಾದರ, ದರ್ಶನ್ ದೊಡ್ಡಮನಿ, ಶರಣಪ್ಪಹಲಗಿ, ನೀಲಪ್ಪ ಗುಡಿಮನಿ, ಮಂಜುನಾಥ ಮಾದರ, ಮೈಲಾರಪ್ಪ ಮೂಲಿಮನಿ, ಕರಿಯಪ್ಪ ಅರಳಿಗಿಡದ, ಭೀಮಪ್ಪ ಮೇಟಿ, ಅಲ್ಲಾಭಕ್ಷಿ ಮುಚ್ಚಾಲಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...