ಗದಗ | ಜಿಲ್ಲೆಯಲ್ಲಿ ಕನ್ನಡ ಭಾಷೆ ಅನುಷ್ಟಾನ ಪರಿಣಾಮಕಾರಿ ಆಗಲಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

Date:

“ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅನುಷ್ಟಾನ ಪರಿಣಾಮಕಾರಿ ಆಗಬೇಕು. ಪ್ರತಿ ತಿಂಗಳು 5 ನೇ ತಾರಿಖಿನೊಳಗಾಗಿ ಎಲ್ಲ ಇಲಾಖೆಯುವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕನ್ನಡ ಅನುಷ್ಟಾನ ವರದಿಯನ್ನು ಸಲ್ಲಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

- Advertisement -

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು ಅಥವಾ ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು , ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳು ಕನ್ನಡ ಭಾಷೆಯಲ್ಲಿಯೇ ಪತ್ರ ವ್ಯವಹಾರ ಮಾಡಬೇಕು. ಪ್ರತಿ ತಿಂಗಳು ಜರುಗುವ ಕೆಡಿಪಿ ಸಭೆ ಅಜೆಂಡಾದಲ್ಲಿ ಕನ್ನಡ ಅನುಷ್ಟಾನದ ವರದಿ ಬಗ್ಗೆಯೂ ಚರ್ಚೆಯಾಗಬೇಕು” ಎಂದರು.

“ಕನ್ನಡ ಭಾಷಾ ಅನುಷ್ಟಾನಗೊಳಿಸಲು ಪ್ರತಿ ತಾಲೂಕಿನಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮಿತಿ ಸಭೆ ಕರೆದು ತಾಲೂಕಿನಾದ್ಯಂತ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕೈಗೊಳ್ಳಬೇಕು. ಬೇರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಆಗಮಿಸಿದ ಬ್ಯಾಂಕ್ ನೌಕರರಿಗೆ ಕನ್ನಡ ಭಾಷಾ ತರಬೇತಿಯನ್ನು ಹಮ್ಮಿಕೊಂಡು ಅವರು ಕಡ್ಡಾಯವಾಗಿ ತರಬೇತಿಗೆ ಹಾಜರಾಗುವ ಹಾಗೆ ನೋಡಿಕೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನಿರ್ದೇಶನ ನೀಡಿದರು.

ಈ ವೇಳೆ “ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾದಿಕಾರಗಳೀಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಹೋಟೆಲ್ ಗಳು, ಸಾರಿಗೆ ವಿಭಾಗ ಗಳಲ್ಲಿ ಕನ್ನಡ ಭಾಷೆಯ ನಾಮಫಲಕಗಳ ಪ್ರದರ್ಶನದ” ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಡಿವೈಎಸ್ ಪಿ ಮುರ್ತುಜಾ ಖಾದ್ರಿ, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಕಿಶೋರ ಬಾಬು, ಕನ್ನಡ ಜಾಗ್ರತಿ ಸಮಿತಿಯ ಅಧಿಕಾರೇತರ ಸದಸ್ಯರು ಅಶೋಕ ಬರಗುಂಡಿ, ರಾಜಶೇಖರ ದಾನರೆಡ್ಡಿ, ಮುತ್ತು ಬಿಳಿಎಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ.ಎಂ. ತುಂಬರಮಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...