“ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಬಡವರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಉತ್ತಮ ಗುಣಮಟ್ಟದ ಎಲ್ಲ ಸೌಲಭ್ಯಗಳೊಂದಿಗೆ ಅನೂಕುಲವಾಗುತ್ತಿರುವ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಧ್ಯದ ಪರಿಸ್ಥಿತಿ ಗಮನಿಸಿದರೆ ಈಗಿನ ನಿರ್ದೇಶಕರು ಸಂಸ್ಥೆಯನ್ನು ದಿವಾಳಿ ಎಬ್ಬಿಸುತ್ತಿದ್ದಾರೆ. ಕೂಡಲೇ ಸಚಿವರು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳವೇಕು” ಎಂದು ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
“ಇಲ್ಲಿ ಸೂಕ್ಷ್ಮವಾಗಿ ಗಮನಿಸಬೇಕಾದ ಅಂಶವೆಂದರೆ ಆಕ್ರಮ ನೇಮಕಾತಿ, ಕಳಪೆಮಟ್ಟದ ಔಷಧಿ, ಟೆಂಡರ್ ಪ್ರಕ್ರಿಯೆಯಲ್ಲಿ ಗೋಲ್ಮಾಲ್, ದಲಿತರ ಮೇಲೆ ದೌರ್ಜನ್ಯ, ಮಹಿಳಾ ಅಧಿಕಾರಿಗಳ ಮೇಲೆ ದೌರ್ಜನ್ಯ, ಸರ್ಕಾರಿ ವಾಹನಗಳ ದುರ್ಬಳಕೆ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬಹುದೊಡ್ಡದಿದೆ” ಎಂದು ಆರೋಪಿಸಿದರು.
“ಈಗಾಗಲೇ ನಿರ್ದೇಶಕರ ಮೇಲೆ ಲೋಕಾಯುಕ್ತ ಕಚೇರಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಪ್ರಕರಣಗಳು ದಾಖಲಾಗಿವೆ. ಇನ್ನೂ ಕೆಲವು ಪ್ರಕರಣಗಳು ತನಿಖೆ ಹಂತದಲ್ಲಿವೆ. ಹಾಗಾಗಿ ಅರ್ಹತೆ ಇಲ್ಲದಿದ್ದರೂ ನಿರ್ದೇಶಕರ ಸ್ಥಾನ ನೀಡಿದ್ದಾರೆ. ಈಗಾಗಲೇ ಇವರ ಅಧಿಕಾರಾವಧಿ ಪೂರ್ಣಗೊಂಡರೂ ಇನ್ನೂ ಇವರನ್ನೇ ಮುಂದುವರೆಸಿರುವುದನ್ನು ಗಮನಿಸಿದರೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಕಾನೂನು ಸಚಿವರು ಹಾಗೂ ಗದಗ ಜಿಲ್ಲೆಯ ಸಚಿವರು ಮಾನ್ಯ ಎಚ್.ಕೆ.ಪಾಟೀಲ್ ಸಾಹೇಬರು ಸಾರ್ವಜನಿಕರ ಅನುಕೂಲಕ್ಕಾಗಿ ಈ ಸಂಸ್ಥೆಗೆ ಹಲವಾರು ಯೋಜನೆಗಳನ್ನು ತಂದಿದ್ದು, ಸಂಸ್ಥೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿರುತ್ತಾರೆ. ಕಾರಣ ಕೂಡಲೇ ನಿರ್ದೇಶಕರು ನಡೆಸಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ಸಂಸ್ಥೆಯು ಆರ್ಥಿಕವಾಗಿ ನಷ್ಟ ಅನುಭವಿಸುತ್ತಿರುವುದನ್ನು ತಪ್ಪಿಸಬೇಕೆಂದು ಗದಗ ಜಿಲ್ಲೆಯ ಸಾರ್ವಜನಿಕರ ಪರವಾಗಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಒತ್ತಾಯಿಸುತ್ತದೆ” ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
“ಅರ್ಹತೆ ಇಲ್ಲದ ನಿರ್ದೇಶಕರನ್ನು ಈ ಕೂಡಲೇ ತೆಗೆದು ಹಾಕಿ ಅರ್ಹತೆ ಇರುವ ಹಿರಿಯ ಅಧಿಕಾರಿಯನ್ನು ನೇಮಕ ಮಾಡಬೇಕು” ಎಂದು ಸಮಿತಿಯ ಜಿಲ್ಲಾಧ್ಯಕ್ಷರು ಶಿವಾನಂದ ತಮ್ಮಣ್ಣವರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.





