ಗದಗ | ದಲಿತರ ಮೇಲೆ‌ ದೌರ್ಜನ್ಯ, ಕೊಲೆ, ಅತ್ಯಾಚಾರ ನಡೆಯುತ್ತಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ

Date:

ರಾಜ್ಯದ ಜಿಲ್ಲೆಗಳಲ್ಲಿ, ದೇಶದ ಹಲವು ಕಡೆ ದಲಿತರ ಮೇಲೆ ದೌರ್ಜನಗಳು, ಮಹಿಳೆಯರ ಮೇಲಿನ ಅತ್ಯಾಚಾರಗಳು ನಡೆಯಿತ್ತಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟ, ದಲಿತ ವಿದ್ಯಾರ್ಥಿ ಒಕ್ಕೂಟಗಳು, ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಸೇರಿದಂತೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದವು.

- Advertisement -

 ನರಗುಂದ ಪಟ್ಟಣದ ಬಾಬಾಸಾಹೇಬ್ ಅರಮನೆ  (ಹಳೆ ಪುರಸಭೆ) ಆವರಣದಿಂದ ಮಾರ್ಕೆಟ್ ಮಾರ್ಗವಾಗಿ ಶಿವಾಜಿ ವೃತ್ತದ ವರೆಗೆ ರ‍್ಯಾಲಿ ನಡೆಸಿ, ದಲಿತರ ಮೇಲಿನ ದೌರ್ಜನ್ಯ, ಅತ್ಯಾಚಾರ  ಹಾಗೂ ಕೊಲೆ ಮಾಡಿದವರ ವಿರುದ್ದ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ಸೇರಿದಂತೆ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ರಾಯಚೂರು ಜಿಲ್ಲೆಯಲ್ಲಿ ದಲಿತರ ಸತತ ಮೂರು ಕೊಲೆಗಳು, ಬಿಜಾಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ 17 ವರ್ಷದ ಯುವತಿಯ ಕೊಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಗುಡಿ ಪ್ರವೇಶ ಮಾಡಿದ ದಲಿತರನ್ನು ಕಂಬಕ್ಕೆ ಕಟ್ಟಿ ತಳಿಸಿದ ಪ್ರಕರಣ ಸೇರಿದಂತೆ ದೇಶದಾದ್ಯಂತ ದಲಿತರ ಮೇಲಿನ ದೌರ್ಜನ್ಯಗಳು ನಡೆಯುತ್ತಲಿವೆ. ಇಂತಹ ಕೃತ್ಯಗಳು ಸಾಕಷ್ಟು ನಡೆಯುತ್ತಿವೆ” ಎಂದು ಪ್ರತಿಭಟನೆಯಲ್ಲಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

“ಈ ಅತ್ಯಾಚಾರ ಮತ್ತು ಕೊಲೆಗೆ ಒಳಪಟ್ಟವರಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಇದ್ದು, ಇಂತಹ ಕೃತ್ಯಗಳನ್ನು ಖಂಡಿಸಲು ಇಂದು ನಗರದ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಹ ಭಾಗಿಯಾಗಿದ್ದಾರೆ. ಈ ಪ್ರತಿಭಟನೆಗೆ ನರಗುಂದ ಪಟ್ಟಣದ ದಲಿತ ಸಂಘಟನೆಗಳ ಒಕ್ಕೂಟ, ದಲಿತ ವಿದ್ಯಾರ್ಥಿ ಒಕ್ಕೂಟಗಳು, ಕನ್ನಡಪರ ಸಂಘಟನೆಗಳು ರೈತ ಪರ ಸಂಘಟನೆಗಳು, ಸಾವಿರಾರು ವಿದ್ಯಾರ್ಥಿಗಳು ಸೇರಿದಂತೆ ಕೈಜೋಡಿಸಿದ್ದಾರೆ” ಎಂದು ಡಿಎಸ್ಎಸ್ ತಾಲೂಕು ಸಂಚಾಲಕ ದತ್ತು ಜೋಗನ್ನವರ ಹೇಳಿದರು.

“ಅತ್ಯಾಚಾರ ಮತ್ತು ಕೊಲೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅನ್ಯಾಯಕ್ಕೊಳಗಾದವರಿಗೆ ಕೂಡಲೇ ಸರ್ಕಾರ ನ್ಯಾಯ ಒದಗಿಸಿ, ಪರಿಹಾರ ಮತ್ತು ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಾವಿರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ದಲಿತಪರ ಸಂಘಟನೆಗಳ ಸದಸ್ಯರು, ಕನ್ನಡ ಪರ ಸಂಘಟನೆಗಳ ಸದಸ್ಯರು, ದಲಿತ ವಿದ್ಯಾರ್ಥಿ ಒಕ್ಕೂಟದ ಸದಸ್ಯರು, ರೈತ ಪರ ಸಂಘಟನೆಯ ಸದಸ್ಯರು, ಸಾರ್ವಜನಿಕರು ಮತ್ತು ಸಾಮಾಜಿಕ ಹೋರಾಟಗಾರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...