ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

Date:

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ ಕೊಡುವಲ್ಲಿ ನಿಗಮದ ಅಧಿಕಾರಿಗಳು ವಿಫಲವಾಗಿದ್ದಾರೆ. ಸರ್ಕಾರದ ಯೋಜನೆಗಳು ನೀಡುವಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ, ಗದಗ ಜಿಲ್ಲಾ ಸ್ಲಂ ಸಮಿತಿ ಹಾಗೂ ಗದಗ ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿಯ ಪದಾಧಿಕಾರಿಗಳು ಗದಗ ಪಟ್ಟಣದ ನಿಗಮದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

- Advertisement -

ನಂತರ ಸಮಿತಿ ಅಧ್ಯಕ್ಷರು ಇಮ್ತಿಯಾಜ ಮಾನ್ವಿ ಮಾನತನಾಡಿ, “ಗದಗ ಜಿಲ್ಲೆಯಲ್ಲಿ ಸಾವಿರಾರು ಬಡ ಅಲ್ಪಸಂಖ್ಯಾತ ಸಮುದಾಯದ ಕುಟುಂಬಗಳಲ್ಲಿ ಕಟ್ಟಡ ಕಾರ್ಮಿಕರಾಗಿ, ಹಮಾಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರಾಗಿ ಹಾಗೂ ವಿವಿಧ ಶ್ರಮಜೀವಿಗಳಾಗಿ ಕೆಲಸ ಮಾಡುತ್ತಾ, ತಮ್ಮ ಜೀವನವನ್ನು ಸಾಗಿಸುತ್ತ ಬಂದಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

“ಸರ್ಕಾರದಿಂದ ಅಲ್ಪಸಂಖ್ಯಾತರ ಬಡ ಕುಟುಂಬಗಳು ಸ್ವಯಂ-ಉದ್ಯೋಗಕ್ಕಾಗಿ ಹಾಗೂ ಅಲ್ಪಸಂಖ್ಯಾತರ ಬಡ ವಿಧ್ಯಾರ್ಥಿಗಳಿಗೆ ಮುಂದಿನ ವಿಧ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ಸಹಾಯ ಧನಕ್ಕಾಗಿ ಕೊಟ್ಯಾಂತರ ಅನುದಾನವನ್ನು ಬಿಡುಗಡೆ ಮಾಡಲಾಗುತ್ತದೆ. ಆದರೆ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದ ಯೋಜನೆಗಳನ್ನು ಅನುಷ್ಠಾನಗೊಳಿಸದೇ ಅನ್ಯಾಯ ಮಾಡಲಾಗುತ್ತದೆ. ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಬೆಳವಣೆಗಾಗಿ ನೆರವು ನೀಡಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅರ್ಹರಿಗೆ ಯೋಜನೆಗಳನ್ನು ನೀಡುವುದನ್ನು ಬಿಟ್ಟು ಮಧ್ಯವರ್ತಿಗಳ ಮೂಲಕ ಕಮೀಷನ್ ಆಧಾರದಲ್ಲಿ ಯೋಜನೆಗಳನ್ನು ನೀಡುತ್ತಿರುವರು” ಎಂದು ಆರೋಪಿಸಿದರು.

“ನಿಗಮದಿಂದ ನೀಡಲಾಗುತ್ತಿರುವ ಗಂಗಾ ಕಲ್ಯಾಣ, ಅರಿವು ಯೋಜನೆ, ಮೈಕ್ರೊ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಭೂ ಒಡೆತನ, ಪ್ರವಾಸಿ ಟ್ಯಾಕ್ಷಿ ಹಾಗೂ ಹಲವಾರು ಜನಪರವಾದ ಯೋಜನೆಗಳಿಗೆ ನೂರಾರು ಕೋಟಿ ಅನುದಾನ ಬಿಡುಗಡೆ ಆಗಿರುತ್ತದೆ. ಗದಗ ಜಿಲ್ಲೆಯಲ್ಲಿ ಮಾತ್ರ ಅಧಿಕಾರಿಗಳ ತಾರತಮ್ಮದಿಂದ ಸಾವಿರಾರು ಬಡ ಕುಟುಂಬಗಳು ಯೋಜನೆಗಳಿಗೆ ಅರ್ಜಿಗಳನ್ನು ಹಾಕಿ ಕಚೇರಿಗಳಿಗೆ ಅಲೆಯುತ್ತಿರುವರು” ಎಂದರು.

“ಕೊಡಲೇ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿಗೆ ಅಧಿಕಾರಿಗಳು ಕಡಿವಾಣ ಹಾಕಿ ಅಲ್ಪಸಂಖ್ಯಾತರ ಜನರು ನೇರವಾಗಿ ಕಚೇರಿಗೆ ಬಂದು ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಹಾಕುವ ವ್ಯವಸ್ಥೆ ಮಾಡಬೇಕು. ಕಳೆದ ಹಲುವಾರು ವರ್ಷಗಳಿಂದ ನಿಗಮದಲ್ಲಿ ಕೆಲಸ ಮಾಡುತ್ತ ಜನರಿಗೆ ಮೋಸ ಮಾಡುತ್ತಿರುವ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ನಮ್ಮ ಬೇಡಿಕೆಗಳಿಗೆ ನಿಗಮದ ವ್ಯವ್ಥಾಪಕರು ನಿರ್ಲಕ್ಷö್ಯ ಮಾಡಿದರೆ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು” ಎಂದು ಮನವಿ ಮೂಲಕ ಎಚ್ಚರಿಸಲಾಗಿದೆ.

ಈ ಸಂದರ್ಭದಲ್ಲಿ ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಎಂ.ಬಿ.ನದಾಫ ವಕೀಲರು, ಮುಖಂಡರಾದ ಶರಣಪ್ಪ ಸೂಡಿ, ಇಬ್ರಾಹಿಂ ಮುಲ್ಲಾ, ಮೆಹಬೂಬಸಾಬ ಬಳ್ಳಾರಿ, ರವಿ ಗೋಸಾವಿ, ಮಕ್ತುಮಸಾಬ ಮುಲ್ಲಾನವರ, ನಜಮುನಿಸಾ ಮುರಗೋಡ, ನಾಗರತ್ನ ಬನಗಾರ, ಶೌಕತಅಲಿ ಶಿರಹಟ್ಟಿ, ಹುಸೇನ ಮುಲ್ಲಾನವರ, ಶಂಕ್ರಪ್ಪ ರೋಣದ, ಜಿಲ್ಲಾ ಸ್ಲಂ ಸಮಿತಿ ಮತ್ತು ಅಲ್ಪಸಂಖ್ಯಾತರ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21)...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...