ಗದಗ | ವಿಕಸಿತ ಭಾರತ–G RAM G ಯೋಜನೆಯಡಿ ಜಾಬ್ ಕಾರ್ಡ್ ಅಭಿಯಾನ

Date:

“ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–G RAM G ಯೋಜನೆಯಡಿ ಶಿರಹಟ್ಟಿ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಅಗಸ್ಟ 15 ರಿಂದ ಹಮ್ಮಿಕೊಳ್ಳಲಾಗುತ್ತಿದೆ” ಎಂದು ಹಾವೇರಿ ಜಿಲ್ಲೆಯ ಶಿರಹಟ್ಟಿ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹೇಳಿದರು.

- Advertisement -

“ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆಯ ಮುಂದುವರಿದ ಅಥವಾ ಪರ್ಯಾಯ ಆವೃತ್ತಿಯಂತೆ ಕಾಣಿಸುತ್ತಿರುವ ಈ ಯೋಜನೆ, ಗ್ರಾಮೀಣ ಕಾರ್ಮಿಕರಲ್ಲಿ ಹೊಸ ಭರವಸೆ ಮೂಡಿಸಿದೆ. ಈ ಹಿಂದೆ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ಮನರೇಗಾ ಯೋಜನೆಯಡಿ ದಾಖಲೆಯ ಪ್ರಮಾಣದಲ್ಲಿ ಮಾನವ ದಿನಗಳ ಸೃಷ್ಟಿಯಾಗಿತ್ತು. ಹೊಸದಾಗಿ ಉದ್ಯೋಗ ಬಯಸುವ ಅರ್ಹ ಗ್ರಾಮೀಣ ಕುಟುಂಬಗಳ ಫಲಾನುಭವಿಗಳಿಗೆ ಅಂದರೆ ಪರಿಶಿಷ್ಟ ಜಾತಿ, ಪಂಗಡದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ನೇತೃತ್ವದ ಕುಟುಂಬದವರು, ಭೂ ರಹಿತ ಕೂಲಿ ಕಾರ್ಮಿಕರು ಸೇರಿದಂತೆ ಉದ್ಯೋಗ ಕೇಳುವ ಎಲ್ಲ ಅರ್ಹರಿಗೆ ತತ್ ಕ್ಷಣವೇ ಜಾಬ್ ಕಾರ್ಡ್ ನೀಡುವ ಉದ್ದೇಶದಿಂದ ಆಗಸ್ಟ್ 15ರಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸುವ ಹಿನ್ನೆಲೆಯಲ್ಲಿ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿಯೂ ಅಗತ್ಯ ಜಾಬ್ ಕಾರ್ಡ್ ಮೇಳ ನಡೆಸಿ, ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಾನವ ದಿನಗಳ ಸೃಷ್ಟಿಗೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶ ಹೊಂದಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರಿಶೀಲಿಸುವುದು, ಅಗತ್ಯವಿರುವವರಿಗೆ ಹೊಸ ಜಾಬ್ ಕಾರ್ಡ್ ಮಾಡಿಸಿಕೊಡುವುದು, ಜಾಬ್ ಕಾರ್ಡ್ ನವೀಕರಣ ಹಾಗೂ e-KYC ಪ್ರಕ್ರಿಯೆ ಪೂರ್ಣಗೊಳಿಸುವುದು ಸೇರಿದಂತೆ ಉದ್ಯೋಗದ ಬೇಡಿಕೆಯನ್ನು ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆಯನ್ನು ಗ್ರಾಮ ಪಂಚಾಯತಿ ಯಲ್ಲಿ ಮಾಡಲಾಗುತ್ತಿದೆ ಇದರ ಜೊತೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ-ಮನೆ ಭೇಟಿ ಮೂಲಕ ಸಾರ್ವಜನಿಕರಿಗೆ ಯೋಜನೆಯ ಕುರಿತು ಮಾಹಿತಿ ನೀಡುವುದು, ಗ್ರಾಮ ಮಟ್ಟದಲ್ಲಿ ಸಭೆಗಳನ್ನು ನಡೆಸುವುದು, ಪೋಸ್ಟರ್ ಹಾಗೂ ಬ್ಯಾನರ್‌ಗಳ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜಾಬ್ ಕಾರ್ಡ್ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲು ಸೂಚಿಸಲಾಗಿದೆ. ಗ್ರಾಮೀಣ ಜನರು ಯೋಜನೆಯ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ” ಎಂದರು.

“ಕಾರ್ಮಿಕರ ಹಾಜರಾತಿ, ಕಾಮಗಾರಿಗಳ ಪ್ರಗತಿ ಹಾಗೂ ಸಂಬಂಧಿತ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ನಿರ್ವಹಿಸುವುದಕ್ಕೂ ಒತ್ತು ನೀಡಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬಂಧಿತ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ ಅರ್ಹ ಕುಟುಂಬಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

“ಉದ್ಯೋಗದ ಅವಕಾಶವನ್ನು ಅರ್ಹ ಕುಟುಂಬಗಳ ಮನೆಬಾಗಿಲಿಗೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಜಾಬ್ ಕಾರ್ಡ್, e-KYC ಹಾಗೂ ಉದ್ಯೋಗದ ಬೇಡಿಕೆ ಸಲ್ಲಿಕೆ ಸೇರಿದಂತೆ ಯಾವುದೇ ಮಾಹಿತಿ ಅಗತ್ಯವಿದ್ದರೂ ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ಜನರ ಸಹಕಾರ ಅತ್ಯಂತ ಮುಖ್ಯ” ಎಂದು ತಿಳಿಸಿದರು.

ವಿಬಿ ಜಿ ರಾಮ್ ಜಿ ಯೋಜನೆಯನ್ನು ತಾಲೂಕಿನಾದ್ಯಂತ ಕಾರ್ಯಾನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಯಾರಿ ನಡೆದಿದೆ. ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನಕ್ಕೆ ಸಕಲ ಸಿದ್ಧತೆಗಳನ್ನು ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ. ಗ್ರಾಮೀಣ ಕಾರ್ಮಿಕರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕಾಗಿದೆ” ಎಂದು ಶಿರಹಟ್ಟಿ ತಾಪಂ ಕಾರಗಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...