ಗದಗ | ಅಂತ್ಯಸಂಸ್ಕಾರ ಸಿದ್ಧತೆ ನಡೆಸುವಾಗ ಎಚ್ಚರವಾದ ವ್ಯಕ್ತಿ

Date:

ರೋಗಿ ಸತ್ತಿದ್ದಾನೆ ಎಂದು ವೈದ್ಯರು ದೃಢೀಕರಿಸಿದ್ದರಿಂದ ದೇಹವನ್ನು ಮನೆಗೆ ತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುವ ವೇಳೆ ಅಚ್ಚರಿಯ ರೀತಿಯಲ್ಲಿ ವ್ಯಕ್ತಿ ಎಚ್ಚರವಾದ ಘಟನೆ ಬೆಟಗೇರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

- Advertisement -

ಬೆಟಗೇರಿ ನಿವಾಸಿ 38 ವರ್ಷದ ನಾರಾಯಣ ವನ್ನಾಲ ಎಂಬ ವ್ಯಕ್ತಿ ಸತ್ತು ಬದುಕಿದವರು. ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ನಾರಾಯಣ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರು ಇವರಿಗೆ ಆರು ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿ, ಐಸಿಯುಗೆ ಸ್ಥಳಾಂತರಿಸಿದ್ದರು. ಬಳಿಕ ರೋಗಿ ಸತ್ತಿದ್ದಾನೆ ಎಂದು ದೃಢಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕುಟುಂಬದವರು ದೇಹವನ್ನು ಬೆಟಗೇರಿಯ ನಿವಾಸಕ್ಕೆ ತಂದು, ಅಂತ್ಯಸಂಸ್ಕಾರ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ಸಂಬಂಧಿಕರಿಗೆ ಕರೆ ಮಾಡಿ, ಅಂತ್ಯಸಂಸ್ಕಾರಕ್ಕೆ ಬರುವಂತೆ ತಿಳಿಸಿದ್ದರು. ನಗರದ ವಿವಿಧೆಡೆ ಶ್ರದ್ಧಾಂಜಲಿ ಪೋಸ್ಟರ್‌ಗಳನ್ನೂ ಹಾಕಿಸಿದ್ದರು.

ಈ ಸುದ್ದಿ ಓದಿದ್ದೀರಾ? ರೋಣ ತಹಶೀಲ್ದಾರ್ ಕಚೇರಿಯಲ್ಲಿ ನಿರ್ವಹಣೆ ಕೊರತೆ: ದುರ್ನಾತ ಬೀರುತ್ತಿವೆ ಶೌಚಾಲಯಗಳು

‘ಧಾರವಾಡದ ಆಸ್ಪತ್ರೆಯಿಂದ ಆಂಬುಲೆನ್ಸ್‌ನಲ್ಲಿ ತಂದ ದೇಹವನ್ನು ಕೆಳಕ್ಕೆ ಇಳಿಸುತ್ತಿದ್ದಂತೆ ನಾರಾಯಣ ಅವರು ಉಸಿರಾಡಲು ಆರಂಭಿಸಿ, ಕಣ್ಣು ಕೂಡ ಬಿಟ್ಟರು. ಇದರಿಂದ ನಮಗೆಲ್ಲಾ ಆಶ್ಚರ್ಯದ ಜತೆಗೆ ಸಂತೋಷವೂ ಆಯಿತು. ಕೂಡಲೇ ಅವರನ್ನು ಬೆಟಗೇರಿಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮುಂದುವರಿಸಿದ್ದೇವೆ’ ಎಂದು ವನ್ನಾಲ ಅವರ ಕುಟುಂಬದವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ಮಾರಕಾಸ್ತ್ರಗಳಿಂದ ಇರ್ಫಾನ್ ಮಲ್ಲಿಕ್‌ ಸಾಬ್ ತಹಶೀಲ್ದಾರ್ (34) ಎಂಭ ವ್ಯಕ್ತಿಯನ್ನು ಕೊಲೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...

ಗದಗ | ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ ಮಾಸಬಾರದು: ಗೋಕುಲನಾಥ

"ರೇಖೆಗಳು ಬದಲಾಗಬಹುದು, ಬಣ್ಣ ಬದಲಾಗಬಹುದು ಆದರೆ ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ...