ಕಳವು, ಮೋಸ, ವಂಚನೆ ಪ್ರಕರಣಗಳಲ್ಲಿ ಒಟ್ಟು ₹3.68 ಕೋಟಿ ಮೊತ್ತದ ಚಿನ್ನ, ಬೆಳ್ಳಿ ಆಭರಣಗಳು, ಮೊಬೈಲ್ ಫೋನ್ ಗಳು, ವಾಹನಗಳು ಸೇರಿದಂತೆ ಇತರೆ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಲಾಯಿತು.
ಗದಗ ನಗರದ ಪೊಲೀಸ್ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 2025ರ ಆಗಸ್ಟ್ 1ರಿಂದ ಪ್ರಸಕ್ತ ವರ್ಷದ ಜುಲೈ 31ರವರೆಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಹಲವು ಪ್ರಕರಣಗಳಲ್ಲಿ ವಶವಡಿಸಿಕೊಂಡ ಬೆಲೆಬಾಳುವ ವಸ್ತುಗಳನ್ನು ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು ಮಾಲೀಕರಿಗೆ ವಿತರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಡಿವೈಎಸ್ ಪಿಗಳಾದ ಮುರ್ತುಜಾ ಖಾದ್ರಿ, ಪ್ರಭುಗೌಡ ಕಿರೇದಳ್ಳಿ, ವಿದ್ಯಾನಂದ ನಾಯಕ ಇದ್ದರು.




