ಗದಗ | ಅನುದಾನ ಬಾರದೆ ಕಿರುಕುಳ ಆರೋಪ: KRDIL ಎಂಜಿನಿಯರ್ ನಾಪತ್ತೆ

Date:

ಗದಗ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್ ಡಿಐಎಲ್) ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಫರ್ವೀಜ್ ಧಾರವಾಡ ಎಂಬುವರು ನಾಪತ್ತೆಯಾಗಿದ್ದು, ಅವರು ಬರೆದಿದ್ದಾರೆ ಎಂಬ ಡೆತ್‌ನೋಟ್‌ನಲ್ಲಿ ಇಲಾಖೆ ಹಲವು ವರ್ಷಗಳಿಂದ ಅನುದಾನ ಬಾರದ ಕಾರಣ ಆಗಿರುವ ಸಮಸ್ಯೆಯಿಂದ ಮನನೊಂದು ಜೀವನವನ್ನು ಕೊನೆ ಮಾಡಿಕೊಳ್ಳುತ್ತಿರುವೆ ಎಂಬ ಉಲ್ಲೇಖವಿದೆ.

- Advertisement -

ಫರ್ವೀಜ್ ಬೆಂಗಳೂರಿನಲ್ಲಿ ಮೀಟಿಂಗ್ ಇರುವುದಾಗಿ ಹೇಳಿ, ಸೆಪ್ಟೆಂಬರ್ 13ರಂದು ಬೆಂಗಳೂರಿಗೆ ತೆರಳಿದ್ದರು. 14ರಂದು ಬೆಂಗಳೂರು ತಲುಪಿರುವುದಾಗಿ ಪತ್ನಿಗೆ ತಿಳಿಸಿದ್ದರು. ಆನಂತರ ಅವರ ಮೊಬೈಲ್ ಫೋನ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದೆ. ಕಚೇರಿ, ಕುಟುಂಬದವರನ್ನು ವಿಚಾರಿಸಿದ ಬಳಿಕ ಕುಟುಂಬದವರು 16ರಂದು ಬೆಟಗೇರಿ ಬಡಾವಣೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಡೆತ್‌ನೋಟ್‌ನಲ್ಲಿ ಏನಿದೆ?: ತನಿಖೆ ವೇಳೆ ಪತ್ತೆಯಾದ ಡೆತ್‌ನೋಟ್‌ನಲ್ಲಿ, ‘ಕೆಆರ್‌ಡಿಐಎಲ್ ಉಪವಿಭಾಗಕ್ಕೆ ಹಲವು ವರ್ಷಗಳಿಂದ ಅನುದಾನ ಬಿಡುಗಡೆಯಾಗದ ಕಾರಣ ಜನಪ್ರತಿನಿಧಿಗಳು ಹಾಗೂ ಕಾಮಗಾರಿ ನೀಡಿರುವ ಇಲಾಖೆಗಳು ಛೀಮಾರಿ ಹಾಕುತ್ತಿದ್ದಾರೆ. ಹಳೆಯ ಕಾಮಗಾರಿಗಾಗಳಿಗೆ ವಿವಿಧ ಇಲಾಖೆಯಿಂದ ಹಣ ಬಂದಿಲ್ಲ. ಕಾಮಗಾರಿ ಮುಕ್ತಾಯವಾದ ಪ್ರಕರಣಗಳಲ್ಲಿ ಗ್ರೂಪ್‌ ಲೀಡರ್‌ಗಳಿಗೆ ಹಣ ಪಾವತಿಸುವುದು ಕಷ್ಟವಾಗಿದೆ. ಅವರು ಮನೆ ಹಾಗೂ ಕಚೇರಿ ಬಳಿ ಬಂದು ಹಿಂಸೆ ನೀಡುತ್ತಿದ್ದಾರೆ’ ಎಂದು ಬರೆಯಲಾಗಿದೆ.

‘ಇದರಿಂದ ನನ್ನ ಮನಃಶಾಂತಿ ಹಾಳಾಗಿದ್ದು, ಜೀವನವನ್ನು ಕೊನೆ ಮಾಡುತ್ತಿದ್ದೇನೆ. ಉಪವಿಭಾಗಕ್ಕೆ ಅನುದಾನ ಕೊರತೆ ನೀಗಿಸಿ. ನನ್ನ ಕುಟುಂಬಕ್ಕೆ ಕಿರುಕುಳ ನೀಡಬೇಡಿ’ ಎಂದು ಕೆಆರ್‌ಡಿಐಎಲ್ ವ್ಯವಸ್ಥಾಪಕ ನಿರ್ದೇಶಕರ ಹೆಸರಿಗೆ ಪತ್ರ ಬರೆಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...

ವಿಜಯಪುರ | ಯತ್ನಾಳ ಬೆಂಬಲಿಗರಿಂದ 18 ಸಾವಿರ ಆಕ್ಷೇಪಣೆ ಸಲ್ಲಿಕೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಆಗ್ರಹ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ; ರೈತ ಚಂ.ಸು ಪಾಟೀಲ್ ಸಾವಯವ ಸಾಧನೆ

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು...