ಗದಗ | ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನಕ್ಕಾಗಿ ಬೃಹತ್ ಪ್ರತಿಭಟನೆ

Date:

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಗದುಗಿನ ಶಾಸಕ ಎಚ್.ಕೆ. ಪಾಟೀಲ ಅವರನ್ನು ಕಡೆಗಣಿಸಿರುವದನ್ನು ಖಂಡಿಸಿ ಅಪಾರ ಪ್ರಮಾಣದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಮಂಗಳವಾರ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಗದಗ ನಗರದ ಕಾಟನ್‌ ಸೇಲ್‌ ಸೊಸೈಟಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯು, ಭೂಮರಡ್ಡಿ ವೃತ್ತ, ಮಹಾತ್ಮ ಗಾಂಧಿ ವೃತ್ತ, ಮಹೇಂದ್ರಕರ ಸರ್ಕಲ್‌, ಹುಯಿಲಗೋಳ ನಾರಾಯಣರಾವ್ ವೃತ್ತ, ಬಸವೇಶ್ವರ ವೃತ್ತ, ಪಂಚರ ಹೊಂಡ, ಜೋಡ ಮಾರುತಿ ದೇವಸ್ಥಾನ ಮಾರ್ಗವಾಗಿ ಮುಳಗುಂದ ನಾಕಾ ತಲುಪಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

 ಸಾವಿರಾರು  ಸಂಖ್ಯೆಯಲ್ಲಿದ್ದ ಅಭಿಮಾನಿಗಳು ಎಚ್‌.ಕೆ. ಪಾಟೀಲರ ಪರ ಘೋಷಣೆ ಕೂಗಿದರು. ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಫಲಕಗಳನ್ನು ಹಿಡಿದು ಮೆರವಣಿಗೆಯಲ್ಲಿ ಹೆಜ್ಜೆಹಾಕಿದರು. 

ಹಲವಾರು ಆಟೋಗಳು ಮೆರವಣಿಗೆಯೊಟ್ಟಿಗೆ ಸಾಗಿದವು. ಬಹುತೇಕರು ಪಾದಯಾತ್ರೆಯಲ್ಲಿ, ಇನ್ನು ಕೆಲವರು ಎತ್ತಿನಬಂಡಿಗಳು, ಟ್ರ್ಯಾಕ್ಟರ್‌ಗಳಲ್ಲಿ ತೆರಳಿದರು. ಕಹಳೆ, ತಮಟೆ ಸೇರಿದಂತೆ ವಾದ್ಯ ಮೇಳ ಹಾಗೂ ಹಾಡುಗಳು ಮೊಳಗಿದವು. ವಾದ್ಯಕ್ಕೆ ತಕ್ಕಂತೆ ಪ್ರತಿಭಟನಕಾರರು ಕುಣಿದಾಡಿದರು. ಕೆಲವೆಡೆ ಪಟಾಕಿ ಸಿಡಿಸಲಾಯಿತು. 

ಪ್ರತಿಭಟನಾಕಾರರು ಮುಳಗುಂದ ನಾಕಾ ತಲುಪಿ, ಪ್ರತಿಭಟನಾ ಸಭೆ ನಡೆಸಲಾಯಿತು. ಜಿಲ್ಲೆಯು ಸೇರಿದಂತೆ ಹಾವೇರಿ, ಬಾಗಲಕೋಟೆಯಿಂದ ಆಗಮಿಸಿದ್ದ ಮುಖಂಡರು, ಎಚ್‌.ಕೆ. ಪಾಟೀಲರಿಗೆ ಬೆಂಬಲ ವ್ಯಕ್ತಪಡಿಸಿದರು. 

“ಹಿರಿಯ ನಾಯಕರಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿರುವ  ಎಚ್‌.ಕೆ. ಪಾಟೀಲ ಅವರು ಸಮರ್ಥ ನಾಯಕ. ಹಲವು ಸಚಿವ ಸ್ಥಾನಗಳನ್ನು ನಿಭಾಯಿಸಿ, ಆಯಾ ಇಲಾಖೆ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಗದಗ ಮಾತ್ರವಲ್ಲದೆ, ಸುತ್ತಲಿನ ಜಿಲ್ಲೆಗಳ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮೊದಲ ಸಂಪುಟ ರಚನೆಯಲ್ಲೇ ಅವರಿಗೆ ಅವಕಾಶ ನೀಡಬೇಕಾಗಿತ್ತು, ಅವರನ್ನು ಅವಮಾನಿಸಿ, ಕಡೆಗಣಿಸಿದರೆ ಪಕ್ಷಕ್ಕೆ ಅಪಾಯ ಆಗುವದು ಗ್ಯಾರಂಟಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅವರಿಲ್ಲದೆ ಇಡೀ ಸಚಿವ ಸಂಪುಟ ವ್ಯರ್ಥವಾಗುತ್ತದೆ. ಹಿರಿಯರಿಲ್ಲದ ಮನೆಯಂತಾಗುತ್ತದೆ. ಸಂಪುಟ ವಿಸ್ತರಣೆ ಸಮಯದಲ್ಲಿ ಅವರಿಗೆ ಪ್ರಾಶಸ್ತ್ಯ ನೀಡಬೇಕು. ಇಲ್ಲದಿದ್ದರೆ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂದಿನ ದಿನಗಳಲ್ಲಿ ರಾಜ್ಯದ ಜನರು ಕಾಂಗ್ರೆಸ್‌ಗೆ ಪಾಠ ಕಲಿಸುತ್ತಾರೆ” ಎಂಬ ಎಚ್ಚರಿಕೆಯನ್ನೂ ನೀಡಿದರು.  

ಮುಳಗುಂದ ನಾಕಾದಲ್ಲಿ ಒಂದು ತಾಸು ರಸ್ತೆ ತಡೆದು, ಬಹಿರಂಗ ಸಭೆ ನಡೆಸಲಾಯಿತು. ಇದರಿಂದಾಗಿ ನಗರ ಪ್ರವೇಶಿಸುವ ಹಾಗೂ ನಿರ್ಗಮಿಸುವ ವಾಹನಗಳು ಪರ್ಯಾಯ ಮಾರ್ಗಗಳಲ್ಲಿ ಸಾಗಿದವು.

ಈ ವೇಳೆ ಟೈರ್‌ಗೆ ಬೆಂಕಿ ಹಚ್ಚಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಅವರನ್ನು ತಡೆದರು. ಈ ವೇಳೆ, ನೆರೆದಿದ್ದವರ ನಡುವೆ ನೂಕಾಟ ಉಂಟಾಯಿತು.  

ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆಯಾಯಿತು. ಜನರನ್ನು ನಿಯಂತ್ರಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಪೊಲೀಸರು ಹರಸಾಹಸಪಟ್ಟರು. ಮುಂಜಾಗ್ರತಾ ಕ್ರಮವಾಗಿ ವಿವಿಧೆಡೆ ಬ್ಯಾರಿಕೇಡ್ ಅಳವಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಸಿಬ್ಬಂದಿ ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...