ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣ ಮಾಡಿದ ಜಾಗವನ್ನು ಶುದ್ದಿಕರಿಸಿ ಅಪಮಾನಿಸಿ ಅಮಾನವೀಯತೆಯನ್ನು ಖಂಡಿಸಿ ನಾಳೆ ಅಗಸ್ಟ್ 18ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗದಗ ಪಟ್ಟಣದ ಗಾಂಧಿ ವೃತ್ತದ ಬಳಿ ಬೆಳಿಗ್ಗೆ 11ಕ್ಕೆ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅವಮಾನಿಸಿದ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಯಲ್ಲಿ ಎಲ್ಲ ಸಮಾನ ಮನಸ್ಕರು ಪಾಲ್ಗೊಳ್ಳಲು ಆಯೋಜಕರು ಮನವಿ ಮಾಡಿದ್ದಾರೆ.




