ಗದಗ | ಕರ್ನಾಟಕ ಸಂಭ್ರಮ -50; ಬಾಲ ಪ್ರತಿಭೆಗಳಿಗಾಗಿ ಚಿಗುರು ಕಾರ್ಯಕ್ರಮ

Date:

ಕರ್ನಾಟಕ ಸುವರ್ಣ ಸಂಭ್ರಮ -50ರ ಅಂಗವಾಗಿ ಬಾಲಪ್ರತಿಭೆಗಳಿಗೆ ಪ್ರೋತ್ಸಾಹಿಸಲು ಗದಗನಲ್ಲಿ ಚಿಗುರು ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿತ್ತು.

ನಗರದ ಮುಂಡರಗಿ ರಸ್ತೆಯಲ್ಲಿನ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶುಕ್ರವಾರ (ಡಿ.08) ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಚಿಗುರು ಕಾರ್ಯಕ್ರಮವು ಒಂದು ಉತ್ತಮ ವೇದಿಕೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಇಂತಹ ಸಾಂಕ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಅವರು  ಪ್ರಾಸ್ತಾವಿಕವಾಗಿ ಮಾತನಾಡಿ, ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಬಾಲ ಪ್ರತಿಭೆಗಳಿಗೆ ಸೂಕ್ತ ವೇದಿಕೆ. ಇಲಾಖೆಯಿಂದ ಹಮ್ಮಿಕೊಳ್ಳಲಾಗುವ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಸದುಪಯೋಗ ಎಲ್ಲರೂ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಪ್ರೊ. ಎಸ್.ವೈ.ಚಿಕ್ಕಟ್ಟಿ, ಪ್ರಾಚಾರ್ಯ ವಿನಯ ಚಿಕ್ಕಟ್ಟಿ, ವಿವಿಧ ಕಲಾ ತಂಡಗಳ ಕಲಾವಿದರು, ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...