ಗದಗ | ಕನಕ -ಷರೀಫ್ ಕಾವ್ಯ ಪುರಸ್ಕಾರಕ್ಕೆ ಸಾಹಿತಿ ಎ.ಎಸ್ ಮಕಾನದಾರ ಆಯ್ಕೆ

Date:

ಹಿರಿಯ ಸಾಹಿತಿ, ಮಕಾನದಾರ ಸಾಹಿತ್ಯ ಪ್ರತಿಷ್ಠಾನ ಮತ್ತು ನಿರಂತರ ಪ್ರಕಾಶನದ ಸಂಚಾಲಕ ಎ.ಎಸ್. ಮಕಾನದಾರ ಅವರು 2024ನೇ ಸಾಲಿನ ರಾಜ್ಯ ಮಟ್ಟದ ಕನಕ-ಷರೀಫ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆಂದು ಆಯ್ಕೆ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಬಂಡಾಯ ಸಾಹಿತಿ ಡಾ. ಸತೀಶ್ ಕುಲಕರ್ಣಿ ಮತ್ತು ಕಾರ್ಯಕ್ರಮದ ಸಂಚಾಲಕ ಪ್ರೊ. ರಂಜಾನ್ ಹೆಬಸೂರ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

- Advertisement -

ರಾಜ್ಯ ಮಟ್ಟದ ಕನಕ-ಷರೀಫ್ ಕಾವ್ಯ ಪ್ರಶಸ್ತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸಲಹಾ ಸಮಿತಿ ಸದಸ್ಯ ಹಾಗೂ ಹಿರಿಯ ಕವಿ ಡಾ. ಚನ್ನಪ್ಪ ಅಂಗಡಿ ಅವರು 2022ನೇ ಸಾಲಿಗೆ, ಶಿಂಧನೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಹಾಗೂ ಹಿರಿಯ ವಿಮರ್ಶಕ ಡಾ. ಜಾಜಿ ದೇವೇಂದ್ರಪ್ಪ ಅವರು 2023ನೇ ಸಾಲಿಗೆ, ಕರ್ನಾಟಕ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪುರಸ್ಕಾರ ಪಡೆದ ನ್ಯಾಯಾಂಗ ಇಲಾಖೆಯ ನಿವೃತ್ತ ಉದ್ಯೋಗಿ ಹಾಗೂ ಹಿರಿಯ ಸಾಹಿತಿ ಎ.ಎಸ್. ಮಕಾನದಾರ ಅವರು 2024ನೇ ಸಾಲಿಗೆ ಮತ್ತು ಹಿರಿಯ ಅನುವಾದಕಿ ಹಾಗೂ ಪತ್ರಕರ್ತೆ ಮಂಜುಳಾ ಕಿರುಗಾವಲು ಅವರು 2025ನೇ ಸಾಲಿನ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ ಎಂದು ಆಯ್ಕೆ ಸಮಿತಿಯ ಅಧ್ಯಕ್ಷ ಡಾ. ಸತೀಶ್ ಕುಲಕರ್ಣಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಸದಸ್ಯರಾದ ಅಬ್ದುಲ್ ಹೈ ತೋರಣಗಲ್ಲು, ಶ್ರೀಶೈಲ ಮಾದಣ್ಣವರ, ರಂಜಾನ್ ಹೆಬಸೂರ, ದೀಪಾ ಗೋನಾಳ, ಡಾ. ವೇದಾ ರಾಣಿ ದಾಸನೂರ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು.

ಕನಕ-ಷರೀಫ್ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ವಿಜಯಕಾಂತ್ ಪಾಟೀಲ್, ಗಜಲ್ ಕವಿ ಕೊಪ್ಪಳ ಜಿಲ್ಲೆಯ ಅಲ್ಲಾ ಗಿರಿರಾಜ್, ದಾವಣಗೆರೆ ಜಿಲ್ಲೆಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಹಾಗೂ ಕವಿ ಬಿ. ಶ್ರೀನಿವಾಸ್, ಆಕಾಶವಾಣಿ ಧಾರವಾಡ ಕೇಂದ್ರದ ನಿರ್ದೇಶಕ ಹಾಗೂ ಕತೆಗಾರ ಬೆಳಗಾವಿ ಜಿಲ್ಲೆಯ ಡಾ. ಬಸು ಬೇವಿನಗಿಡ ಅವರು ಭಾಜನರಾಗಿದ್ದಾರೆ ಎಂದು ಇಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...