ಗದಗ | ನೀರು ಪಾಲಾದ ಬಾಲಕರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ

Date:

Advertisements

ಗದಗ ನಗರದ ರಹಮತ್ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿರುವ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟದಟಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟಿಲ್‌ ಅವರು ಮೃತ ಬಾಲಕರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಚೆಕ್‌ ವಿತರಣೆ ಮಾಡಿದರು.

ಗದಗನ ರೆಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿರುವ ಹೊಂಡದಲ್ಲಿ ಆಗಸ್ಟ್‌ 15ರಂದು ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಆಗಸ್ಟ 15 ರಂದು ನಡೆದಿತ್ತು. ರೆಹಮತ್ ನಗರದ ಮಹಮದ್‌ ಅಮೀನ್(12) ಹಾಗೂ ಸಂತೋಷ‌ ಕುಂಬಾರ(14) ಎಂಬ ಬಾಲಕರು ‌ಮೃತಪಟ್ಟಿದ್ದರು.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟಿಲ್‌, ಮುಖ್ಯಮಂತ್ರಿಯವರು ಮೃತ ಬಾಲಕರ ಕುಟುಂಬಕ್ಕೆ ಮುಖ್ಯಮಂತ್ರಿಗಳ‌ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ನೀಡುವ ಭರವಸೆ ನೀಡಿದ್ದರು. ಅಲ್ಲದೇ ಅಂದು ಮೃತ ಬಾಲಕರ ಮನೆಗಳಿಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನವನ್ನೂ ಹೇಳಿದ್ದರು. ಇದೀಗ ಪರಿಹಾರ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಮೃತ ನಗರೋತ್ಥಾನ ಯೋಜನೆ; ಕಾಮಗಾರಿ ಪರಿಶೀಲನಾ ಸಭೆ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕೃಷ್ಣ ಪರಾಪೂರ, ಪ್ರಭು ಬುರಬುರೇ, ಬಿ‌ ಬಿ ಅಸೂಟಿ, ಅಶೋಕ ಮಂದಾಲಿ, ಎಸ್ ಎನ್ ಬಳ್ಳಾರಿ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಮಹನೀಯರ ಪಾತ್ರ ಅಪಾರ: ಸಚಿವ ಎಚ್.ಕೆ.ಪಾಟೀಲ

"ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಚಳುವಳಿಯ ಇತಿಹಾಸ ರೋಚಕವಾಗಿದ್ದು, ಜಿಲ್ಲೆಯ...

ಗದಗ | ದೇವರ ಹೆಸರಿನಲ್ಲಿ ಮೌಢ್ಯ, ಕಂದಾಚಾರ: ತಡೆಗಟ್ಟುವಂತೆ ಡಿಎಸ್ಎಸ್ ಮನವಿ

"ನರಗುಂದ ಪಟ್ಟಣದಲ್ಲಿ ದೇವರ ಹೆಸರುಗಳನ್ನು ಇಟ್ಟುಕೊಂಡು ಜನರಿಗೆ ಮೌಡ್ಯತೆ ಮತ್ತು ಕಂದಾಚಾರಗಳನ್ನು...

ಗದಗ | ಭಾವನೂರು ಗ್ರಾಮದಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಸಾರ್ವಜನಿಕರ ಜ್ಞಾನದಾಹ ನೀಗಿಸುವಲ್ಲಿ ಗ್ರಾಮೀಣ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ...

ಗದಗ | ಸಕಾಲ- ಗಡುವು ಮೀರಿದ ಅರ್ಜಿಗಳ ಶೀಘ್ರ ವಿಲೇವಾರಿಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಸಾರ್ವಜನಿಕರಿಗೆ ಸರ್ಕಾರದ ಎಲ್ಲ ಸೇವೆಗಳು ನಿಗದಿತ ಅವಧಿಯಲ್ಲಿ ಜನರಿಗೆ ತಲುಪುವಂತೆ ಮಾಡುವ...

Download Eedina App Android / iOS

X